ಮಸಾಲೆಗಳ ರಾಜ ಎಂಡಿಹೆಚ್ ಧರಂಪಾಲ್ ಗುಲಾಟಿ

ಪ್ರಪಂಚಾದ್ಯಂತ ನಾನಾ ಕಾರಣಗಳಿಂದಾಗಿ ಹರಡಿರುವ ಭಾರತೀಯರು ಉಳಿದೆಲ್ಲಾ ವಿಷಯಗಳಲ್ಲೂ ಅಲ್ಲಿಯ ಸ್ಥಳೀಯತನಕ್ಕೆ ಒಗ್ಗಿಕೊಂಡರೂ, ಊಟದ ವಿಷಯದಲ್ಲಿ ಮಾತ್ರಾ, ಇನ್ನೂ ಭಾರತೀಯತೆಯನ್ನು ಬಿಟ್ಟಿಲ್ಲ ಎಂದರೆ ತಪ್ಪಾಗಲಾರದು. ಪಿಜ್ಜಾ, ಪಾಸ್ತ ಬರ್ಗರ್ ಎಷ್ಟೇ ತಿಂದರೂ ಉತ್ತರ ಭಾರತೀಯರಾದರೆ ರೊಟ್ಟಿ ದಾಲ್ ಇನ್ನು ದಕ್ಷಿಣ ಭಾರತೀಯರಾದರೇ ಅನ್ನಾ ಸಾರು ಮೊಸರನ್ನ ತಿಂದರೇನೇ ಅವರಿಗೆ ಒಂದು ರೀತಿಯ ಸಂತೃಪ್ತಿ. ಹಾಗಾಗಿಯೇ ಭಾರತದಿಂದ ವಿದೇಶಕ್ಕೆ ಹೋಗುವ ಬಹುತೇಕರು ತಮ್ಮ ಚೀಲದಲ್ಲಿ ಭಾರತೀಯ ಸಾಂಬಾರು ಪುಡಿಗಳನ್ನು ತೆಗೆದುಕೊಂಡೇ ಹೋಗುತ್ತಿದ್ದರು. ಆ ಮೂಲಕ ಅಮ್ಮನ ಕೈರುಚಿಯನ್ನು ವಿದೇಶದಲ್ಲೂ… Read More ಮಸಾಲೆಗಳ ರಾಜ ಎಂಡಿಹೆಚ್ ಧರಂಪಾಲ್ ಗುಲಾಟಿ

ದೈವ ಸಂಕಲ್ಪ

ಈಗಾಗಲೇ ಹತ್ತು ಹಲವಾರು ಬಾರಿ ಬಾರಿ ತಿಳಿಸಿರುವಂತೆ ಬೆಂಗಳೂರಿನ ವಾಸಿಯಾಗಿದ್ದರೂ ನಮ್ಮೂರು ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣದ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರ ಜನರು ವಾಸಿಸುವ ಕೃಷಿಪ್ರಧಾನವಾದ ಗ್ರಾಮವಾದರೂ, ನಮ್ಮೂರಿನಲ್ಲಿರುವ ದೇವಾಲಯಗಳ ಸಂಖ್ಯೆ ಹತ್ತಕ್ಕೂ ಹೆಚ್ಚು. ನಮ್ಮೂರ ಗ್ರಾಮದೇವತೆಯ ಹಬ್ಬ ಪ್ರತೀ ವರ್ಷ ಯುಗಾದಿ ಕಳೆದು ಹದಿನೈದು ದಿನಗಳ ನಂತರ ಬರುವ ಗುರುವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಮೂರುವಾರಗಳ ಕಾಲ ಅದ್ದೂರಿಯಾಗಿ ನೂರಾರು ವರ್ಷಗಳಿಂದ ಸಂಭ್ರಮ ಸಡಗರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದುರಾದೃಷ್ಟವಷಾತ್ ಈ ಬಾರೀ ಕೋವಿಡ್ ಮಹಾಮಾರಿಯ ಕಾರಣದಿಂದಾಗಿ… Read More ದೈವ ಸಂಕಲ್ಪ

ಕ್ರಾಂತಿಕಾರಿ ಖುದಿರಾಮ್ ಬೋಸ್

ನಮ್ಮ ದೇಶಕ್ಕೆ ಸ್ವಾತಂತ್ರ ಬಂದಿದ್ದು, ಕೆಲವರ ಉಪವಾಸ ಸತ್ಯಾಗ್ರಹದಿಂದ ಎಂದು ನಂಬಿಸುವವರಿಗೆ, ಭಾರತಮಾತೆಯ ಚರಣಾರವಿಂದಗಳಿಗೆ ತನ್ನ 18 ನೇ ವಯಸ್ಸಿನ 8 ನೇ ತಿಂಗಳ 8 ನೇ ದಿನದಂದು ತನ್ನ ಪ್ರಾಣವನ್ನು ಅರ್ಪಿಸಿದ ಶ್ರೀ ಖುದಿರಾಮ್ ಬೋಸ್ ರಂತಹ ಲಕ್ಷಾಂತರ ವೀರಾಗ್ರಣಿಗಳ ತ್ಯಾಗ ಮತ್ತು ಬಲಿದಾನಗಳ ನೆನಪೇ ಇಲ್ಲದಿರುವುದು ಈ ದೇಶದ ದುರಂತವೇ ಸರಿ. … Read More ಕ್ರಾಂತಿಕಾರಿ ಖುದಿರಾಮ್ ಬೋಸ್

ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ

1 ರೂಪಾಯಿಗೆ ಹೊಟ್ಟೆ ತುಂಬಾ ಊಟ

ಅರೇ ಅಕ್ಕಿ, ಬೇಳೆ, ಗೋಧಿ ಹಿಟ್ಟು, ಎಣ್ಣೆ ಮತ್ತು ತರಕಾರಿಗಳ ಬೆಲೆ ಎಲ್ಲವೂ ಗಗನಕ್ಕೇರಿರುವಾಗ ಇದೇನಿದು 1 ರೂಪಾಯಿಗೆ ಹೊಟ್ಟೆ ತುಂಬಾ ಊಟಾನಾ? ಅದೂ ಈಗಿನ ಕಾಲದಲ್ಲಿ? ಸರ್ಕಾರವೇ ನಡೆಸುವ ಇಂದಿರಾ ಕ್ಯಾಂಟೀನ್ ನಲ್ಲಿಯೇ ಪ್ಲೇಟ್ ಊಟ ಒಂದಕ್ಕೆ 10 ರೂಪಾಯಿಗಳು ಇರುವಾಗ, ಕೇವಲ 1 ರೂಪಾಯಿಗೆ ಹೊಟ್ಟೆ ತುಂಬಾ ಊಟ ಹಾಕ್ತಾರೇ ಅಂತಾ ನಂಬುವುದು ಸ್ವಲ್ಪ ಕಷ್ಟವೇ ಅದರೂ ಇದು ದೂರದ ದೆಹಲಿಯಲ್ಲಿ ನಿತ್ಯ ಸತ್ಯವಾದ ಸಂಗತಿಯಾಗಿದೆ. ದೆಹಲಿಯ ಭೂಟೊ ವಾಲಿ ಗಲ್ಲಿಯಲ್ಲಿರುವ ನಂಗ್ಲೋಯಿ ಅವರ… Read More 1 ರೂಪಾಯಿಗೆ ಹೊಟ್ಟೆ ತುಂಬಾ ಊಟ

ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಇನ್ನು ಭಾರತೀಯ ಕ್ರಿಕೆಟ್ಟಿಗೆ ಕರ್ನಾಟಕದ ಕೊಡುಗೆ ಅನನ್ಯ ಮತ್ತು ಅವರ್ಣನೀಯ. ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯ್ಯದ್ ಕಿರ್ಮಾನಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ರಂತಹ ಅತ್ಯದ್ಭುತ ದಾಂಡಿಗರಾದರೇ, ಬಿ.ಎಸ್. ಚಂದ್ರಶೇಖರ್, ಪ್ರಸನ್ನ, ಅನಿಲ್ ಕುಂಬ್ಲೇ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ರಂತಹ ಉತೃಕ್ಷ್ಟ ಎಸೆತಗಾರನ್ನು ನೀಡಿದೆಯಲ್ಲದೇ, ಒಂದು… Read More ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ನಮ್ಮನೆ, 1000 “ಸಂಭ್ರಮ”

ಎಲ್ಲರ ಜೀವನದಲ್ಲಿ ಹದಿನೆಂಟು ಎನ್ನುವುದು ಒಂದು ಪ್ರಮುಖ ಘಟ್ಟ. ಹದಿನೆಂಟಕ್ಕೆ ಹದಿಹರೆಯ ಎನ್ನುತ್ತೇವೆ. ಹೆಣ್ಣು ಮಕ್ಕಳಿಗಂತೂ ವಯಸ್ಸು ಹದಿನೆಂಟಾಗುತ್ತಿದ್ದಂತೆಯೇ ಅಪ್ಪಾ ಅಮ್ಮಂದಿರು ಮದುವೆ ಮಾಡಲು ಸಿದ್ಧರಾಗುತ್ತಾರೆ. ಸರ್ಕಾರ ಗಂಡು ಹೆಣ್ಣು ಎಂಬ ತಾರತಮ್ಯವಿಲ್ಲದೇ ಹದಿನೆಂಟು ವರ್ಷ ದಾಟಿದವರಿಗೆ ವಾಹನಗಳನ್ನು ಚಲಾಯಿಸುವ ಪರವಾನಗಿ ನೀಡುವುದರ ಜೊತೆಗೆ ಮತದಾನದ ಹಕ್ಕನ್ನೂ ನೀಡಿ ದೇಶವನ್ನೇ ಚಲಾಯಿಸುವ ಜವಾಬ್ಧಾರಿಯನ್ನು ನೀಡಿದೆ. ಇಷ್ಟೆಲ್ಲಾ ಪೀಠಿಕೆ ಏಕಪ್ಪಾ ಎಂದರೆ, ಇಂದಿಗೆ ಸರಿಯಾಗಿ ನಮ್ಮ ಮನೆಗೆ ಹದಿನೇಳು ತುಂಬಿ ಹದಿನೆಂಟು ವರ್ಷಗಳಾಗುತ್ತಿದೆ. ಈಗಿನಂತೆ ಆಗ ಮನೆ ಕಟ್ಟಿಸುವುದು… Read More ನಮ್ಮನೆ, 1000 “ಸಂಭ್ರಮ”

ಮಕ್ಕಳ ಕವಿ ಜಿ. ಪಿ. ರಾಜರತ್ನಂ

ನರಕಕ್ಕ್ ಇಳ್ಸಿ, ನಾಲ್ಗೆ ಸೀಳ್ಸಿ, ಬಾಯ್ ಒಲಿಸಾಕಿದ್ರೂನೆ, ಮೂಗ್ನಲ್ ಕನ್ನಡ್ ಪದವಾಡ್ತೀನಿ!, ನನ್ ಮನಸನ್ನ್ ನೀ ಕಾಣೆ!ಯೆಂಡ ಓಗ್ಲಿ! ಯೆಡ್ತಿ ಓಗ್ಲಿ!, ಎಲ್ಲಾ ಕೊಚ್ಕೊಂಡ್ ಓಗ್ಲಿ!, ಪರ್ಪಂಚ್ ಇರೋ ತನಕ ಮುಂದೆ, ಕನ್ನಡ್ ಪದಗೊಳ್ ನುಗ್ಲಿ! ಹೀಗೆ ಕನ್ನಡಕ್ಕಾಗಿಯೇ ತಮ್ಮ ತನು ಮನ ಧನವನ್ನು ಮುಡುಪಾಗಿಟ್ಟ ಹಿರಿಯರಾದರೂ, ಕಿರಿಯರಿಗಾಗಿಯೇ ಶಿಶು ಸಾಹಿತ್ಯವನ್ನು ರಚಿಸಿ ಕನ್ನದ ಸಾಹಿತ್ಯವನ್ನು ಆಚಂದ್ರಾರ್ಕವಾಗಿ ಬೆಳಗುವಂತೆ ಮಾಡಿದ ಕನ್ನಡದ ಹಿರಿಯ ಬರಹಗಾರರಾದ ಶ್ರೀ ಜಿ. ಪಿ. ರಾಜರತ್ನಂ ಅವರೇ ನಮ್ಮ ಇಂದಿನ ಕನ್ನಡದ ಕಲಿಗಳು… Read More ಮಕ್ಕಳ ಕವಿ ಜಿ. ಪಿ. ರಾಜರತ್ನಂ

ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇವರು ಎಸ್.ಎ.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ರ್ಯಂಕ್ ಇನ್ನು ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದು ಪ್ರತಿಷ್ಟಿತ ಚೆನೈನ ಐಐಟಿಯಲ್ಲಿ ಪ್ರವೇಶ ಸುಲಭವಾಗಿ ಸಿಕ್ಕಿದರೂ ಅಲ್ಲಿಗೆ ಹೋಗದೇ ಬೆಂಗಳೂರಿನಲ್ಲಿಯೇ ಇಂಜೀನಿಯರಿಂಗ್ ಮುಗಿಸಿ, ನೆಮ್ಮದಿಯಾಗಿ ಕೈ ತುಂಬಾ ಸಂಬಳ ತರುವ ಉದ್ಯೋಗವನ್ನು ಬಿಟ್ಟು ಭಾರತೀಯ ವಾಯುಸೇನೆಗೆ ಸೈನಾಧಿಕಾರಿಗಳಾಗಿ ಸೇರಿ, 21ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ರಂಗಭೂಮಿ ಮತ್ತು ರೇಡಿಯೋ ನಾಟಕಗಳ ಕಡೆ ಆಕರ್ಷಿತರಾಗಿ, ಯಶಸ್ವೀ ನಟ ಎಂದು ಪ್ರಖ್ಯಾತರಾದ ನಂತರ ನೂರಾರು ಹಿಂದಿ ಮತ್ತು ಕನ್ನಡ‍ವೂ… Read More ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)