ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ಪತ್ರಿಕಾ ಧರ್ಮ

ಯಾವುದೇ ಕಾರ್ಯ ಅಥವಾ ಕಾರ್ಯಕ್ರಮವನ್ನು ನಡೆಸಿದ ನಂತರ ಅದರ ಫಲವನ್ನು ಯಾರು ಯಾರು ಅನುಭವಿಸಬಹುದು? ಎಂಬುದನ್ನು ಅತ್ಯಂತ ಸರಳ ಮತ್ತು ಸುಂದರವಾಗಿ ಈ ಸಂಸ್ಕೃತ ಸುಭಾಷಿತದಲ್ಲಿ ಉಲ್ಲೇಖಿಸಿಲಾಗಿದೆ. ಕರ್ತಾ ಕಾರಯಿತಾಶ್ಚೈವ ಪ್ರೇರಕಾಶ್ಚಾನುಮೋದಕಃ | ಸುಕೃತೇಃ ದುಕೃತೇಶ್ಚೈವ ಚತ್ವಾರಿ ಸಮಭಾಗಿನಃ || ಯಾವುದೇ ಒಳ್ಳೆಯ ಕೆಲಸವೇ ಇರಲಿ ಅಥವಾ ಕೆಟ್ಟ ಕೆಲಸವೇ ಇರಲಿ, ಅದನ್ನು ಮಾಡಿದವರು, ಮಾಡಿಸಿದವರು, ಅದಕ್ಕೆ ಪ್ರೇರಣೆ ಕೊಟ್ಟವನು, ಅದನ್ನು ನೋಡಿ ಸರಿ ತಪ್ಪುಗಳನ್ನು ವಿಶ್ಲೇಷಿಸದೇ ಸುಮ್ಮನಿದ್ದು ಆ ಕಾರ್ಯವನ್ನು ಅನುಮೋದಿಸಿದವರು. ಈ ನಾಲ್ಕೂ ಜನರೂ… Read More ಪತ್ರಿಕಾ ಧರ್ಮ

ಊಟ ತನ್ನಿಷ್ಟ, ನೋಟ ಪರರಿಷ್ಟ

ಕೆಲವು ವರ್ಷಗಳ ಹಿಂದೆ ನಿಜಕ್ಕೂ ನಮ್ಮ ಬಹುತೇಕರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ. ದುಡಿಯುವ ಕೈ ಎರಡಾದರೇ ಕುಳಿತು ತಿನ್ನುವ ಕೈ ಹತ್ತಾರು ಇರುತ್ತಿತ್ತು. ಸರಿಯಾಗಿ ಎರಡು ಹೊತ್ತು ಹೊಟ್ಟೆ ತುಂಬಾ ಊಟವೂ ಇಲ್ಲದಿರುವಂತಹ ಸಂಧರ್ಭವೂ ಇತ್ತು. ಆದರೂ ನಮ್ಮ ಅಜ್ಜ-ಅಜ್ಜಿಯರ ಆಯಸ್ಸು 80-90 ರ ಆಸುಪಾಸಿನಲ್ಲಿಯೇ ಇರುತ್ತಿತ್ತು. ಆಷ್ಟು ವರ್ಷಗಳ ಕಾಲ ಅವರು ಕಷ್ಟದಲ್ಲೇ ಜೀವಿಸಿದರೂ ಅವರಿಗೆಂದೂ ಬಿಪಿ, ಶುಗರ್, ಕಿಡ್ನಿ ತೊಂದರೆಯಾಗಲಿ ಇರಲೇ ಇಲ್ಲ. ಹೃದಯಾಘಾತ ಎನ್ನುವುದನ್ನು ಕೇಳೇ ಇರಲಿಲ್ಲ ಅವರೆಲ್ಲರೂ ಗಂಡಾ ಗುಂಡೀ… Read More ಊಟ ತನ್ನಿಷ್ಟ, ನೋಟ ಪರರಿಷ್ಟ

ಪೂರ್ಣಾಂಕ

ಇತ್ತೀಚಿನ SSLC ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ 625/625 ಅಂಕಗಳನ್ನು ಗಳಿಸುವವರ ಸಂಖ್ಯೆ ಹೆಚ್ಚಾಗುತ್ತಾ ಹೋದಂತೆಲ್ಲಾ, ಶಿಕ್ಷಣದ ಗುಣ ಮಟ್ಟದ ಬಗ್ಗೆ ಸಂದೇಹವಾಗುತ್ತಿದೆ. ನಿಜವಾಗಿಯೂ ಶಿಕ್ಷಣ ಕ್ಷೇತ್ರದಲ್ಲಿ ಆ ಪರಿಯಾಗಿ ಬೆಳೆದಿದ್ದಲ್ಲಿ ಮುಂದೆ ಅದೇ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮತ್ತು ನಿಜ ಜೀವನದಲ್ಲಿ ವಿಫಲರಾಗುತ್ತಿರುವ ಬಗ್ಗೆಯೂ ಶಿಕ್ಷಣ ಇಲಾಖೆ ಗಮನ ಹರಿಸಬೇಕಲ್ಲವೇ?… Read More ಪೂರ್ಣಾಂಕ

ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ

ಪ್ರಪಂಚದಲ್ಲಿ ಹೆಣ್ಣನ್ನು ಪರಮಪೂಜ್ಯಳೆಂದು ಗೌರವಿಸುವ  ಯಾವುದಾದರೂ ದೇಶದಲ್ಲಿ ಅದು ಖಂಡಿತವಾಗಿಯೂ ನಮ್ಮ ಭಾರತದೇಶ ಎಂದು ಹೆಮ್ಮೆಯಾಗಿ ಹೇಳಬಹುದು. ಅದಕ್ಕಾಗಿಯೇ ನಮ್ಮ ಪೂರ್ವಜರು ಯತ್ರ ನಾರ್ಯಂತು ಪೂಜ್ಯಂತೇ ರಮ್ಯಂತೇ ತತ್ರ ದೇವತಃ |  ಯತ್ರ ನಾರ್ಯಂತು ಪೀಡಂತೆ, ದೂಷಂತೆ ತತ್ರ ವಿನಾಶಃ || ಅಂದರೆ ಎಲ್ಲಿ ನಾರಿಯರು ಪೂಜಿಸಲ್ಪಡುವಳೋ ಅಲ್ಲಿ ದೇವತೆಗಳು ಪ್ರಸನ್ನರಾಗಿರುತ್ತಾರೆ. ಅದೇ ರೀತಿ ಎಲ್ಲಿ  ಸ್ತ್ರೀಯರನ್ನು ದೂಷಣೆ ಮಾಡುತ್ತರೋ ಅಲ್ಲಿ ಸಮಾಜವು ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಂದೆಲ್ಲಾ ಮನೆಯ ಗಂಡಸರು ಹೊರಗೆ ದುಡಿದು ಸಂಪತ್ತನ್ನು ಗಳಿಸಿ… Read More ಕಾಳುಮೆಣಸಿನ ರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ

ಭಗವಾನ್ ಗೌತಮ ಬುದ್ಧ

ಗೌತಮ ಸಿದ್ಧಾರ್ಥ ಕೇವಲ ಸರ್ವ ಸಂಗ ಪರಿತ್ಯಾಗದಿಂದ ಬುದ್ಧನಾಗಲಿಲ್ಲ. ಬದಲಾಗಿ ಆತ ತಾನು ಕಂಡ ಕೊಂಡ ಬದುಕಿನ ಸತ್ಯ ದರ್ಶನದಿಂದ ಹೇಗೆ ಬುದ್ಧನಾಗಿ ಜಗದ್ವಿಖ್ಯಾತನಾದ ಎಂಬ ರೋಚಕತೆ ಇದೋ ನಿಮಗಾಗಿ … Read More ಭಗವಾನ್ ಗೌತಮ ಬುದ್ಧ

ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಭಾರತದಲ್ಲಿ ಕ್ರಿಕೆಟ್ ಒಂದು ರೀತಿಯ ಧರ್ಮ ಎಂಬತಾಗಿ  ಅದರ ಹೊರತಾಗಿ ಉಳಿದ ಕ್ರೀಡೆಗಳ ಬಗ್ಗೆ ಪ್ರೋತ್ಸಾಹ ಅಷ್ಟಕಷ್ಟೇ. ಬಹುತೇಕ ಪೋಷಕರು ತಮ್ಮ ಮಕ್ಕಳು ಡಾಕ್ಟರ್ ಇಲ್ಲವೇ ಇಂಜಿನೀಯರ್ ಆಗಿ ವಿದೇಶಗಳಿಗೆ ಹೋಗಿ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದಿಸಿ ಐಶಾರಾಮ್ಯದ ಜೀವನವನ್ನು ನಡೆಸಿದರೆ ಸಾಕು ಎಂದು ಬಯಸುವವರೇ ಹೆಚ್ಚಾಗಿದ್ದಾರೆ. ಅಪರೂಪಕ್ಕೆ ಅಲ್ಲೊಂದು  ಇಲ್ಲೊಂದು ವಯಕ್ತಿಕ ಆಸಕ್ತಿಯುಳ್ಳವರು ಟಿನ್ನಿಸ್, ಶೂಟಿಂಗ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಈಜು, ಕುಸ್ತಿ, ವೇಯ್ಟ್ ಲಿಫ್ಟಿಂಗ್ ಮುಂತಾದ ಕ್ರೀಡೆಗಳಲ್ಲಿ ಅಷ್ಟೂ ಇಷ್ಟೋ ಸಾಧನೆಗಳನ್ನು ಮಾಡುವ… Read More ಥಾಮಸ್ ಕಪ್ ಗೆದ್ದು ಬೀಗಿದ ಭಾರತ

ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ