ನಾವೆಲ್ಲರೂ ಒಂದೇ..

ಕೆಲ ವರ್ಷಗಳ ಹಿಂದೆ ನಮ್ಮ ಅಜ್ಜಿಯವರು ಇನ್ನೂ ಬದುಕಿದ್ದರು. ಅದಾಗಲೇ ಅವರಿಗೆ 90+ ವರ್ಷಗಳಷ್ಟು ವಯಸ್ಸಾಗಿತ್ತು. ಸುಮಾರು 80+ ವರ್ಷಗಳ ಕಾಲ ಬಹಳ ಸ್ವಾಭಿಮಾನಿಯಾಗಿ ತನ್ನೆಲ್ಲಾ ಕೆಲಸವನ್ನು ಮಾಡಿಕೊಳ್ಳುತ್ತಾ ನಮ್ಮೂರಿನಲ್ಲಿಯೇ ಇದ್ದವರನ್ನು ವಯೋಸಹಜ ಕಾರಣಗಳಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೆವು. ಮೂರು ಗಂಡು ಮಕ್ಕಳು ಇಬ್ಬರು ಹೆಣ್ಣುಮಕ್ಕಳ ಹೆಮ್ಮೆಯ ತಾಯಿ. ಬೆಂಗಳೂರಿನಲ್ಲಿ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದರೆ ಮೈಸೂರಿನಲ್ಲಿ ಒಬ್ಬ ಮಗ ಮತ್ತು ಶಿವಮೊಗ್ಗದಲ್ಲಿ ಮತ್ತೊಬ್ಬ ಮಗಳಿದ್ದ ಕಾರಣ, ಅಂತಹ ಇಳೀ ವಯಸ್ಸಿನಲ್ಲಿಯೂ ಸ್ವತಃ ಅವರೇ… Read More ನಾವೆಲ್ಲರೂ ಒಂದೇ..

ಉಮಾ

ಆಗಷ್ಟೇ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿತ್ತು. ಕೆ.ಜಿ.ಎಫ್ ನಲ್ಲಿದ್ದ  ಅಂದಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ರಾಜಾರಾವ್ ಅವರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಸತವಾಗಿ ಏಳು ಗಂಡು ಮಕ್ಕಳ (ಅರು ಮಕ್ಕಳು ಹುಟ್ಟಿದ ಕೆಲವೇ ತಿಂಗಳುಗಳಲ್ಲಿ ಅಳಿದು ಹೋಗಿದ್ದವು) ನಂತರ ಅವರ  ಮನೆಯಲ್ಲಿ ಮೊತ್ತ ಮೊದಲಬಾರಿಗೆ  ಮಹಾಲಕ್ಷ್ಮಿಯ ಜನನವಾಗಿತ್ತು.  ರಾಯರ ಮನೆ ದೇವರು ಮೇಲುಕೋಟೆ ಯೋಗಾನರಸಿಂಹನಾಗಿದ್ದ ಕಾರಣ,  ಅವರಿಗೆ ತಮ್ಮ ಮಗಳ ಹೆಸರು  ಲಕ್ಷ್ಮಿಯ ಹೆಸರಿಡಬೇಕು ಎಂದಿತ್ತು. ಆದರೆ ಅವರ ಮಡದಿ ವಿಶಾಲಾಕ್ಷಿ ಅವರ ತಾಯಿಯವರು ತಮ್ಮ ಮನೆ ದೇವರು … Read More ಉಮಾ

ಬಾಲ್ಯದ ಬಯಾಸ್ಕೋಪ್

ಬೇಸಿಗೆಯಲ್ಲಿ ಪರೀಕ್ಷೆ ಮುಗಿದು ಫಲಿತಾಂಶ ಬಂದಿದ್ದೇ ತಡಾ ಗಂಟು ಮೂಟೆ ಕಟ್ಟಿಕೊಂಡು ತಾತನ ಮನೆಗೆ ಹೋಗುವುದು ನಮ್ಮ ಮನೆಯ ವಾಡಿಕೆ. ನಮ್ಮೂರಿಗೆ ಹೋಗಲು ಪ್ರಮುಖ ಆಕರ್ಷಣೆಯೆಂದರೆ ಅದೇ ಸಮಯದಲ್ಲಿ ಎರಡು ವಾರಗಳ ಕಾಲ ನಡೆಯುತ್ತಿದ್ದ ಊರ ಹಬ್ಬ, ಜಾತ್ರೆ, ದೇವಸ್ಥಾನದ ಮುಂದಿದ್ದ ಕಲ್ಯಾಣಿ, ಅಜ್ಜಿ ಮಾಡಿಕೊಡುತ್ತಿದ್ದ ಕೆಂಡ ರೊಟ್ಟಿ ಗಟ್ಟಿ ಚಟ್ನಿ ಮತ್ತು ಬೆಣ್ಣೆ, ತಾತನ ತೊಡೆ ಮೇಲೆ ಕುಳಿತುಕೊಂಡು ಕೇಳುತ್ತಿದ್ದ ಕಥೆಗಳಲ್ಲದೇ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಸಿನಿಮಾ ಪ್ರೊಜೆಕ್ಷನ್. ನಮ್ಮೂರು ಬಾಳಗಂಚಿ ಸುಮಾರು ಮುನ್ನೂರರಿಂದ ನಾಲ್ಕು… Read More ಬಾಲ್ಯದ ಬಯಾಸ್ಕೋಪ್

ಆಪದ್ಭಾಂಧವ ಅಪ್ಪ

ಮಾರ್ಚ್ ತಿಂಗಳು ಮುಗಿದು ಏಪ್ರಿಲ್ ಬಂದಿತೆಂದರೆ ಶಾಲೆಯಲ್ಲಿ ಪರೀಕ್ಷೆ ಎಲ್ಲವೂ ಮುಗಿದು ಫಲಿತಾಂಶವೂ ಬಂದು ಮುಂದಿನ ತರಗತಿಗಳು ಆರಂಭವಾಗುವವರೆಗೂ ಸುಮಾರು ಎರಡು ತಿಂಗಳುಗಳ ಕಾಲ ಬೇಸಿಗೆ ರಜೆ ಇರುತ್ತದೆ. ಈ ರಜೆಯಲ್ಲಿ ಹೊರಗೆ ಬಿಸಿಲಿನಲ್ಲಿ ಮಕ್ಕಳನ್ನು ಆಟಕ್ಕೆ ಕಳುಹಿಸಿದಲು ಭಯ ಇನ್ನು ಮಕ್ಕಳಿಗೋ ಮನೆಯಲ್ಲಿಯೇ ಕುಳಿತುಕೊಳ್ಳಲು ಬೇಜಾರು. ಹಾಗಾಗಿ ಇದಕ್ಕೆಲ್ಲವೂ ಸುಲಭ ಪರಿಹಾರವೆಂದೇ ಮಕ್ಕಳನ್ನು ದೂರದ ಅಜ್ಜಾ-ಅಜ್ಜಿಯ ಮನೆಗೆ ಕಳುಹಿಸಿ ಅಲ್ಲಿನ ಸುಂದರ ವಾತಾವರಣದಲ್ಲಿ ರಮಣೀಯ ಪ್ರಕೃತಿಯ ಮಡಿಲಲ್ಲಿ, ಬೆಟ್ಟ ಗುಡ್ಡಗಳು, ನದಿ, ಹಳ್ಳ ಕೊಳ್ಳಗಳು, ಹೊಲ… Read More ಆಪದ್ಭಾಂಧವ ಅಪ್ಪ

ಕಳೆದು ಹೋದ ಉಂಗುರ

ಅದು ಎಂಭತ್ತರ ದಶಕ. ಗಮಕ ಕಲೆ ನಮ್ಮ ತಂದೆಯವರಿಗೆ ನಮ್ಮ ತಾತ ಗಮಕಿ ನಂಜುಂಡಯ್ಯನವರಿಂದಲೇ ಬಂದಿತ್ತಾದರೂ, ಶೈಕ್ಷಣಿಕವಾಗಿ ಅಧಿಕೃತವಾದ ಪದವಿಯೊಂದು ಇರಲಿ ಎಂದು ಮಲ್ಲೇಶ್ವರದ ಗಾಂಧೀ ಸಾಹಿತ್ಯ ಸಂಘದಲ್ಲಿ ಗುರುಗಳಾದ ಶ್ರೀ ನಾರಾಯಣ್ ಅವರು ನಡೆಯುತ್ತಿದ್ದ ಗಮಕ ಪಾಠ ಶಾಲೆ ಮೂಲಕ ಗಮಕ ವಿದ್ವತ್ ಪರೀಕ್ಷೆಯನ್ನು ಕಟ್ಟಿದ್ದರು. ಪರೀಕ್ಷೆ ಎಲ್ಲವೂ ಸುಲಲಿತವಾಗಿ ಮುಗಿದು ಎಲ್ಲರೂ ಅತ್ಯುತ್ತಮವಾದ ಫಲಿತಾಂಶ ಪಡೆದಿದ್ದ ಕಾರಣ ಅದರ ಸಂಭ್ರಮಾಚರಣೆಗೆಂದು ಕುಟುಂಬ ಸಮೇತವಾಗಿ ಎಲ್ಲಾದರೂ ಪ್ರವಾಸಕ್ಕೆ ಹೋಗಬೇಕೆಂದು ನಿರ್ಧರಿಸಿ, ಅದೊಂದು ಭಾನುವಾರ ಬೆಳಿಗ್ಗೆ 9.00ಘಂಟೆಯ… Read More ಕಳೆದು ಹೋದ ಉಂಗುರ

ವಿಕ್ರಮ ವಾರಪತ್ರಿಕೆಯಲ್ಲಿ ರಾಜಶೇಖರ್ (ರಾಜಾ) ಸ್ಮರಣೆ

ನನ್ನನ್ನು ವಯಕ್ತಿಕವಾಗಿ ಬಾಲ್ಯದಿಂದಲೂ ಬಲ್ಲ ಮತ್ತು ನನ್ನ ಬೆಳವಣಿಗೆಯನ್ನು ಹತ್ತಿರದಿಂದ ಗಮನಿಸುತ್ತಾ ನಮ್ಮ ಕುಟುಂಬಕ್ಕೆ ಆತ್ಮೀಯರಾಗಿದ್ದ ಶ್ರೀ ರಾಜಶೇಖರ್ ಅರ್ಥಾತ್ ಲಂಬೂರಾಜ, ಬೋರ್ವೆಲ್ ರಾಜಾ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಅಕಾಲಿಕವಾಗಿ ನಮ್ಮೆನ್ನೆಲ್ಲಾ ಅಗಲಿದಾಗ ಅವರ ಕುರಿತಂತೆ ಆಧುನಿಕ ಭಗೀರಥ ರಾಜಶೇಖರ್ (ರಾಜ) https://enantheeri.com/2020/10/28/borewell_raja/ಎಂಬ ಲೇಖನವನ್ನು ಬರೆದಿದ್ದೆ. ಆ ಲೇಖನ ಒಂದು ರೀತಿಯ ವೈರಲ್ ಆಗಿ ಸಾವಿರಾರು ಜನರು ಓದಿದ್ದಲ್ಲದೇ ಖುದ್ದಾಗಿ ನನಗೆ ಕರೆ ಮಾಡಿ ರಾಜನ ಅಕಾಲಿಕ ಮರಣಕ್ಕೆ ದುಖಃವನ್ನು ವ್ಯಕ್ತಪಡಿಸಿ, ರಾಜನ ವ್ಯಕ್ತಿತ್ವದ ಕುರಿತಾಗಿ ಬರೆದ… Read More ವಿಕ್ರಮ ವಾರಪತ್ರಿಕೆಯಲ್ಲಿ ರಾಜಶೇಖರ್ (ರಾಜಾ) ಸ್ಮರಣೆ

ವಂಶವಾಹಿ ಸಂಸ್ಕಾರ (ಜೀನ್ಸ್)

ಮನೆಯಲ್ಲಿರುವ ಚಿಕ್ಕ ಮಕ್ಕಳು ಮನೆಯಲ್ಲಿರುವ ಅಜ್ಜಿ ತಾತ, ಅಪ್ಪಾ ಅಮ್ಮಾ ಅಣ್ಣ ಅಕ್ಕಾ ಅವರನ್ನು ನೋಡಿಯೇ ಕಲಿತುಕೊಳ್ಳುತ್ತಾರೆ. ಹಾಗಾಗಿಯೇ ಚಿಕ್ಕ ಮಕ್ಕಳ ಮುಂದೆ ಸದಾ ಕಾಲವೂ ಸಾಧ್ಯವಾದಷ್ಟೂ ಒಳ್ಳೆಯ ಸಂಸ್ಕಾರವಂತರಾಗಿಯೇ ವ್ಯವಹರಿಸುವುದನ್ನು ಎಲ್ಲೆಡೆಯಲ್ಲಿಯೂ ನೋಡಬಹುದಾಗಿದೆ. ಚಿಕ್ಕ ಮಕ್ಕಳೂ ತಮಗೇ ಅರಿವಿಲ್ಲದಂತೆಯೇ ಮನೆಯಲ್ಲಿರುವ ದೊಡ್ಡವರ ಸ್ವಭಾವವನ್ನು ಯಥವತ್ತಾಗಿ ಅಳವಡಿಸಿಕೊಂಡಿರುತ್ತಾರೆ. ಅಂತಹದೇ ಒಂದು ಸುಂದರ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ. ಹೇಳಿ ಕೇಳಿ ನಮ್ಮದು ಸಂಪ್ರದಾಯಸ್ಥ ಕುಟುಂಬ. ಕಲೆ, ಸಂಗೀತ ಮತ್ತು ಸಾಹಿತ್ಯ ಎನ್ನುವುದು ನಮ್ಮ ಕುಟುಂಬದಲ್ಲಿ ಹಾಸು ಹೊಕ್ಕಾಗಿದೆ.… Read More ವಂಶವಾಹಿ ಸಂಸ್ಕಾರ (ಜೀನ್ಸ್)

ಪಂಚಾಮೃತ ಮತ್ತು ಪಂಚಲೋಹ

ಸಾಧಾರಣವಾಗಿ ಬಹುತೇಕ ಎಲ್ಲಾ ದೇವಸ್ಥಾನಗಳಿಗೂ ಬೆಳಗ್ಗೆ ಹೋದಾಗ ತೀರ್ಥದ ರೂಪದಲ್ಲಿ ಪಂಚಾಮೃತ ಕೊಟ್ಟು ಅದನ್ನು ಭಕ್ತಿಯಿಂದ ಸೇವಿಸಿದ ನಂತರ ತುಳಸೀ ಮತ್ತು ಪಚ್ಚ ಕರ್ಪೂರ ಹಾಕಿದ ತೀರ್ಥವನ್ನು ಕೊಡುವುದನ್ನು ನಾವು ನೋಡಿದ್ದೇವೆ. ಪ್ರತೀ ದಿನ ದೇವರ ವಿಗ್ರಹಕ್ಕೆ ಹಾಲು, ಮೊಸರು, ತುಪ್ಪ , ಜೇನುತುಪ್ಪ, ಸಕ್ಕರೆ,ಜೊತೆಗೆ ಬಾಳೆಹಣ್ಣು, ಎಳನೀರು, ನೀರಿನ ಮುಖಾಂತರ ಅಭಿಷೇಕವನ್ನು ಮಾಡಿದ ನಂತರ ಅವೆಲ್ಲವನ್ನೂ ಒಂದು ಶುಭ್ರವಾದ ಬೆಳ್ಳಿ ಇಲ್ಲವೇ ಹಿತ್ತಾಳೆ, ಕಂಚು ಅಥವಾ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿ ಬಂದ ಭಕ್ತಾದಿಗಳಿಗೆ ತೀರ್ಥದ ರೂಪದಲ್ಲಿ… Read More ಪಂಚಾಮೃತ ಮತ್ತು ಪಂಚಲೋಹ

ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು

ನಮಗೆಲ್ಲಾ ತಿಳಿದಿರುವಂತೆ ಈ ದೇಶ ಕಂಡ ಮಾಹಾ ಯತಿಳಾಗಿದ್ದಂತಹ ಪೇಜಾವರ ಶ್ರೀಗಳು ಕಳೆದ ವರ್ಷ ಇದೇ ಸಮಯದಲ್ಲಿಯೇ ನಮ್ಮನಗಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಪೇಜಾವರ ಶ್ರೀಗಳ ಇಚ್ಚೆಯಂತೆಯೇ ಅವರ ವೃಂದಾವನವನ್ನು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನೆನ್ನೆ ಡಿ.17ರಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಪೂರ್ಣಪ್ರಮಾಣದ ವೃಂದಾವನ ಪ್ರತಿಷ್ಠಾಪನೆಯಾಗಿದೆ. ಶ್ರೀಗಳು ನಿಧನರಾದಾಗ ಅದೇ ಸ್ಥಳದಲ್ಲಿ ಅವರ ಭೌತಿಕ ಶರೀರವನ್ನು ವೃಂದಾವನಸ್ಥಗೊಳಸಿ ತಾತ್ಕಾಲಿಕವಾಗಿ ವೃಂದಾವನವೊಂದನ್ನು ನಿರ್ಮಿಸಿ ನಂತರ ಮಾಧ್ವ ಸಂಪ್ರದಾಯದಂತೆ ಶಿಲಾ ವೃಂದಾವನವನ್ನು ಅವರು ಸ್ವರ್ಗಸ್ಥರಾದ ವರ್ಷದೊಳಗೇ ನಿರ್ಮಿಸಲಾಗಿದ್ದು… Read More ನೆನೆದವರ ಮನದಲ್ಲಿ ಪೇಜಾವರ ಶ್ರೀ ಗಳು