ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಕಿತ್ತೂರು ರಾಣಿ ಚೆನ್ನಮ್ಮ

ಕಿತ್ತೂರು ರಾಣಿ ಚೆನ್ನಮ್ಮ ಎಂದಾಕ್ಷಣ ಥಟ್   ಅಂತಾ ನಮ್ಮೆಲ್ಲರ ಕಣ್ಮುಂದೆ ಬರುವುದೇ ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ಸಿನಿಮಾದಲ್ಲಿ  ಹಿರಿಯ ನಟಿ ಬಿ ಸರೋಜಾ ದೇವಿ ಅವರು ಬ್ರಿಟೀಷರ ಅಧಿಕಾರಿ ಥ್ಯಾಕರೆ  ಅವರು ಕಪ್ಪ ಕೇಳಲು ಬಂದಾಗ,  ನೀವೇನು ಈ ನೆಲವನ್ನು ಉತ್ತಿರೇ? ಬಿತ್ತಿರೇ? ಬೆಳೆದರೇ? ನಿಮಗೇಕೆ ಕೊಡಬೇಕು ಕಪ್ಪಾ? ನಿಮಗೇಕೆ ಕೊಡಬೇಕು ಕಪ್ಪಾ? ಎಂದು ಅಬ್ಬಿರಿದು ಬಿಬ್ಬಿರಿದ ಸಂಭಾಷಣೆಯೇ ನಮ್ಮ ಕಿವಿಗೆ ಅಪ್ಪಳಿಸುವುದಲ್ಲದೇ,  ಅಂತಿಮವಾಗಿ ಆ ಯುದ್ಧದಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆವನ್ನು ಸೋಲಿಸಿದ್ದನ್ನು ನೋಡಿ ಹೆಮ್ಮೆ ಪಟ್ಟಿದ್ದೇವೆ. … Read More ಕಿತ್ತೂರು ರಾಣಿ ಚೆನ್ನಮ್ಮ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಲಾಲ್ ಬಹದ್ದೂರ್ ಶಾಸ್ತ್ರಿ

ನಮ್ಮ ದೇಶದಲ್ಲಿ ಅಧಿಕಾರವನ್ನು ಕೆಲವರು ಆಯ್ಕೆ ಮುಖಾಂತರ ದಕ್ಕಿಸಿಕೊಂಡು  ಹತ್ತಾರು ವರ್ಷಗಳ ಕಾಲ ದೇಶವನ್ನು ಆಳಿದರೂ ಹೇಳಿಕೊಳ್ಳುವ ಸಾಧನೆ ಮಾಡದೇ ಹೋಗುತ್ತಾರೆ. ಇನ್ನು ಹಲವರು ಜನರಿಂದ ರಾಜತಾಂತ್ರಿಕವಾಗಿ ಆಯ್ಕೆಯಾಗಿ ಅಧಿಕಾರದಲ್ಲಿ ಕೆಲವೇ ತಿಂಗಳುಗಳ ಕಾಲ ಇದ್ದರೂ ಇಡೀ ದೇಶವೇ ನೂರಾರು ವರ್ಷಗಳ ಕಾಲ ನೆನಪಿಸಿಕೊಳ್ಳುವಂತಹ ಸಾಧನೆಯನ್ನು ಮಾಡಿ ಎಲೆಮರೆ ಕಾಯಿಯಂತೆ ಹೋಗಿಬಿಡುತ್ತಾರೆ. ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ಗ್ರಿಗಳು ಎರಡನೇ ರೀತಿಯ ವ್ಯಕ್ತಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ಗ್ರಿಗಳು… Read More ಲಾಲ್ ಬಹದ್ದೂರ್ ಶಾಸ್ತ್ರಿ

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

ನಮಗೆಲ್ಲಾ ತಿಳಿದಿರುವಂತೆ ಆಗಸ್ಟ್ 15, 1947 ರಂದು ಸುಮಾರು 300 ವರ್ಷಗಳ ಕಾಲ ಬ್ರಿಟೀಶರ ದಾಸ್ಯದಿಂದ ಹೊರಬಂದು ಸ್ವತ್ರಂತ್ಯದೇಶವಾಯಿತು. ಆದರೆ ಹಾಗೆ ಸ್ವಾತ್ರಂತ್ಯವಾಗುಬುದಕ್ಕೂ ಮುನ್ನಾ ಧರ್ಮಾಧಾರಿತವಾಗಿ ಬ್ರಿಟೀಷರು ಭಾರತವನ್ನು ಮೂರು ಭಾಗಗಳನ್ನಾಗಿ ಮಾಡಿ ಭಾರತದ ಎಡ ಮತ್ತು ಬಲಗಳಲ್ಲಿ ಪೂರ್ವ ಮತ್ತು ಪಶ್ಛಿಮ ಪಾಕಿಸ್ಥಾನ (70ರ ದಶದಲ್ಲಿ ಸ್ವತಂತ್ರವಾದ ಬಾಂಗ್ಲಾ ದೇಶವಾಯಿತು) ಎಂದು ತುಂಡರಿಸಿ ಮಧ್ಯದ ಭಾಗವನ್ನು ಸ್ವತಂತ್ರ ಹಿಂದೂಸ್ಥಾನ ಎಂದು ಕರೆದು ಹೋದರು. ಹಾಗೆ ಭಾರತಕ್ಕೆ ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಭಾರತ ದೇಶ ಸಣ್ಣ ಸಣ್ಣದಾದ… Read More ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಇಪ್ಪತ್ತೊಂದು ವರ್ಷಗಳ ಹಿಂದೆ ಹಿಮಾಚಲ ಪ್ರದೇಶದ ಹಳ್ಳಿಯಿಂದ ನಿವೃತ್ತ ಶಿಕ್ಷಕರೊಬ್ಬರು 07/07/2000 ದಂದು ರಕ್ಷಣಾ ಸಚಿವಾಲಯಕ್ಕೆ ಪತ್ರವೊಂದನ್ನು ಬರೆದಿದ್ದು ಅದರಲ್ಲಿ, ರಾಷ್ಟ್ರೀಯ ಭದ್ರತೆಗೆ ಯಾವುದೇ ತೊಂದರೆ ಇಲ್ಲದಿದ್ದಲ್ಲಿ, ಕಾರ್ಗಿಲ್ ಯುದ್ಧದಲ್ಲಿ ನಮ್ಮ ಏಕೈಕ ಪುತ್ರ ವೀರ ಮರಣ ಪಡೆದ ಸ್ಥಳವನ್ನು ನಾನು ಮತ್ತು ನನ್ನ ಧರ್ಮಪತ್ನಿ ಭೇಟಿ ನೀಡಿ ನಮ್ಮ ಮಗನ ಮೊದಲ ವರ್ಷದ ಪುಣ್ಯತಿಥಿಯನ್ನು ಆಚರಿಸಲು ಅನುಮತಿ ನೀಡಬಹುದೇ? ನಿಮಗೆ ತೊಂದರೆ ಎನಿಸಿದಲ್ಲಿ ನಮ್ಮ ಕೋರಿಕೆಯನ್ನು ಹಿಂಪಡೆಯುತ್ತೇವೆ ಎಂಬುದಾಗಿ ಬರೆದಿದ್ದರು. ಇಂತಹ ಭಾವಾನಾತ್ಮಕ ಪತ್ರವನ್ನು ಓದಿದ… Read More ಕ್ಯಾ. ವಿಕ್ರಮ್ ಭಾತ್ರ ಎಂಬ ಅಸಲಿ ಹೀರೋ

ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಭಾರತೀಯ ಸೇನೆಗೂ ನಮ್ಮ ಕರ್ನಾಟಕದ ಕೊಡಗಿಗೂ ಒಂದು ರೀತಿಯ ಅವಿನಾಭಾವ ಸಂಬಂಧ. ಇಂದಿಗೂ ಸಹಾ ಕೊಡಗಿನ ಬಹುತೇಕ ಕುಟುಂಬದ ಒಬ್ಬ ಸದಸ್ಯನಾದರೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುತ್ತಾರೆ. ಸ್ವಾತಂತ್ರ್ಯ ಭಾರತದ ಪ್ರಥಮ ದಂಡನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರೂ ಕೊಡಗಿನವರೇ. ಅವರಂತೆಯೇ ಭಾರತದ ಭೂಸೇನೆಯ ದಂಡನಾಯಕರಾಗಿದ್ದ, ಅಪ್ಪಟ ಕನ್ನಡಿಗ ಜನರಲ್  ಕೊಡಂದೆರ ಸುಬ್ಬಯ್ಯ ತಿಮ್ಮಯ್ಯನವರು ಅರ್ಥಾತ್ ಕೆ. ಎಸ್ ತಿಮ್ಮಯ್ಯನವರು 30 ಮಾರ್ಚ್ 1906ರಲ್ಲಿ ಕೊಡಗಿನ ಮಡಿಕೇರಿಯ ಆಗರ್ಭ ಶ್ರೀಮಂತ ಪ್ಲಾಂಟರ್ ಆಗಿದ್ದ ತಿಮ್ಮಯ್ಯ ಮತ್ತು  ಸೀತವ್ವ ದಂಪತಿಗಳ… Read More ಜನರಲ್ ಕೆ. ಎಸ್ ತಿಮ್ಮಯ್ಯ ಅವರ ಜನ್ಮದಿನಾಚರಣೆ

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ