ತಲಕಾವೇರಿ, ತೀರ್ಥೋಧ್ಭವ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ

ಶೃಂಗೇರಿ ದಸರಾ

ನವರಾತ್ರಿ ನಮ್ಮ ರಾಷ್ಟ್ರೀಯ ಹಬ್ಬವಾಗಿದ್ದು ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ ಈ ರೀತಿಯ ದಸರಾ ಆಚರಣೆಗೆ ಮೂಲ ಪ್ರೇರಣೆ ಶೃಂಗೇರಿಯ ಶಾರದಾ ಪೀಠ ಎನ್ನುವ ಕುತೂಹಲಕಾರಿ ಸಂಗತಿ ಬಹುತೇಕರಿಗೆ ತಿಳಿದೇ ಇಲ್ಲವಾಗಿರುವುದು ವಿಪರ್ಯಾಸವೇ ಸರಿ. ನವರಾತ್ರಿಯ ಸಂದರ್ಭದಲ್ಲಿ ಶೃಂಗೇರಿಯಲ್ಲಿ ನಡೆಯುವ ವೈಭವೋಪೇತ ದಸರಾ ದರ್ಬಾರ್ ಆಚರಣೆಯ ಕುರಿತಾಗಿ ತಿಳಿಯೋಣ ಬನ್ನಿ. 1336 ರಲ್ಲಿ ಉತ್ತರಭಾರತದವನ್ನು… Read More ಶೃಂಗೇರಿ ದಸರಾ

ಮಡಿಕೇರಿ ದಸರಾ

ನಮ್ಮ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ದೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆ ಮತ್ತು ಆಚರಣೆಯ ಬಗ್ಗೆ ಸವಿಸ್ತಾರವಾಗಿ ತಿಳಿದು ಕೊಳ್ಳೋಣ. ಮೈಸೂರಿನ ದಸರಾಕ್ಕಿರುವ ಇತಿಹಾಸದಂತೆಯೇ ಮಡಿಕೇರಿ ದಸರಾಕ್ಕೂ ಪುರಾತನವಾದ ಇತಿಹಾಸವಿದ್ದು,… Read More ಮಡಿಕೇರಿ ದಸರಾ

ಪಿತೃಪಕ್ಷ

ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಆ ಐದು ಋಣಗಳೆಂದರೆ, ದೇವಋಣ, ಋಷಿಋಣ, ಪಿತೃಋಣ, ಭೂತಋಣ ಮತ್ತು ಸಮಾಜಋಣ. ಈ ಐದು ಋಣಗಳಲ್ಲಿ ಪಿತೃಋಣವನ್ನು ತೀರಿಸುವ ಸಲುವಾಗಿ ಮಾಡುವ ಪಕ್ರಿಯೆಯನ್ನೇ ಶ್ರಾಧ್ಧಕರ್ಮ ಅಥವಾ ಶ್ರಾದ್ಧ ಇನ್ನುಆಡು ಭಾಷೆಯಲ್ಲಿ ತಿಥಿ ಎನ್ನಲಾಗುತ್ತದೆ ಈ ಭೂಮಿಯಲ್ಲಿ ನಮ್ಮ ಜನನಕ್ಕೆ ಕಾರಣೀಭೂತರಾದ… Read More ಪಿತೃಪಕ್ಷ

ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ  ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ. ಒಂದು ಹಬ್ಬದ ಮೂಲಕ,  ಹೂವು, ಹಣ್ಣು, ಆಹಾರಗಳನ್ನು ಬೆಳೆಯುವ ರೈತರಿಗೆ, ಅದನ್ನು ಕೊಂಡು ಮಾರುವ ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ತಂದು ಕೊಟ್ಟರೆ, ಇನ್ನು ಹಬ್ಬದ ಸಮಯದಲ್ಲಿ ಊರಿಂದ ಊರಿಗೆ ಹೋಗುವ ಸಲುವಾಗಿ ಸಾರಿಗೆ ವ್ಯವಸ್ಥೆಯವರಿಗೆ, ಬಟ್ಟೆಗಳು, ಉಡುಗೆ ತೊಡುಗೆ, ಚಿನ್ನಾಭರಣದಿಂದ ಹೆಣ್ಣುಮಕ್ಕಳು ಬಳಸುವ ಅಲಂಕಾರಿಕ ವಸ್ತುಗಳಿಗೂ… Read More ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ಕಾರ ಹುಣ್ಣಿಮೆ

ಹೇಳಿ ಕೇಳಿ ಮನುಷ್ಯ ಸಂಘ ಜೀವಿ. ಹಾಗಾಗಿಯೇ ತಾನೊಬ್ಬನೇ ಒಂಟಿಯಾಗಿ ಇರಲು ಸಾಧ್ಯವಿರದೇ ಅನೇಕರ ಜೊತೆಗೆ ಗುಂಪು ಗುಂಪಾಗಿ ಒಟ್ಟೊಟ್ಟಿಗೆ ಒಂದು ಕಡೆ ವಾಸಿಸಲು ಆರಂಭಿಸಿದ ಕಾರಣದಿಂದಲೇ ಊರು ಮತ್ತು ಕೇರಿಗಳು ಆರಂಭವಾಯಿತು. ಕೇವಲ ಮನುಷ್ಯರೇ ತನ್ನೊಂದಿಗೆ ಇದ್ದರೆ ಸಾಲದು ತನ್ನ ಜೊತೆ ಪಶು ಪ್ರಾಣಿ ಪಕ್ಷಿಗಳೂ ಇದ್ದರೆ ಚೆನ್ನಾ ಎಂದೆನಿಸಿದಾಗ ಆತ ಕಾಡಿನಿಂದ ಸಾಧು ಪ್ರಾಣಿಗಳನ್ನು ಹಿಡಿದು ತಂದು ಅವುಗಳನ್ನು ಪಳಗಿಸಿ ತನ್ನ ಸಾಕು ಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಲ್ಲದೇ, ಅವುಗಳನ್ನು ತನ್ನ ದಿನನಿತ್ಯದ ಜೀವನ ಪದ್ದತಿಗಳಲ್ಲಿ ಭಾಗವಾಗುವಂತೆ… Read More ಕಾರ ಹುಣ್ಣಿಮೆ

ಹನುಮ ವರ್ಧಂತಿ

ಎಲ್ಲರೂ ಹನುಮ ಜಯಂತಿ ಎಂದು ಹೇಳುವಾಗ, ಇದೇನೂ ವರ್ಧಂತಿ ಎಂದು ಅಚ್ಚರಿ ಪಟ್ಟರೆ, ಮೃತಪಟ್ಟವರ ಹುಟ್ಟಿದ ಹಬ್ಬವನ್ನು ಜಯಂತಿ (ಗಾಂಧಿ ಜಯಂತಿ) ಎಂದು ಆಚರಿಸುತ್ತೇವೆ ಮತ್ತು ಬದುಕಿದ್ದವರ ಆಯಸ್ಸು ವೃದ್ಧಿಯಾಗುವ ಸಲುವಾಗಿ ವರ್ಧಂತಿ ಎಂದು ಆಚರಿಸುತ್ತೇವೆ. ಹನುಮಂತ ಚಿರಂಜೀವಿ ಆದ ಕಾರಣ ಆತನಿಗೆ ಸಾವಿಲ್ಲ. ಹಾಗಾಗಿ ಇಂದಿನ ದಿನವನ್ನು ಹನುವ ವರ್ಧಂತಿ ಎನ್ನುವುದೇ ಸೂಕ್ತ ಅಲ್ವೇ?… Read More ಹನುಮ ವರ್ಧಂತಿ

ಶ್ರೀರಾಮ ನವಮಿ ಸ್ಟ್ರೈಕ್

ಸರ್ಜಿಕಲ್ ಸ್ಟ್ರೈಕ್, ಸಾರಿಗೆ ಸ್ಟ್ರೈಕ್, ರೈತರ ಸ್ಟ್ರೈಕ್ ಕೇಳಿದ್ದಿವಿ ಇದೇನು ಹೊಸಾ ಶ್ರೀರಾಮ ನವಮಿ ಸ್ಟ್ರೈಕ್ ಅಂತಾ ಯೋಚನೆ ಮಾಡ್ತಿರ್ತೀರಿ ಅಂತ ನನಗೆ ಚೆನ್ನಾಗಿ ಗೊತ್ತು. ಇದುವರೆಗೂ ಯಾರಿಗೂ ಹೇಳಿದಿದ್ದ ಶ್ರೀರಾಮ ನವಮಿ ಸ್ಟ್ರೈಕ್ ಅಂತಹ ರೋಚಕ ಅನುಭವವನ್ನು ನಿಮ್ಮೊಂದಿಗೆ ಹಂಚಿಕೊಳ್ತೀನಿ. ಸುಮಾರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆಗ ತಾನೆ ಶುರುವಾಗಿದ್ದ ಸ್ಟಾರ್ಟಪ್ ಕಂಪನಿಯೊಂದರ ಎರಡನೇ ಉದ್ಯೋಗಿಯಾಗಿ ಸೇರಿಕೊಂಡಿದ್ದೆ. ಭಾರತೀಯರೊಬ್ಬರೇ ಅಮೇರಿಕಾದಲ್ಲಿ ಆರಂಭಿಸಿದ ಕಂಪನಿಯೊಂದರ ಶಾಖೆಯನ್ನು ಐಟಿ ಹಬ್ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನಲ್ಲಿ ಆರಂಭಿಸಿದ್ದರು. ಬೆಂಗಳೂರು… Read More ಶ್ರೀರಾಮ ನವಮಿ ಸ್ಟ್ರೈಕ್

ತದಿಗೆ/ಸೌಭಾಗ್ಯ ಗೌರಿ ವ್ರತ

ಸ್ವರ್ಣಗೌರಿ ಗೌರಿ ವ್ರತ ಗೊತ್ತು, ಮಂಗಳ ಗೌರಿ ವ್ರತ ಪೂಜೆ ಗೊತ್ತು. ಅದ್ರೇ ಇದೇನಿದು ತದಿಗೆ ಗೌರಿ ವ್ರತ ಅಥವಾ ಸೌಭಾಗ್ಯ ಗೌರಿವ್ರತ ಅಂತ ಯೋಚನೆ ಮಾಡುತ್ತಿದ್ದೀರಾ? ಚೈತ್ರ ಮಾಸದ ಮೊದಲ ದಿನ ಅಂದರೆ ಪಾಡ್ಯದಂದು ಮೊದಲ ಹಬ್ಬವಾದ ಯುಗಾದಿಯನ್ನು ಆಚರಿಸುತ್ತೆವೆ. ಇನ್ನು ಎರಡನೇ ದಿನ ಬಿದಿಗೆ ವರ್ಷತೊಡಕನ್ನು ಆಚರಿಸುತ್ತೇವೆ ಮತ್ತು ಈ ದಿನ ಚಂದ್ರನ ನೋಡಿದರೆ ಶುಭ ಎಂದು ಪರಿಗಣಿಸಲಾಗುತ್ತದೆ. ಯುಗಾದಿಯಾದ ಮೂರನೇ ದಿನ ತೃತೀಯ ಅಥವಾ ತದಿಗೆಯಂದು ಕೆಲವೆಡೆ ಗೌರಿಯ ವ್ರತವನ್ನು ಮಾಡುವ ಪದ್ದತಿ… Read More ತದಿಗೆ/ಸೌಭಾಗ್ಯ ಗೌರಿ ವ್ರತ