ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಶ್ರೀ ವೀರೇಂದ್ರ ಹೆಗ್ಗಡೆ

ನಾವು ಚಿಕ್ಕವರಿದ್ದಾಗ ಪುರಾಣ ಪುಣ್ಯಕಥೆಗಳಲ್ಲಿ ರಾಜರ್ಷಿ ಎಂದರೆ ಸದಾಕಾಲವು ಧರ್ಮಾತ್ಮನಾಗಿದ್ದು, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಸಮಾಜಮುಖೀ ಸೇವೆಗಳಲ್ಲಿ ನಿರತರಾಗಿರುವುದಲ್ಲದೇ, ಜನರು ತಮ್ಮ ಸಂಕಷ್ಟಗಳನ್ನೋ ಇಲ್ಲವೇ ವ್ಯಾಜ್ಯಗಳೊಂದಿಗೆ ಬಂದಾಗ ಅವರಿಗೆ ಸೂಕ್ತ ಪರಿಹಾರವನ್ನು ನೀಡುವವರಾಗಿರುತ್ತಾರೆ ಎಂದು ಕೇಳಿಯೋ ಇಲ್ಲವೇ ಓದಿ ತಿಳಿದಿದ್ದೇವೆ.ಈ ಕಲಿಯುಗದಲ್ಲಿಯೂ ಅಂತಹ ರಾಜರ್ಷಿಯವರು ಇದ್ದಾರೆಯೇ ಎಂದು ಯೋಚಿಸುತ್ತಿದ್ದಲ್ಲಿ, ಅವರೇ ನಮ್ಮ ಇಂದಿನ ಕನ್ನಡದ ಕಲಿಗಳು ಕಥಾನಾಯಕರಾದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೆಂದ್ರ ಹೆಗ್ಗಡೆಯವರ ಯಶೋಗಾಥೆಯನ್ನು ನೋಡಿದಲ್ಲಿ ತಿಳಿಯುತ್ತದೆ. ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯ ತಟದಲ್ಲಿರುವ… Read More ಶ್ರೀ ವೀರೇಂದ್ರ ಹೆಗ್ಗಡೆ