ಹುಸ್ಕೂರು ಮದ್ದೂರಮ್ಮ ಜಾತ್ರೆ

ಬೆಂಗಳೂರು ಸಿಲಿಕಾನ್ ಸಿಟಿ ಪ್ರಪಂಚದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು ಆಧುನಿಕತೆಗೆ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿಗೆ ಅತ್ಯಂತ ವೇಗವಾಗಿ ಒಗ್ಗಿಕೊಂಡಿರುವ ನಗರವಾದರೂ ಇನ್ನೂ ತನ್ನ ಗ್ರಾಮೀಣ ಸೊಗಡನ್ನು ಹಾಗೆಯೇ ಉಳಿಸಿಕೊಂಡು ಬಂದಿರುವುದು ಮೆಚ್ಚುವಂತಹ ವಿಷಯವಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಿಂದ 5-6 ಕಿಮೀ ದೂರದಲ್ಲಿರುವ ಆನೇಕಲ್ ತಾಲ್ಲೂಕಿಗೆ ಸೇರುವ ಹುಸ್ಕೂರು ಗ್ರಾಮದಲ್ಲಿ ಚೋಳ ರಾಜರು ನಿರ್ಮಿಸಿದರು ಎನ್ನಲಾದ ಚಿಕ್ಕದಾದ ಶ್ರೀ ಮದ್ದೂರಮ್ಮ ದೇವಸ್ಥಾನವಿದ್ದು, ದಕ್ಷಿಣ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧವಾದ ದೇವಾಲಯವಾಗಿದೆ. ಈ ದೇವಿಯನ್ನು… Read More ಹುಸ್ಕೂರು ಮದ್ದೂರಮ್ಮ ಜಾತ್ರೆ

ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ

ಸಾಧಾರಣವಾಗಿ ಹಿಂದಿನಕಾಲದಲ್ಲಿ ಮಕ್ಕಳಿರಲವ್ವಾ ಮನೆ ತುಂಬಾ ಎನ್ನುವ ಗಾದೆ ಮಾತನ್ನು ಸಹಜವಾಗಿ ಕೇಳಿರುತ್ತಿದ್ದೆವು. ಅಂದೆಲ್ಲಾ ಮನೆ ತುಂಬಾ ಹೇಗೆ ಮಕ್ಕಳು ಇರುತ್ತಿದ್ದರೋ ಅದೇ ರೀತಿ ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ ಎನ್ನುವುದನ್ನೂ ಅಕ್ಷರಶಃ ಪಾಲಿಸಿಕೊಂಡು ಬರುತ್ತಿದ್ದರು. ಮನೆ ಮುಂದೆ ಅಥವಾ ಕೈ ತೋಟದಲ್ಲಿ ತೆಂಗಿನ ಮರ, ಹೂವು, ಹಣ್ಣುಗಳ ಗಿಡಗಳಿದ್ದರೆ ಮನೆಗೆ ಅದೇನೋ ಶೋಭೆ. ಆ ಮರ ಗಿಡಗಳ ನಿತ್ಯಹರಿದ್ವರ್ಣ ಬಣ್ಣ ಮನೆಗೆ ವಿಶೇಷ ಕಳೆಯನ್ನು ನೀಡುವುದಲ್ಲದೇ, ತರಕಾರಿ ಹೂವು ಹಣ್ಣು ಕಾಯಿಗಳನ್ನು ಕೊಡುವುದರ… Read More ಗಿಡ ಮರಗಳು ಇರಲವ್ವಾ ಮನೆಯ ಸುತ್ತ ಮುತ್ತಾ

ಯುಗಾದಿ ಹಬ್ಬ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹರುಷವ ಹೊಸತು ಹೊಸತು ತರುತಿದೆ. ಶ್ರೀ ದ. ರಾ. ಬೇಂದ್ರೆಯವರ ಈ ಜನಪ್ರಿಯ ಭಾವಗೀತೆಯನ್ನು ಕುಲವಧು ಚಲನಚಿತ್ರದಲ್ಲಿ ಅಳವಡಿಸಿಕೊಂಡು ಲೀಲಾವತಿಯವರು ಹಾಡುತ್ತ ನರ್ತಿಸುವುದನ್ನು ನೋಡುತ್ತಿದ್ದರೆ ಅದುವೇ ಕಣ್ಣಿಗೆ ಹಬ್ಬ. ಮನಸ್ಸಿಗೆ ಆನಂದ. ನಮ್ಮ ಹಿರೀಕರು ನಮ್ಮ ಹವಾಮಾನಕ್ಕೆ ಅನುಗುಣವಾಗಿಯೇ ಬಹುತೇಕ ಹಬ್ಬಗಳನ್ನು ಆಚರಿಸುವ ಪದ್ದತಿಯನ್ನು ರೂಢಿಮಾಡಿದ್ದಾರೆ. ಅಂತೆಯೇ ಪ್ರಕೃತಿಯೂ ತನ್ನ ಹಳೆಯದ್ದನೆಲ್ಲಾ ಕಳೆದು ಕೊಂಡು ಹೊಸ ಹೊಸದಾಗಿ ಚಿಗುರು ಎಲೆಗಳಿಂದ ಕಂಗೊಳಿಸುತ್ತಾ ಸೂರ್ಯನೂ ಕೂಡಾ ಕೆಲವೇ… Read More ಯುಗಾದಿ ಹಬ್ಬ