ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಕರಗ ಮಹೋತ್ಸವ
ಬೆಂಗಳೂರಿನ ಆಸುಪಾಸಿನಲ್ಲಿ ಶತಶತಮಾನಗಳಿಂದಲೂ ಪ್ರಮುಖ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ದೇವಿಯ ದೇವಸ್ಥಾನಗಳಲ್ಲಿ ಕರಗ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕರಗಕ್ಕೇ ತನ್ನದೇ ಆದ ವೈಶಿಷ್ಟ್ಯವಿದೆ. ಆದಿಶಕ್ತಿಯನ್ನು ಗುರುತಿಸಿ ಆರಾಧಿಸುವ ಹಲವಾರು ಸಂಪ್ರದಾಯಗಳಲ್ಲಿ ಕರಗ ಮಹೋತ್ಸವವೂ ಒಂದು. ಕರಗ(ಕರಕ) ಎಂಬ ಮಾತಿಗೆ ಕುಂಭ ಎಂಬ ಅರ್ಥವೂ ಇದೆ. ಕರಗದ ಒಂದೊಂದು ಅಕ್ಷರವೂ ಒಂದೊಂದು ಸಂಕೇತವನ್ನು ಹೊಂದಿವೆ ಎನ್ನುವ ಪ್ರತೀತಿ ಇದೆ. ಕ-ಕೈಯಿಂದ ಮುಟ್ಟದೆ, ರ-ರುಂಡದ ಮೇಲೆ ಧರಿಸಿ, ಗ-ಗತಿಸುವುದು (ತಿರುಗುವುದು) ಎಂಬ ಅರ್ಥ ವಿವರಣೆ ಬಳಕೆಯಲ್ಲಿದೆ. ಕರಗ ಪೂಜೆ… Read More ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ಕರಗ ಮಹೋತ್ಸವ