ಶಿರಸಿ ಮಾರಿಕಾಂಬಾ
ಶಿರಸಿ, ಉತ್ತರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ತಾಲ್ಲೂಕು ಕೇಂದ್ರವಾಗಿದ್ದು, ಧಾರ್ಮಿಕವಾಗಿ, ಪೌರಾಣಿಕವಾಗಿ ಸಾಂಸ್ಕೃತಿಕವಾಗಿ, ಐತಿಹಾಸಿಕವಾಗಿ ಮತ್ತು ಆರ್ಥಿಕವಾಗಿಯೂ ಕರ್ನಾಟಕದ ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧಿಯಾಗಿದೆ. ಶಿರಸಿ ಎಂದಾಕ್ಷಣ ಪ್ರತಿಯೊಬ್ಬರ ಬಾಯಿಯಲ್ಲಿಯೂ ಉದ್ಘಾರವಾಗುವುದೇ, ಪುರಾಣ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಸ್ಥಾನ ಮತ್ತು ಎರಡು ವರ್ಷಕ್ಕೊಮ್ಮೆ ಎಂಟು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬ ಜಾತ್ರೆ. ನಾವಿಂದು ಮಾರಿಕಾಂಬ ದೇವಾಲಯ, ಅಲ್ಲಿಯ ಸ್ಥಳ ಪುರಾಣದ ಜೊತೆ ಅಲ್ಲಿಯ ಜಾತ್ರಾ ಮಹೋತ್ಸವವನ್ನು ಕುಳಿತಲ್ಲಿಂದಲೇ ಕಣ್ತುಂಬಿಕೊಳ್ಳೋಣ ಬನ್ನಿ. ಶಿರಸಿಯ ಮಾರಿಕಾಂಬ… Read More ಶಿರಸಿ ಮಾರಿಕಾಂಬಾ