ಲಂಚದಲ್ಲೂ ಡಿಜಟಲೀಕರಣ

ಮೊನ್ನೆ ಇನ್ನೂ, ಮಂಗಳೂರು ಟ್ರಾಫಿಕ್ ಪೋಲಿಸರ ಬಗ್ಗೆ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ, ಇದಕ್ಕೆ ಪೂರಕವಾದ ಬೆಂಗಳೂರಿನ ಯಲಹಂಕದ ಬಳಿಯ ಮತ್ತೊಂದು ಪ್ರಸಂಗಕ್ಕೆ ನೆನ್ನೆ ನಾನೇ ಸಾಕ್ಷಿಯಾಗಬೇಕಾಗಿದ್ದು ನಿಜಕ್ಕೂ ಅಸಹ್ಯಕರ ಎನಿಸಿತು. ಹಾಗಾಗಿ ಮಂಗಳೂರಿನ ಪ್ರಕರಣವನ್ನು ಯಥಾವತ್ ಹಾಗೆಯೇ ಪ್ರಕಟಿಸಿ ನಂತರ ನನಗಾದ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ಮಂಗಳೂರಿನ ಪ್ರಕರಣ ಇಂದು ಸ್ಟೇಟ್ ಬ್ಯಾಂಕ್ ನಲ್ಲಿ ನಾವು ರಾಂಗ್ ಸೈಡಲ್ಲಿ (one way) ಕಾರು ಚಲಾಯಿಸಿದ್ದಕ್ಕೆ ಈ ಪೋಲಿಸ್ ಅಡ್ಡಗಟ್ಟಿ ಫೈನ್ ಕಟ್ಟಲು ಹೇಳಿದ್ರು, ರಶೀದಿ ಬೇಕಾ? ಬೆಡ್ವಾ?… Read More ಲಂಚದಲ್ಲೂ ಡಿಜಟಲೀಕರಣ

ನಂಬಿಕೆ ಮತ್ತು ಆತ್ಮವಿಶ್ವಾಸ

ಅದೊಮ್ಮೆ ಭಿಕ್ಷುಕನೊಬ್ಬ ರೈಲಿನಲ್ಲಿ ಹಾಗೆಯೇ ಭಿಕ್ಷೆ ಬೇಡುತ್ತಿರುವಾಗ ಸೂಟು ಬೂಟುಗಳನ್ನು ಧರಿಸಿದ್ದ ಒಬ್ಬ ಗಣ್ಯವ್ಯಕ್ತಿಯನ್ನು ನೋಡಿ ಈ ವ್ಯಕ್ತಿ ಬಹಳ ಶ್ರೀಮಂತನಾಗಿರಬೇಕು. ಅವನ ಬಳಿ ಬಿಕ್ಷೆ ಬೇಡಿದಲ್ಲಿ ಆತ ಖಂಡಿತವಾಗಿಯೂ ತುಂಬಾ ಹಣವನ್ನು ಕೊಡುತ್ತಾನೆ ಎಂದು ಭಾವಿಸಿ ಆ ವ್ಯಕ್ತಿಯ ಬಳಿ ಹೋಗಿ ಭಿಕ್ಷೆಯನ್ನು ಕೇಳಿದನು. ಆ ವ್ಯಕ್ತಿ ಭಿಕ್ಷುಕನನ್ನು ಒಮ್ಮೆ ಮೇಲಿಂದ ಕೆಳಗಿನವರೆಗೂ ನೋಡಿ, ನೀವು ಹೀಗೆ ಯಾವಾಗಲೂ ಜನರಿಂದ ಭಿಕ್ಷೆ ಕೇಳುತ್ತಲೇ ಇರುತ್ತೀರಿ. ಆದರೆ ನೀವು ಯಾರಿಗಾದರೂ ಏನನ್ನಾದರೂ ಒಮ್ಮೆ ನೀಡಿದ್ದೀರಾ? ಎಂದು ಕೇಳಿದರು.… Read More ನಂಬಿಕೆ ಮತ್ತು ಆತ್ಮವಿಶ್ವಾಸ

ಪಿತೃಪಕ್ಷ

ಭಾದ್ರಪದ ಮಾಸದ ಕೃಷ್ಣ ಪಕ್ಷದ ಪಾಡ್ಯದಿಂದ ಅಮಾವಾಸ್ಯೆಯವರೆಗೂ ದೇಶಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಪಿತೃ ಪಕ್ಷದ ಔಚಿತ್ಯ, ಆಚರಣೆಗಳು ಮತ್ತು ಜನರ ನಂಬಿಕೆಗಳ ಕುರಿತಾದ ಲೇಖನ ಇದೋ ನಿಮಗಾಗಿ… Read More ಪಿತೃಪಕ್ಷ

ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ನೆನ್ನೆ ರಾತ್ರಿಯಿಂದ ಹಿಂದೂ ವ್ಯಕ್ತಿಯೊಬ್ಬರು ಬುರ್ಕ ಧರಿಸಿದ ಮಹಿಳೆಯೊಬ್ಬರಿಗೆ ತನ್ನ ಬೈಕಿನಲ್ಲಿ ಡ್ರಾಪ್​ ಕೊಟ್ಟಿದ್ದಕ್ಕಾಗಿ ಕೆಲವು ಮತಾಂಧರ ಗುಂಪು ಧಾಳಿ ನಡೆಸಿ ಹಿಂದು ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಬಳಿಯ ಡೈರಿ ಸರ್ಕಲ್​ನಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಶುಕ್ರವಾರ ರಾತ್ರಿ ಆ ವ್ಯಕ್ತಿ ಮತ್ತು ಮಹಿಳೆ ಇಬ್ಬರೂ ಒಂದೇ ಬ್ಯಾಂಕಿನಲ್ಲಿ ಒಟ್ಟಿಗೆ ಕೆಲಸ ಮಾಡಿರುವ ಸಹೋದ್ಯೋಗಿಯಾಗಿದ್ದು ಅದಾಗಲೇ ಸಮಯವಾಗಿದ್ದ ಕಾರಣ, ಇಬ್ಬರ ಮನೆಯೂ ಒಂದೇ… Read More ಡ್ರಾಪ್ ಕೊಟ್ಟವನಿಗೇ ಧರ್ಮದೇಟು

ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ

ಕಲ್ಯಾಣ (ಹೈದರಾಬಾದ್) ಕರ್ನಾಟಕ ವಿಮೋಚನಾ ದಿನಾಚರಣೆ

ಇಡೀ ದೇಶಕ್ಕೆ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಾದರೆ, ಹೈದರಾಬಾದ್ ಕರ್ನಾಟಕದವರು ಮಾತ್ರಾ ಸೆಪ್ಟೆಂಬರ್ 17ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸೋದು ಏಕೇ? ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಹಿಂದಿರುವ ಆಪರೇಶನ್ ಪೋಲೋ ಕಾರ್ಯಚರಣೆಯ ಹೃದಯವಿದ್ರಾವಕ ರೋಚಕತೆ ಇದೋ ನಿಮಗಾಗಿ… Read More ಕಲ್ಯಾಣ (ಹೈದರಾಬಾದ್) ಕರ್ನಾಟಕ ವಿಮೋಚನಾ ದಿನಾಚರಣೆ

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ

ಮೂರ್ತಿ ಪೂಜೆ

ರಸ್ತೇ ಅಗಲೀಕರಣದ ನೆಪದಲ್ಲಿ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಕಳೆದ ವಾರ ನಂಜನಗೂಡಿನ ಬಳಿ 800 ವರ್ಷದ ಹಳೆಯದಾದ ಚೋಳರ ಕಾಲದ  ದೇವಾಲಯವನ್ನು ಒಡೆದು ಹಾಕಿರುವ ವಿಷಯ ಇನ್ನೂ ಆರದಿರುವಾಗ ಅದೇ ಪ್ರಾಂತ್ಯದ ಚಾಮರಾಜನಗರದ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನು ತೆರವು ಮಾಡುವ ಎಡವಟ್ಟೊಂದನ್ನು ಮಾಡುವ ಮೂಲಕ  ಆಸ್ತಿಕ ಮಹಾಶಯರ ಸಾತ್ವಿಕ ಕೋಪ ಹೆಚ್ಚುವಂತಾಗಿದೆ. ನಮ್ಮ ರಾಜ್ಯದ ಹಲವಾರು ದೇವಾಲಯಗಳಿಗೆ ನಮ್ಮ ಮೈಸೂರು ಅರಸರ ಕೊಡುಗೆ ಅಪಾರ ಎನ್ನುವುದು ನಿರ್ವಿವಾದ. ಅದರಲ್ಲೂ… Read More ಮೂರ್ತಿ ಪೂಜೆ

ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ

ಭಾರತ ಎಂದರೆ ಹಾವಾಡಿಗರ ದೇಶ, ಹಿಂದೂಗಳು ಎಂದರೆ ಮೂಢ ನಂಬಿಕೆಯ ಜನರು ಎಂದು ಇಡೀ ಜಗತ್ತೇ ಮೂದಲಿಸುತ್ತಿದ್ದಾಗ ವಿಶ್ವ ಧರ್ಮಗಳ ಸಂಸತ್ತು 11 ಸೆಪ್ಟೆಂಬರ್ 1893 ರಂದು ಚಿಕಾಗೋದಲ್ಲಿ ಐತಿಹಾಸಿಕ ದಿಕ್ಸೂಚಿ ಭಾಷಣವನ್ನು ಮಾಡಿ ಜಗತ್ತೇ ಭಾರತ ಮತ್ತು ಹಿಂದೂ ಧರ್ಮದತ್ತ ಬೆಚ್ಚಿ ಬೀಳುವಂತೆ ಮಾಡುವ ಮುನ್ನಾ ದೇಶಾದ್ಯಂತ ಪರಿವಾಜ್ರಕರಾಗಿ ಪರ್ಯಟನೆ ಮಾಡುತ್ತಿದ್ದಂತಹ ಸಮಯದಲ್ಲಿ, 24 ಡಿಸೆಂಬರ್ 1892 ರಂದು ಸ್ವಾಮೀ ವಿವೇಕಾನಂದರು ಕನ್ಯಾಕುಮಾರಿಯನ್ನು ತಲುಪಿದ್ದರು. ಸಮುದ್ರದ ದಂಡೆಯಲ್ಲೇ ಇರುವ ದೇವಿಯ ದರ್ಶನ ಪಡೆದು ಹಿಂದೂಮಹಾಸಾಗರ, ಅರಬ್ಬೀ… Read More ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ