ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಅಪ್ಪಾ

ರಮೇಶ ಹಳ್ಳಿಯೊಂದರಲ್ಲಿರಲ್ಲಿ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವಂತೆ ನಾವಿಬ್ಬರು ನಮಗಿಬ್ಬರು ಎಂಬು ಮುದ್ದಾದ ಸಂಸಾರವಿತ್ತು. ಪಿತ್ರಾರ್ಜಿತವಾಗಿ ಬಂದಿದ್ದ ಅಲ್ಪ ಸ್ವಲ್ಪ ಹೊಲ ಗದ್ದೆಯಲ್ಲೇ ಮಳೆಯಾಧಾರಿತವಾಗಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಗಳು ಹತ್ತನೇ ತರಗತಿಯಲ್ಲಿ ಇಂಗ್ಲೀಶ್, ಗಣಿತದಲ್ಲಿ ಫೇಲ್ ಆಗಿ ಮುಂದೆ ಓದಲಾರೆ ಎಂದಾಗ ಮಗಳನ್ನು ಬಲವಂತ ಮಾಡದೇ, ಮನೆಯಲ್ಲೇ ಹಾಡು ಹಸೆ, ಆಡುಗೆ, ಶಾಸ್ತ್ರ ಸಂಪ್ರದಾಯಗಳನ್ನೆಲ್ಲಾ ಕಲಿಸಿ ವಯಸ್ಸು 18 ಆಗುತ್ತಿದ್ದಂತೆಯೇ ಹತ್ತಿರದ ಪಟ್ಟಣವೊಂದರಲ್ಲಿ ಕೆಲಸ ಮಾಡುತ್ತಿದ ಹುಡುಗನೊಂದಿಗೆ ಮದುವೆ ಮಾಡಿಕೊಟ್ಟಿದ್ದ. ಹೆಂಡತಿಯ ಕೋರಿಕೆಯ… Read More ಅಪ್ಪಾ

ಸಮಸ್ಯೆ ಒಂದು ಪರಿಹಾರ ನೂರು

ಕಳೆದ ಒಂದು ವರ್ಷದಿಂದಲೂ ಕೊರೋನಾ ಮಾಹಾಮಾರಿಯಿಂದಾಗಿ ಇಡೀ ಪ್ರಪಂಚವೇ online ಮೂಲಕ ನಡೆದುಕೊಂಡು ಹೋಗುತ್ತಿದೆ. ನಮ್ಮ ದೇಶದ ವಿದ್ಯಾರ್ಥಿಗಳೂ ಇದಕ್ಕೆ ಹೊರತಾಗಿಲ್ಲ. ಹಳ್ಳಿಗಾಡುಗಳಲ್ಲಂತೂ ಸ್ವಲ್ಪ ಜೋರಾದ ಗಾಳಿ ಇಲ್ಲವೇ ಮಳೆ ಬಂದಿತೆಂದರೂ ಸಾಕು, ವಿದ್ಯುತ್ ಕಡಿತವಾಗಿ ನೆಟ್ವರ್ಕ್ ಸಮಸ್ಯೆ ಕಾಣಿಸಿ ಕೊಳ್ಳುತ್ತದೆ. ಇಲ್ಲೊಂದು ಗುಡ್ಡಗಾಡಿನ ಹಳ್ಳಿಯ ಹುಡುಗಿ ತನ್ನ ತರಗತಿಗಳು ಆನ್‌ಲೈನ್ ‌ನಲ್ಲಿ ಆರಂಭವಾಗಿದೆ. ಜೋರಾದ ಮಳೆಯಿಂದಾಗಿ ಮನೆಯಲ್ಲಿ ನೆಟ್ವರ್ಕ್ ಇಲ್ಲ. ಅರೇ.. ನೆಟ್ವರ್ಕ್ ಇಲ್ಲಾ ಎಂದು ಗೊಣಗಾಡದೇ ಕೂಡಲೇ, ಅಪ್ಪಾ ಮತ್ತು ತಂಗಿಯ ಜೊತೆ ಮನೆಯ… Read More ಸಮಸ್ಯೆ ಒಂದು ಪರಿಹಾರ ನೂರು

ಮಾತೃ ಸ್ವರೂಪೀ ಅಪ್ಪಾ

ಅದೊಂದು ಐಶಾರಾಮೀ ಅಂತರಾಷ್ಟ್ರೀಯ ಶಾಲೆಯ ಉದ್ಯಾನವನದಲ್ಲಿ  ಗಂಗಣ್ಣ ಗಿಡಗಳಿಗೆ ನೀರನ್ನು ಹಾಕಿ ಪೋಷಿಸುತ್ತಿದ್ದರು. ಸಂಜೆ ಬಿಸಿಲು ತೀವ್ರವಾಗಿ ಅತನನ್ನು ಬಸವಳಿಸುತ್ತಿತ್ತಾದರೂ ಅದನ್ನು ಲೆಕ್ಕಿಸದೆ ತನ್ನ ಕರ್ತವ್ಯದಲ್ಲಿ ನಿರತನಾಗಿದ್ದ ಮಾಲಿ ಗಂಗಣ್ಣನ ಅವರ ಬಳಿ ಬಂದ ಸಹೋದ್ಯೋಗಿಯೊಬ್ಬರು, ಪ್ರಿನ್ಸಿಪಾಲ್ ಮೇಡಂ ನಿಮ್ಮನ್ನು ಕರೆಯುತ್ತಿದ್ದಾರೆ. ಈ ಕೂಡಲೇ ಅವರನ್ನು ಭೇಟಿಯಾಗಬೇಕೆಂತೇ ಎಂದು ಹೇಳಿದರು. ಅರೇ! ಏನಪ್ಪಾ ಆಯ್ತು? ಪ್ರಿನ್ಸಿಪಾಲ್ ಮೇಡಂ ಕರೆಯುವಷ್ಟು ತಪ್ಪನ್ನು ನಾನೇನು ಮಾಡಿದೆ? ಎಂದು ಯೋಚಿಸುತ್ತಲೇ, ಭಯ ಭಯದಿಂದ ಬೆವರು ಸುರಿಯುತ್ತಿದ್ದ ಮುಖ ಮತ್ತು ಕೈಕಾಲುಗಳನ್ನು ತೊಳೆದುಕೊಂಡು… Read More ಮಾತೃ ಸ್ವರೂಪೀ ಅಪ್ಪಾ

ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ನಮ್ಮಂತಹ ಮಧ್ಯಮ ವರ್ಗದವರಿಗೆ ವಿಮಾನದಲ್ಲಿ ಪ್ರಯಾಣ ಮಾಡುವುದೆಂದರೆ ಅದೇನೋ ಖುಷಿ. ದೂರ ದೂರದ ಪ್ರದೇಶಗಳಿಗೆ ಕೆಲವೇ ಗಂಟೆಗಳಲ್ಲಿ ಹೋಗುಬಹುದು ಎಂಬ ಸಂಭ್ರಮ. ಅದರೆ ನಾವೂ ನೀವು ಎಣಿಸಿದಂತೆ ವಿಮಾನಯಾನ ಅಷ್ಟು ಸುಲಭದಲ್ಲವಾಗಿದ್ದು, ವಿಮಾನ ಯಾನದ ಸಮಯದಲ್ಲಿ ಹೃದಯವೇ ಬಾಯಿಗೆ ಬಂದಂತೆ ಆಗಿ ಅಂದು ನಾನು ಅನುಭವಿಸಿದ ರೋಚಕತೆಗಳು ಇದೋ ನಿಮಗಾಗಿ. ವರ್ಷಗಳ ಹಿಂದೆ ಕಛೇರಿಯ ಕೆಲಸದ ನಿಮಿತ್ತ ಜಪಾನ್ ದೇಶದ ಟೋಕೀಯೋ ನಮ್ಮ ಮತ್ತೊಂದು ಶಾಖೆಗೆ ಹೋಗುವ ಸಂದರ್ಭ ಒದಗಿ ಬಂದಿತ್ತು. ಅದು ನನ್ನ ಮೊತ್ತ ಮೊದಲ… Read More ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ನಾನು ಅಪ್ಪನಾದ ಮಧುರ ಕ್ಷಣ

ಭಾರತದಂತಹ ಪುಣ್ಯಭೂಮಿಯಲ್ಲಿ ಹುಟ್ಟುವುದಕ್ಕೇ ಪುಣ್ಯ ಮಾಡಿರ ಬೇಕು. ಇನ್ನು ಕಾಲ ಕ್ರಮೇಣ ದೊಡ್ಡವರಾಗುತ್ತಿದ್ದಂತೆಯೇ, ಅವರೇ ಅಪ್ಪಾ, ಅಮ್ಮಾ ಇಲ್ಲವೇ ತಾತ ಮತ್ತು ಅಜ್ಜಿಯರಾಗಿ ಭಡ್ತಿ ಪಡೆಯುವ ಅನುಭವವಂತೂ ನಿಜಕ್ಕೂ ಅದ್ಭುತ ಮತ್ತು ಅವರ್ಣನೀಯವೇ ಸರಿ.

ಇನ್ನು ನಿಮ್ಮವನೇ ಉಮಾಸುತದಿಂದ ಸೃಷ್ಟಿಕರ್ತ ಉಮಾಸುತ ಎಂಬ ಅಡಿಬರಹ ಬರೆಯಲು ಕಾರಣವೇನು? ಎಂಬೆಲ್ಲಾ ಕುತೂಹಲಕ್ಕೆ ಇಲ್ಲಿದೇ ಉತ್ತರ.… Read More ನಾನು ಅಪ್ಪನಾದ ಮಧುರ ಕ್ಷಣ