ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಮ್ಮನೆ, 1000 “ಸಂಭ್ರಮ”

ಎಲ್ಲರ ಜೀವನದಲ್ಲಿ ಹದಿನೆಂಟು ಎನ್ನುವುದು ಒಂದು ಪ್ರಮುಖ ಘಟ್ಟ. ಹದಿನೆಂಟಕ್ಕೆ ಹದಿಹರೆಯ ಎನ್ನುತ್ತೇವೆ. ಹೆಣ್ಣು ಮಕ್ಕಳಿಗಂತೂ ವಯಸ್ಸು ಹದಿನೆಂಟಾಗುತ್ತಿದ್ದಂತೆಯೇ ಅಪ್ಪಾ ಅಮ್ಮಂದಿರು ಮದುವೆ ಮಾಡಲು ಸಿದ್ಧರಾಗುತ್ತಾರೆ. ಸರ್ಕಾರ ಗಂಡು ಹೆಣ್ಣು ಎಂಬ ತಾರತಮ್ಯವಿಲ್ಲದೇ ಹದಿನೆಂಟು ವರ್ಷ ದಾಟಿದವರಿಗೆ ವಾಹನಗಳನ್ನು ಚಲಾಯಿಸುವ ಪರವಾನಗಿ ನೀಡುವುದರ ಜೊತೆಗೆ ಮತದಾನದ ಹಕ್ಕನ್ನೂ ನೀಡಿ ದೇಶವನ್ನೇ ಚಲಾಯಿಸುವ ಜವಾಬ್ಧಾರಿಯನ್ನು ನೀಡಿದೆ. ಇಷ್ಟೆಲ್ಲಾ ಪೀಠಿಕೆ ಏಕಪ್ಪಾ ಎಂದರೆ, ಇಂದಿಗೆ ಸರಿಯಾಗಿ ನಮ್ಮ ಮನೆಗೆ ಹದಿನೇಳು ತುಂಬಿ ಹದಿನೆಂಟು ವರ್ಷಗಳಾಗುತ್ತಿದೆ. ಈಗಿನಂತೆ ಆಗ ಮನೆ ಕಟ್ಟಿಸುವುದು… Read More ನಮ್ಮನೆ, 1000 “ಸಂಭ್ರಮ”

ಕ್ಷಮಯಾಧರಿತ್ರೀ

ಇಡೀ ದೇಶವೇ ಲಾಕೌಟ್ ಆಗಿ ಎಲ್ಲವೂ ಬಂದ್ ಆದಾಗ ನಮ್ಮ ಕ್ಷೇಮಕ್ಕಾಗಿ ಮಮ್ಮಲ ಮರುಗುವುದೇ. ನಮ್ಮ ದೇಶ ಮತ್ತು ನಮ್ಮ ಮನೆ. ಎರಡು ಜೀವಗಳು ಮಾತ್ರಾ ನಮ್ಮೆಲ್ಲಾ ತಪ್ಪುಗಳನ್ನೂ ಮನ್ನಿಸಿ ಒಪ್ಪಿಕೊಳ್ಳಲು ಸಿದ್ಧವಾಗಿರುತ್ತವೆ ಒಂದು ಹೆತ್ತ ತಾಯಿ ಮತ್ತೊಂದು ಕಟ್ಟಿಕೊಂಡ ಮಡದಿ. ಯಾವ ಬಂದ್ ಲೆಕ್ಕಿಸದೇ, ವರ್ಷದ ಮುನ್ನೂರೈವತ್ತೈದು ದಿನಗಳೂ, ದಿನದ ಇಪ್ಪತ್ನಾಲ್ಕು ಗಂಟೆಗಳೂ ನಮಗೆ ಆಶ್ರಯ ನೀಡಿರುವ ದೇಶ, ನಮಗೆ ಜನ್ಮ ನೀಡಿದ ತಾಯಿ ಮತ್ತು ಸಲಹುತ್ತಿರುವ ಮಡದಿ, ಈ ಕ್ಷಮಯಾಧರಿತ್ರೀಗಳಿಗೆ ಮತ್ತು ಅನ್ನಪೂರ್ಣೆಯರಿಗೆ ನಮ್ಮ… Read More ಕ್ಷಮಯಾಧರಿತ್ರೀ