ಅಪ್ಪೆ ಸಾರು (ಮಾವಿನ ಸಾರು)

ಹೇಳಿ ಕೇಳಿ ಇದು ಮಾವಿನ ಕಾಯಿ ಕಾಲ. ಈಗಷ್ಟೇ ಮಾವಿನ ಕಾಯಿಗಳು ಚೆನ್ನಾಗಿ ಬಲಿತು ಇನ್ನೇನು ಕೆಲವೇ ದಿನಗಳಲ್ಲಿ ಬಗೆ ಬಗೆಯ ಮಾವಿನ ಹಣ್ಣುಗಳು ಲಗ್ಗೆ ಇಡಲು ಸಜ್ಜಾಗಿವೆ (ಈಗಾಗಲೇ ಕೆಲವು ಮಾವಿನ ಹಣ್ಣುಗಳು ಲಭ್ಯವಿದೆ) ಈ ಬಲಿತ ಮಾವಿನ ಕಾಯಿಯಲ್ಲಿ ಉಪ್ಪಿನಕಾಯಿ, ಮಾವಿನ ಕಾಯಿ ಚಿತ್ರಾನ್ನ, ಮಾವಿನಕಾಯಿ ಕಾಯಿ ಸಾಸಿವೆ ಮಾಡಿಕೊಂಡು ಚಪ್ಪರಿಸುತ್ತೇವೆ. ಇಂದು ಉತ್ತರ ಕನ್ನಡ ಮತ್ತು ಮಲೆನಾಡಿನ ಕಡೆಯಲ್ಲಿ ಇದೇ ಮಾವಿನ ಕಾಯಿಯನ್ನು ಬಳಸಿಕೊಂಡು ಮಾಡುವ ಧಿಡೀರ್ ಆಗಿ ಅಪ್ಪೆ ಸಾರು ಮಾಡುವ… Read More ಅಪ್ಪೆ ಸಾರು (ಮಾವಿನ ಸಾರು)

ಸಂಘ ಮತ್ತು ಸಂಘದ ಸ್ವಯಂಸೇವಕರು

ಸ್ವಾತಂತ್ರ್ಯ ಬಂದಾಗಲಿಂದಲೂ ಒಂದೇ ಕುಟುಂಬದ, ತುಷ್ಟೀಕರಣದ ಸ್ವಾರ್ಥ ಆಡಳಿತಕ್ಕೆ ಒಗ್ಗಿ ಹೋದಿದ್ದವರಿಗೆ 2014ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವವಾದ ಜನ ಬೆಂಬಲದೊಂದಿಗೆ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರಕಾರ ಕೇಂದ್ರದಲ್ಲಿ ಆಡಳಿತಕ್ಕೆ ಬಂದು ಮತ್ತೆ 2019 ರಲ್ಲಿ ಮತ್ತೊಮ್ಮೆ ಭಾರಿ ಜನಬೆಂಬಲದೊಂದಿಗೆ ಪುನಃ ಆಡಳಿತಕ್ಕೆ ಬಂದಿರುವುದು ಅನೇಕರಿಗೆ ನುಂಗಲಾರದ ತುತ್ತಾಗಿದೆ. ಮೋದಿಯವರು ಆಡಳಿತಕ್ಕೆ ಬಂದ ಕೂಡಲೇ ಇದ್ದಕ್ಕಿದ್ದಂತೆಯೇ ದೇಶದಲ್ಲಿ ಅಸಹಿಷ್ಣುತೆ ಮತ್ತು ಅಭದ್ರತೆ ಕಾಡತೊಡಗಿತು. ಕೆಲವರು ದೇಶ ಬಿಡುವ ಮಾತನಾಡಿದರೆ ಇನ್ನೂ ಕೆಲವರು ಸರ್ಕಾರ ಕೊಟ್ಟಿದ್ದ ಪ್ರಶಸ್ತಿ ಪುರಸ್ಕಾರಗಳನ್ನು… Read More ಸಂಘ ಮತ್ತು ಸಂಘದ ಸ್ವಯಂಸೇವಕರು

ಹನುಮ ವರ್ಧಂತಿ

ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಪ್ರಭು ಶ್ರೀರಾಮನ ಪರಮ ಭಕ್ತ, ಅಂಜನಿಯ ಪುತ್ರ ಆಂಜನೇಯನು ಹುಟ್ಟಿದ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಈ ದಿನವನ್ನು ದೇಶಾದ್ಯಂತ ಹನುಮ ಜಯಂತಿ ಎಂದು ಆಚರಿಸುವಾಗ, ಇದೇನಿದು ಹನುಮ ವರ್ಧಂತಿ? ಎಂದು ಯೋಚಿಸುತ್ತಿರುವವರಿಗೆ ಇದೋ ಇಲ್ಲಿದೆ ಉತ್ತರ… Read More ಹನುಮ ವರ್ಧಂತಿ

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.

ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ

ಅರೇ ಇದೇನಿದು ಇಂತಹ ವಿಲಕ್ಷಣ ಮತ್ತು ಹೃದಯವಿದ್ರಾವಕ ಶೀರ್ಷಿಕೆ ಅಂದುಕೊಳ್ತಾ ಇದ್ದೀರಾ? ಖಂಡಿತವಾಗಿಯೂ ಇದು ವಿಲಕ್ಷಣವಾಗಿರದೇ ಇಂದಿನ ಜೀವನದ ಕಠು ಸತ್ಯವಾಗಿದೆ. ಇದೇ ವಾರದಲ್ಲಿ ನಡೆದ ಎರಡು ಕರುಣಾಜನಕ ಕತೆ ಮತ್ತು ವ್ಯಥೆ ಇದೋ ನಿಮಗಾಗಿ. ಶ್ರೀಯುತ ಆಚಾರ್ ಮೂಲತಃ ಬಳ್ಳಾರಿಯ ಹೊಸಪೇಟೆಯವರು. ಸಾಕಷ್ಟು ಸ್ಥಿತಿವಂತರಾಗಿದ್ದು ಕಾರು ಬಾರು ನಡೆಸಿದ್ದವರು. ಗಂಡು ಮಕ್ಕಳಿಬ್ಬರು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಮ್ಮ ಬದಕನ್ನರಿಸಿ ರಾಜಧಾನಿ ಬೆಂಗಳೂರಿಗೆ ಬಂದಾಗ ನಮಗೆ ಪರಿಚಯವಾದವರು. ಮಕ್ಕಳು ತಮ್ಮ ಕಛೇರಿಯ ಮೂಲಕ ವಿದೇಶಕ್ಕೆ ಹೋಗಿ ನಂತರದ… Read More ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ

ಶ್ರೀರಾಮ ನವಮಿ ಸ್ಟ್ರೈಕ್

ಸರ್ಜಿಕಲ್ ಸ್ಟ್ರೈಕ್, ಸಾರಿಗೆ ಸ್ಟ್ರೈಕ್, ರೈತರ ಸ್ಟ್ರೈಕ್ ಕೇಳಿದ್ದಿವಿ ಇದೇನು ಹೊಸಾ ಶ್ರೀರಾಮ ನವಮಿ ಸ್ಟ್ರೈಕ್ ಅಂತಾ ಯೋಚನೆ ಮಾಡ್ತಿರ್ತೀರಿ ಅಂತ ನನಗೆ ಚೆನ್ನಾಗಿ ಗೊತ್ತು. ಇದುವರೆಗೂ ಯಾರಿಗೂ ಹೇಳಿದಿದ್ದ ಶ್ರೀರಾಮ ನವಮಿ ಸ್ಟ್ರೈಕ್ ಅಂತಹ ರೋಚಕ ಅನುಭವವನ್ನು ನಿಮ್ಮೊಂದಿಗೆ ಹಂಚಿಕೊಳ್ತೀನಿ. ಸುಮಾರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆಗ ತಾನೆ ಶುರುವಾಗಿದ್ದ ಸ್ಟಾರ್ಟಪ್ ಕಂಪನಿಯೊಂದರ ಎರಡನೇ ಉದ್ಯೋಗಿಯಾಗಿ ಸೇರಿಕೊಂಡಿದ್ದೆ. ಭಾರತೀಯರೊಬ್ಬರೇ ಅಮೇರಿಕಾದಲ್ಲಿ ಆರಂಭಿಸಿದ ಕಂಪನಿಯೊಂದರ ಶಾಖೆಯನ್ನು ಐಟಿ ಹಬ್ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನಲ್ಲಿ ಆರಂಭಿಸಿದ್ದರು. ಬೆಂಗಳೂರು… Read More ಶ್ರೀರಾಮ ನವಮಿ ಸ್ಟ್ರೈಕ್

ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಕನ್ನಡ ಎಂದ ತಕ್ಷಣ ನೆನಪಾಗುವ ಕೆಲವೇ ಕೆಲವು ಮಂದಿಯರಲ್ಲಿ ಇಗೋ ಕನ್ನಡದ ಮೂಲಕ ನಾಡಿನ ಮನೆಮಾತಾಗಿದ್ದ ಶತಾಯುಷಿಗಳಾಗಿದ್ದ ಶ್ರೀ ಜಿ ವೆಂಕಟಸುಬ್ಬಯ್ಯವರು ಎಂದರೂ ತಪ್ಪಾಗದು. ಪ್ರೊ. ಜಿ. ವೆಂಕಟಸುಬ್ಬಯ್ಯನವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಪ್ರೊ. ಜಿ. ವೆಂಕಟಸುಬ್ಬಯ್ಯನವರು

ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ