ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ಅಸುರರ ರಾಜ ಹಿರಣ್ಯಾಕ್ಷ ಭೂಲೋಕ, ಅತಳ, ವಿತಳ, ಸುತಳ, ಮಾಹಾತಳ, ಸಚಾತಳ, ತಳಾತಳ, ಪಾತಾಳ ಲೋಕದಲ್ಲೆಲ್ಲಾ, ತನ್ನ ರಾಕ್ಷಸೀ ಕೃತ್ಯಗಳಿಂದ ಕಂಟಕ ಪ್ರಾಯನಾಗಿ ನಾನಾ ರೀತಿಯ ಉಪಟಳಗಳನ್ನು ಕೊಡುತ್ತಿದ್ದಾಗ ದೇವಾನು ದೇವತೆಗಳ ಕೋರಿಕೆಯಂತೆ ಭಗವಾನ್ ವಿಷ್ಣು ತನ್ನ ದಶಾವತರದ ಮೂರನೇ ರೂಪವಾದ ವರಾಹ ರೂಪದಲ್ಲಿ ಸಂಹರಿಸಿದಾಗ, ಅವನ ತಮ್ಮ ಹಿರಣ್ಯಕಶಿಪುವು, ಕೋಪೋದ್ರಕ್ತನಾಗಿ ವಿಷ್ಣುವಿನ ಪರಮ ವೈರಿಯಾಗಿ, ಋಷಿ ಮುನಿಗಳ ಯಜ್ಞಯಾಗಾದಿಗಳಿಗೆ ಮತ್ತು ಭೂಲೋಕ ವಾಸಿಗಳಿಗೆ ನಾನಾ ರೀತಿಯ ತೊಂದರೆಗಳನ್ನು ಕೊಡಲು ಆರಂಭಿಸಿದ್ದಲ್ಲದೇ, ತನಗೆ ಸಾವೇ ಬಾರದಂತೆ ಅಮರನಾಗಬೇಕೆಂಬ… Read More ಶ್ರೀ ಉಗ್ರ ನರಸಿಂಹ ಸ್ವಾಮಿಯ ಕೋಪ ಶಮನ ಮಾಡಿದ ಶ್ರೀ ಶರಭೇಶ್ವರ

ದೇವರಾಯನ ದುರ್ಗ

ಬೆಂಗಳೂರಿನ ಹತ್ತಿರವೇ ಸುಂದರವಾದ ರಮಣೀಯವಾದ ಪ್ರಕೃತಿ ತಾಣವಿರಬೇಕು. ಅದು ಪುಣ್ಯಕ್ಷೇತ್ರವೂ ಆಗಿರಬೇಕು. ಹಿರಿಯರು ಕಿರಿಯರೂ ಎಲ್ಲರೂ ಮೆಚ್ಚುವಂತಿರಬೇಕು ಎನ್ನುವ ಸುಂದರವಾದ ತಾಣಕ್ಕೆ ಅರಸುತ್ತಿದ್ದೀರೆ ಎಂದರೆ ಬೆಂಗಳೂರಿನಿಂದ ಕೇವಲ 72 km ದೂರದಲ್ಲಿರುವ ಸುಮಾರು 1 ಗಂಟೆ 30 ನಿಮಿಷಗಳಲ್ಲಿ ಆರಾಮವಾಗಿ ತಲುಪಬಹುದಾದಂತಹ ಪುರಾಣ ಪ್ರಸಿದ್ಧ ಪಕೃತಿತಾಣವೇ ದೇವರಾಯನ ದುರ್ಗ ಎಂದರೆ ಅತಿಶಯೋಕ್ತಿ ಎನಿಸದು. ದೇವರಾಯನದುರ್ಗವು ತುಮಕೂರು ಜಿಲ್ಲೆಗೆ ಸೇರಿರುವ ಬೆಟ್ಟ ಗುಡ್ಡ, ಅರಣ್ಯಗಳಿಂದ ಆವೃತವಾಗಿರುವ ಹತ್ತು ಹಲವಾರು ದೇವಾಲಯಗಳನ್ನು ಒಳಗೊಂಡಿರುವ ಒಂದು ಸುಂದರವಾದ ಗಿರಿಧಾಮವಾಗಿರುವುದಲ್ಲದೇ, ಪ್ರಕೃತಿ ಪ್ರಿಯರಿಗೆ… Read More ದೇವರಾಯನ ದುರ್ಗ

ದೈವ ಸಂಕಲ್ಪ

ಈಗಾಗಲೇ ಹತ್ತು ಹಲವಾರು ಬಾರಿ ಬಾರಿ ತಿಳಿಸಿರುವಂತೆ ಬೆಂಗಳೂರಿನ ವಾಸಿಯಾಗಿದ್ದರೂ ನಮ್ಮೂರು ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣದ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರ ಜನರು ವಾಸಿಸುವ ಕೃಷಿಪ್ರಧಾನವಾದ ಗ್ರಾಮವಾದರೂ, ನಮ್ಮೂರಿನಲ್ಲಿರುವ ದೇವಾಲಯಗಳ ಸಂಖ್ಯೆ ಹತ್ತಕ್ಕೂ ಹೆಚ್ಚು. ನಮ್ಮೂರ ಗ್ರಾಮದೇವತೆಯ ಹಬ್ಬ ಪ್ರತೀ ವರ್ಷ ಯುಗಾದಿ ಕಳೆದು ಹದಿನೈದು ದಿನಗಳ ನಂತರ ಬರುವ ಗುರುವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಮೂರುವಾರಗಳ ಕಾಲ ಅದ್ದೂರಿಯಾಗಿ ನೂರಾರು ವರ್ಷಗಳಿಂದ ಸಂಭ್ರಮ ಸಡಗರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದುರಾದೃಷ್ಟವಷಾತ್ ಈ ಬಾರೀ ಕೋವಿಡ್ ಮಹಾಮಾರಿಯ ಕಾರಣದಿಂದಾಗಿ… Read More ದೈವ ಸಂಕಲ್ಪ