ತಲಕಾವೇರಿ, ತೀರ್ಥೋಧ್ಭವ

ನಾವು ಪ್ರತಿನಿತ್ಯವೂ ಸ್ನಾನ ಮಾಡುವಾಗ ಗಂಗೇಚ ಯಮುನೇ ಚೈವ ಗೋದಾವರಿ ಸರಸ್ವತೀ | ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್ ಸನ್ನಿಧಿಂ ಕುರು ಎಂದು ಹೇಳಿಕೊಂಡೇ ಸ್ನಾನ ಮಾಡುತ್ತೇವೆ. ಅಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಏಳು ನದಿಗಳಾದ – ಗಂಗಾ, ಯಮುನಾ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ನದಿಗಳು ಭಾರತೀಯರ ಪೂಜನೀಯ ಜಲಸಂಪತ್ತಾಗಿದೆ. ಅದರಲ್ಲೂ ದಕ್ಷಿಣ ಭಾರತ ಮತ್ತು ಕರ್ನಾಟಕಕ್ಕೆ ಈ ಕಾವೇರಿ ನದಿಯು ಜೀವ ನದಿಯಾಗಿರುವುದರಿಂದಲೇ ಅದನ್ನು ಕೇವಲ ನದಿ ಎಂದು ಭಾವಿಸದೇ, ಕಾವೇರಿ ತಾಯಿ… Read More ತಲಕಾವೇರಿ, ತೀರ್ಥೋಧ್ಭವ

ಪ್ರಕೃತಿ ವಿಕೋಪ

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ನಿರ್ಮಿಸಲು ನೆರವೇರಿದ ಶಿಲಾನ್ಯಾಸದಲ್ಲಿ ದೇಶದ ಎಲ್ಲಾ ಭಾಗಗಳ ನದಿಗಳ ನೀರು ಮತ್ತು ಪುಣ್ಯಕ್ಷೇತ್ರಗಳ ಮೃತ್ತಿಕೆಯನ್ನು ಬಳೆಸಲಾಗಿತ್ತು. ಅಂತಹ ಪುಣ್ಯಕಾರ್ಯಕ್ಕೆ ಕನ್ನಡಿಗರ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಿಂದಲೂ ಜುಲೈ 23ರಂದು ಕಾವೇರಿ ತೀರ್ಥ ಹಾಗೂ ಮೃತ್ತಿಯನ್ನು ಕಳುಹಿಸಿ, ಮನೆಯಿಂದಲೇ ರಾಮಮಂದಿರದ ಶಿಲಾನ್ಯಸ ನೋಡಿ ಸಂಭ್ರಮಿಸಿದ್ದ ತಲಕಾವೇರಿಯ ಪ್ರಧಾನ ಅರ್ಚಕರಾದ ಟಿ.ಎಸ್. ನಾರಾಯಣಾಚಾರ್ ಸೇರಿದಂತೆ ಅವರ ಹಿರಿಯ ಸೋದರ, ಪತ್ನಿ ಹಾಗೂ ಇಬ್ಬರು ಸಹಾಯಕ ಅರ್ಚಕರು ಮತ್ತು ಅವರ… Read More ಪ್ರಕೃತಿ ವಿಕೋಪ

ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ

ನೀರು ಮನುಷ್ಯನ ಅತ್ಯಗತ್ಯ ಜೀವನಾಂಶಕ ಪದಾರ್ಥವಾಗಿದೆ. ಒಂದು ಪಕ್ಷ ಆಹಾರವಿಲ್ಲದೇ ಕೆಲವು ದಿನಗಳು ಜೀವಿಸಬಲ್ಲ. ಆದರೆ ನೀರಿಲ್ಲದೆ ಒಂದು ದಿನವೂ ಇರಲಾರ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಹೊಟ್ಟೆ ಮೇಲೆ ತಣ್ಣಿರು ಬಟ್ಟೆ ಹಾಕಿಕೊಂಡಾರೂ ಜೀವನ ಮಾಡ್ತೀವಿ ಎನ್ನುವ ಮಾತುಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕೇಳಿರುತ್ತೇವೆ. ಹಿಂದೆಲ್ಲಾ ನಿತ್ಯಹರಿದ್ವರ್ಣ ಕಾಡುಗಳಿದ್ದವು. ಎಲ್ಲಾ ಕಡೆಯಲ್ಲೂ ಹಸಿರು ಮಯವಾಗಿರುತ್ತಿದ್ದು. ಹಾಗಾಗಿ ಕಾಲ ಕಾಲಕ್ಕೆ ಯಥೇಚ್ಚವಾಗಿ ಮಳೆಗಳು ಆಗುತ್ತಿದ್ದವು. ಕೆರೆ ಕಟ್ಟೆಗಳು, ಕಲ್ಯಾಣಿ, ಭಾವಿ ಮತ್ತು ಮತ್ತು ನದಿಗಳು ತುಂಬಿ ಹರಿಯುತ್ತಿದ್ದವು. ಇದರಿಂದ ಯಾರಿಗೂ ನೀರಿನ… Read More ಮಳೆ ನೀರು ಕೂಯ್ಲು ಮತ್ತು ನೀರಿನ ಸದ್ಬಳಕೆ