ಚಾಪೇಕರ್ ಸಹೋದರರು

ಇವತ್ತಿನ ಬಹುತೇಕ ರಾಜಕೀಯ ಪಕ್ಷದ ನಾಯಕರುಗಳು ನಮ್ಮವರು ಈ ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ್ದಾರೆ ಅಷ್ಟು ತ್ಯಾಗ ಮಾಡಿದ್ದಾರೆ ಎಂದು ಪುಂಖಾನು ಪುಂಖವಾಗಿ ಹೇಳುತ್ತಲೇ ಜನರನ್ನು ಮರಳು ಮಾಡುತ್ತಿರುವ ಸಂಧರ್ಭದಲ್ಲಿ ಒಂದೇ ಕುಟುಂಬದ, ಅದರಲ್ಲೂ ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ಅಣ್ಣ ತಮ್ಮಂದಿರಾದ ಚಾಪೇಕರ್ ಸಹೋದರರನ್ನು ಬ್ರಿಟೀಷ್ ಅಧಿಕಾರಿಗಳು ಮತ್ತು ಮಿತ್ರದ್ರೋಹ ಎಸಗಿದ ಸಾಕ್ಷಿಯಾಗಿದ್ದ ಭಾರತೀಯನನ್ನು ಕೊಂಡಿದ್ದಕ್ಕಾಗಿ ಗಲ್ಲು ಶಿಕ್ಷೆಯನ್ನು ವಿಧಿಸಿದಾಗ ಅವರೆಲ್ಲರೂ ಸಂತೋಷದಿಂದ ಭಾರತಮಾತೆಗೆ ತಮ್ಮ ಪ್ರಾಣವನ್ನು ಅರ್ಪಿಸಿದ್ದನ್ನು ನೆನಪಿಸಿಕೊಂಡು ಆ ಸಹೋದರಿಗೆ ಎರಡು… Read More ಚಾಪೇಕರ್ ಸಹೋದರರು

ಹೃದಯ ಶ್ರೀಮಂತಿಕೆ

ದಿನವಿಡೀ ಕಛೇರಿಯಲ್ಲಿ ಕೆಲಸ ಮಾಡಿದ ನಂತರ ಸುಸ್ತಾಗಿ ಸಂಜೆ ಮನೆಗೆ ಹೋಗಬೇಕೆಂದು ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ವಿಪರೀತ ಜನಸಂದಣಿಯಿಂದಾಗಿ ಒಂದೆರಡು ಬಸ್ಸುಗಳು ನಮ್ಮ ನಿಲ್ದಾಣದಲ್ಲಿ ನಿಲ್ಲಿಸದೇ ಹಾಗೇ ಹೊರಟು ಹೋದವು. ಆದಾದ ಕೆಲವು ಸಮಯದ ನಂತರ ಬಂದ ಮೂರನೇ ಬಸ್ಸಿನಲ್ಲಿಯೂ ಸಾಕಷ್ಟು ಜನರಿದ್ದರು. ಅದಾಗಲೇ ಸಾಕಷ್ಟು ಸಮಯವಾಗಿದ್ದರಿಂದ ಮಾತ್ತು ಬಸ್ಸಿಗೆ ಕಾದೂ ಕಾದೂ ಸುಸ್ತಾದ ಪರಿಣಾಮ ವಿಧಿ ಇಲ್ಲದೇ ಹಾಗೂ ಹೀಗೂ ಮಾಡಿಕೊಂಡು ಬಸ್ಸನ್ನೇರಿ ಒಂದು ಕಂಬಕ್ಕೆ ಒರಗಿ ನಿಂತು ಕೊಂಡೆ. ಅಲ್ಲಿಂದ ಸ್ವಲ್ಪ ದೂರ ಪ್ರಯಾಣಿಸುತ್ತಲೇ… Read More ಹೃದಯ ಶ್ರೀಮಂತಿಕೆ

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಕಛೇರಿಯ ಮೊದಲ ದಿನದ ಅನುಭವ

ಮಾರ್ಚ್ 11, 2020 ಬುಧವಾರ ಸಂಜೆ ಸುಮಾರು5:30ರ ಸಮಯ ಕಛೇರಿಯ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಂತಹ ಸಮಯ. ನಾವು ನಾಲ್ಕೈದು ಜನ ಒಟ್ಟಿಗೆ ಒಂದೇ ಕಾರಿನಲ್ಲಿ (car pool) ಮಾಡುತ್ತಿದ್ದಾಗ ಮೊಬೈಲಿನಲ್ಲಿ ಈ-ಮೇಲ್ ಬಂದ ಶಬ್ಧ ಕೇಳಿ ಯಾರಪ್ಪಾ ಈಗ ಮೇಲ್ ಕಳುಹಿಹಿರುವವರು? ಎಂದು ಮೋಬೈಲ್ ನೋಡುತ್ತಲೇ ಒಂದು ಕ್ಷಣ ಎದೆ ಝಲ್ ಎಂದಿದ್ದಂತೂ ಸುಳ್ಳಲ್ಲ. ನಮ್ಮ ಕಛೇರಿಯ ಹತ್ತಿರವೇ ಇದ್ದ ಕೆಲವು ಸಹೋದ್ಯೋಗಿಗಳು ವಾಸಿಸುತ್ತಿದ್ದಂತಹ ಅಪಾರ್ಟ್ಮೆಂಟಿನ ಕೆಲವರಿಗೆ ಕೊರೋನಾ ಸೋಂಕು ಧೃಢ ಪಟ್ಟಿರುವ ವಿಷಯ ತಿಳಿದು… Read More ಕಛೇರಿಯ ಮೊದಲ ದಿನದ ಅನುಭವ

ಮದುವೆಯ ಈ ಬಂಧ ಅನುರಾಗದ ಅನುಬಂಧ

ಮದುವೆ ಎನ್ನುವುದು ಕೇವಲ ಗಂಡು ಹೆಣ್ಣಿನ ಒಗ್ಗೂಡಿಸುವಿಕೆಯಲ್ಲದೇ ಅದು ಆ ಎರಡು ಕುಟುಂಬಗಳ ನಡುವೆ ಸಂಬಂಧವನ್ನು ಬೆಸೆಯುವುದಲ್ಲದೇ ಆ ಎರಡೂ ಕುಟುಂಬಗಳ ಮುಂದಿನ ಗುಣ ನಡುವಳಿಕೆಗಳನ್ನು ಮುಂದಿನ ತಲಮಾರಿಗೂ ಮುಂದುವರೆಸಿಕೊಂಡು ಹೋಗುವ ಸುಂದರವಾದ ಸಂದರ್ಭವಾಗಿದೆ. ಮದುವೆ ಎನ್ನುವುದು ಉಚ್ಚರಿಸಲು ಕೇವಲ ಮೂರೇ ಅಕ್ಷರಗಳಾದರೂ ಅದರ ಹಿಂದಿರುವ ಕಷ್ಟವನ್ನು ಅರಿತೇ ಮದುವೇ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುವ ಗಾದೆಯನ್ನೇ ನಮ್ಮ ಹಿರಿಯರು ಮಾಡಿದ್ದಾರೆ. ಸುಮಾರು ವರ್ಷಗಳ ಹಿಂದೇ ಇದೇ ದಿನ ಎಲ್ಲಾ ಎಡರು ತೊಡರುಗಳನ್ನೂ ಮೀರಿ… Read More ಮದುವೆಯ ಈ ಬಂಧ ಅನುರಾಗದ ಅನುಬಂಧ

ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಅದು ಕ್ರಿ.ಶ, 7ನೇ ಶತಮಾನದಲ್ಲಿ ಅಹಿಂಸಾ ಪರಮೋಧರ್ಮಃ ಎಂದು ಹೇಳುತ್ತಲೇ ಬೌದ್ಧ ಧರ್ಮ ದೇಶ ವಿದೇಶಗಳಲ್ಲೆಲ್ಲಾ ಹರಡಿಯಾಗಿತ್ತು. ಸನಾತನ ಧರ್ಮದ ಕಟ್ಟುಪಾಡು ಮತ್ತು ಅತೀಯಾದ ಆಚಾರ ಮಡಿ ಹುಡಿಗಳಿಂದ ಬೇಸತ್ತವರು ಬೌದ್ಧ ದರ್ಮದ ಕಡೆ ಆಕರ್ಷಿತರಾಗಿದ್ದರೆ, ಮತ್ತೊಂದೆಡೆ, ದೇವರು ಎಂಬುವುದೇ ಇಲ್ಲ ಅದೆಲ್ಲಾ ಕಟ್ಟು ಕಥೆ ಎನ್ನುವಂತಹ ಚಾರ್ವಾಕರ ಹಾವಳಿಯಿಂದಾಗಿ ಒಂದು ರೀತಿಯಲ್ಲಿ ಸನಾತನ ಧರ್ಮ ಅಳಿವಿನಂಚಿಗೆ ತಲುಪಿತ್ತು. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಸನಾತನ ಧರ್ಮಕ್ಕೆ ಆಶಾಕಿರಣವಾಗಿ ಹುಟ್ಟಿ ಬಂದವರೇ ಶ್ರೀ ಶಂಕರಾಚಾರ್ಯರು. ಕೇರಳದ ಪೂರ್ಣಾ ನದಿ… Read More ಶ್ರೀ ಶಂಕರ ಭಗವತ್ಪಾದರ ಸಂಕ್ಷಿಪ್ತ ಜೀವನ ಚರಿತ್ರೆ

ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ನಮ್ಮ ಸನಾತನ ಧರ್ಮದಲ್ಲಿ ತಂದೆ, ತಾಯಿ, ಸೂರ್ಯ ಮತ್ತು ಚಂದ್ರರಂತಹ ಪ್ರತ್ಯಕ್ಷ ದೇವರುಗಳ ಹೊರತಾಗಿ ಶ್ರದ್ಧಾ ಭಕ್ತಿಗಳಿಂದ ಪೂಜಿಸುವುದೇ ಗುರು ಪರಂಪರೆ. ನಮ್ಮ ಸನಾತನ ಧರ್ಮದ ಮೂಲ ಅಡಗಿರುವುದೇ ಗುರು ಪರಂಪರೆಯಾಗಿದ್ದು ಈ ದೇಶದಲ್ಲಿ ಈಗಾಗಲೇ ಲಕ್ಷಾಂತರ ಗುರುಗಳು ಮತ್ತು ಅವಧೂತರುಗಳು ಬಂದು ಹೋಗಿದ್ದಾರೆ. ಅವಧೂತ ಎಂಬುದು ಸಂಸ್ಕೃತದಿಂದ ಬಂದ ಪದವಾಗಿದ್ದು, ಭಾರತೀಯ ಧರ್ಮಗಳಲ್ಲಿ ಅಹಂಕಾರ-ಪ್ರಜ್ಞೆ, ದ್ವಂದ್ವತೆ ಮತ್ತು ಸಾಮಾನ್ಯ ಲೌಕಿಕ ಕಾಳಜಿಗಳನ್ನು ಮೀರಿದ ಮತ್ತು ಪ್ರಮಾಣಿತ ಸಾಮಾಜಿಕ ಶಿಷ್ಟಾಚಾರವನ್ನು ಪರಿಗಣಿಸದೆ ವರ್ತಿಸುವ ಒಂದು ರೀತಿಯ ಅತೀಂದ್ರಿಯವಾದ… Read More ಬೆಲಗೂರು ಬಿಂಧು ಮಾಧವ ಶರ್ಮ ಅವಧೂತರು

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ವೀರ ಕುನ್ವರ್ ಸಿಂಗ್

ಬ್ರಿಟೀಷರ ಸೇನೆಯಲ್ಲಿ ಸಾಮಾನ್ಯ ಸೈನಿಕನಾಗಿದ್ದ ಮಂಗಲ್ ಪಾಂಡೆ 1857ರಲ್ಲಿ ಬ್ರಿಟೀಷ್ ಸೈನ್ಯದ ವಿರುದ್ಧವೇ ತಿರುಗಿ ಬಿದ್ದು ನಡೆಸಿದ ಹೋರಾಟವನ್ನು ಬ್ರಿಟೀಷರು ಸಿಪಾಯಿದಂಗೆ ಎಂದು ದಾಖಲಿಸಿದರೆ, ಭಾರತದ ನಿಜವಾದ ಇತಿಹಾಸಕಾರರು ಅದನ್ನು ಪ್ರಥಮ ಸ್ವಾತ್ರಂತ್ರ್ಯ ಸಂಗ್ರಾಮ ಎಂದೇ ಹೆಮ್ಮೆಯಿಂದ ಕರೆಯುತ್ತಾರೆ. ಮಂಗಲ್ ಪಾಂಡೆ ಹತ್ತಿಸಿದ ಸ್ವಾತ್ರಂತ್ರ್ಯದ ಕಿಚ್ಚನ್ನು ಬಿಹಾರ್ ಪ್ರಾಂತ್ಯದಲ್ಲಿ ಪ್ರಜ್ವಲಿಸುವಂತೆ ಮಾಡಿದ ಕೀರ್ತಿ ಪ್ರಸ್ತುತ ಭಾರತದ ಬಿಹಾರದ ಭೋಜ್‌ಪುರ ಜಿಲ್ಲೆಯ ಭಾಗವಾಗಿರುವ ಜಗದೀಸ್‌ಪುರದ ಪರ್ಮಾರ್ ರಜಪೂತರ ಉಜ್ಜೈನಿಯಾ ಕುಲದ ಕುಟುಂಬಕ್ಕೆ ಸೇರಿದ್ದ ವೀರ್ ಕುನ್ವರ್ ಸಿಂಗ್ ಅವರಿಗೆ… Read More ವೀರ ಕುನ್ವರ್ ಸಿಂಗ್