ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ಸ್ವಾತಂತ್ರ್ಯ ಪೂರ್ವದ 1930ರ ಸಮಯದಲ್ಲಿ ಬೆಂಗಳೂರಿನಲ್ಲಿ ಬಹಳ ಕಾಲ ಮಳೆಯಿಲ್ಲದೇ ಬೀಕರ ಬರಗಾಲ ಉಂಟಾಗಿ ಜನರಿಗೆ ಮತ್ತು ದನಕರುಗಳಿಗೆ ಕುಡಿಯುವ ನೀರಿಗೂ ತೊಂದರೆಯುಂಟಾದಾಗ ನೀರಿನ  ಅಗತ್ಯವನ್ನು ಅರಿತ ಅಂದಿನ ಮೈಸೂರು ಸಂಸ್ಥಾನದ ಒಡೆಯರಾಗಿದ್ದ ಶ್ರೀ ನಾಲ್ಮಡಿ ಚಾಮರಾಜ ಒಡೆಯರ್ ಅವರು ಮುಖ್ಯ ಇಂಜೀನಿಯರ್ ಆಗಿದ್ದ ಶ್ರೀ ಸರ್.ಎಂ.ವಿಶ್ವೇಶ್ವರಯ್ಯನವರಿಗೆ ಇದಕ್ಕೊಂದು ಪರಿಹಾರವನ್ನು ನೀಡಲು ಸೂಚಿಸಿದ ಪರಿಣಾಮವೇ, ಬೆಂಗಳೂರಿನಿಂದ ಪಶ್ಚಿಮಕ್ಕೆ 35 ಕಿ.ಮೀ ದೂರದಲ್ಲಿರುವ ಮಾಗಡಿ ಬಳಿಯ ಅರ್ಕಾವತಿ ನದಿ ಮತ್ತು ಕುಮುದಾವತಿ ನದಿಯ ಸಂಗಮದಲ್ಲಿ ಈ ಬೃಹತ್ತಾದ ತಿಪ್ಪಗೊಂಡನಹಳ್ಳಿ… Read More ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ವಿಶ್ವೇಶ್ವಯರಯ್ಯನವರು ಮೈಸೂರಿನ ದಿವಾನರಾಗಿದ್ದಾಗ ಮಲೆನಾಡಿನ ಪ್ರಾಂತ್ಯದಲ್ಲಿ ಜೋರಾದ ಮಳೆಯಾಗಿ ಶರಾವತಿ ಉಕ್ಕಿ ಹರಿಯುತ್ತಿದ್ದಳು. ಜೋಗದ ಜಲಪಾತದಲ್ಲಿ ರಾಜಾ ರಾಣಿ, ರೋರರ್ ಮತ್ತು ರಾಕೆಟ್ ಧುಮ್ಮಿಕ್ಕೆ ಹರಿಯುತ್ತಿತ್ತು. ಅಂತಹ ರಮಣೀಯ ದೃಶ್ಯವನ್ನು ನೋಡಲು ಮೈಸೂರು ಮಹಾರಾಜರು ದಿವಾನರಾಗಿದ್ದ ವಿಶ್ವೇಶ್ವರಯ್ಯನವರನ್ನೂ ಒಳಗೊಂಡಂತೆ ತಮ್ಮ ಮಂತ್ರಿಗಣದ ಪರಿವಾರ ಸಮೇತ ಜೋಗಕ್ಕೆ ಭೇಟಿ ನೀಡಿ ಎಲ್ಲರೂ ಜೋಗದ ರುದ್ರರಮಣೀಯ ದೃಶ್ಯವನ್ನು ಸವಿಯುತ್ತಿದ್ದರೆ, ವಿಶ್ವೇಶ್ವರಯ್ಯನವರ ಬಾಯಿಯಿಂದ ಉದ್ಗಾರವಾದ ಮಾತು Oh! What a waste? ಎಲ್ಲರೂ ಪ್ರಕೃತಿಯ ಸೌಂದರ್ಯೋಪಾಸಕರಾಗಿದ್ದರೆ, ವಿಶ್ವೇಶ್ವರಯ್ಯನವರು ಜನಾನುರಾಗಿಯಾಗಿ, ಇಂತಹ ಜಲಸಂಪತ್ತನ್ನು… Read More ವಿಶ್ವಮಾನ್ಯ ವಿಶ್ವವಂದಿತ ವಿಶ್ವೇಶ್ವರಯ್ಯನವರು

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು