ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಎದೆ ತುಂಬಿ ಬರೆಯುವೆನು/ಮಾತನಾಡುವೆನು ಎಂದಿನಂತೇ!

ಕನ್ನಡದ ಕವಿ, ಅದರಲ್ಲೂ ಸಮನ್ವಯ ಕವಿ. ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ. ಗೋವಿಂದ ಪೈ, ಕುವೆಂಪು ಮತ್ತು ರಾಷ್ಟ್ರಕವಿ ಗೌರವಕ್ಕೆ ಪಾತ್ರರಾದ ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ ಅರ್ಥಾತ್ ಜಿ. ಎಸ್. ಶಿವರುದ್ರಪ್ಪ ಅಥವಾ ಎಲ್ಲರಿಗೂ ಪ್ರೀತಿಯ ಜಿ.ಎಸ್.ಎಸ್ ಅವರ ಅತ್ಯಮೂಲ್ಯ ಕೃತಿ ಎಂದೇ ಪರಿಗಣಿಸಲಾಗಿರುವ ಮತ್ತು ಕನ್ನಡದ ಬಹುತೇಕ ಭಾವಗೀತೆ ಗಾಯಕರು ಎಲ್ಲಾ ಕಡೆಯಲ್ಲೂ ಎಲ್ಲಾ ಸಮಯದಲ್ಲೂ ಹಾಡಿ ಎಲ್ಲರ ಮನಸ್ಸೂರೆಗೊಳ್ಳುವ ಎದೆ ತುಂಬಿ ಹಾಡುವೆನು ಎಂಬ ಹಾಡಿನಲ್ಲಿ ಬರುವ ಈ ಸಾಲುಗಳು ನಿಜಕ್ಕೂ ಅನನ್ಯವಾಗಿದೆ.… Read More ಎದೆ ತುಂಬಿ ಬರೆಯುವೆನು/ಮಾತನಾಡುವೆನು ಎಂದಿನಂತೇ!

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಅಪ್ಪಾ

ರಮೇಶ ಹಳ್ಳಿಯೊಂದರಲ್ಲಿರಲ್ಲಿ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವಂತೆ ನಾವಿಬ್ಬರು ನಮಗಿಬ್ಬರು ಎಂಬು ಮುದ್ದಾದ ಸಂಸಾರವಿತ್ತು. ಪಿತ್ರಾರ್ಜಿತವಾಗಿ ಬಂದಿದ್ದ ಅಲ್ಪ ಸ್ವಲ್ಪ ಹೊಲ ಗದ್ದೆಯಲ್ಲೇ ಮಳೆಯಾಧಾರಿತವಾಗಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಗಳು ಹತ್ತನೇ ತರಗತಿಯಲ್ಲಿ ಇಂಗ್ಲೀಶ್, ಗಣಿತದಲ್ಲಿ ಫೇಲ್ ಆಗಿ ಮುಂದೆ ಓದಲಾರೆ ಎಂದಾಗ ಮಗಳನ್ನು ಬಲವಂತ ಮಾಡದೇ, ಮನೆಯಲ್ಲೇ ಹಾಡು ಹಸೆ, ಆಡುಗೆ, ಶಾಸ್ತ್ರ ಸಂಪ್ರದಾಯಗಳನ್ನೆಲ್ಲಾ ಕಲಿಸಿ ವಯಸ್ಸು 18 ಆಗುತ್ತಿದ್ದಂತೆಯೇ ಹತ್ತಿರದ ಪಟ್ಟಣವೊಂದರಲ್ಲಿ ಕೆಲಸ ಮಾಡುತ್ತಿದ ಹುಡುಗನೊಂದಿಗೆ ಮದುವೆ ಮಾಡಿಕೊಟ್ಟಿದ್ದ. ಹೆಂಡತಿಯ ಕೋರಿಕೆಯ… Read More ಅಪ್ಪಾ

ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ

ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾದ ಮೂರ್ನಾಲ್ಕು ತಿಂಗಳುಗಳಲ್ಲೇ ಗಂಡ ಹೆಂಡತಿಯರು ಬೇರಾಗುತ್ತಿರುವ ಸಂಗತಿಯ ಹಿಂದೆ ಕೇವಲ ಗಂಡ ಹೆಂಡತಿಯರಲ್ಲದೇ, ಹೇಗೆ ಮೂರನೆಯವರ ಅತಿಯಾದ ಪ್ರೀತಿ ಕಾರಣವಾಗಬಲ್ಲದು ಎಂಬ ಕುತೂಹಲಕಾರಿ ಕಥೆ-ವ್ಯಥೆ ಇದೋ ನಿಮಗಾಗಿ… Read More ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ

ಅತ್ತೆ-ಸೊಸೆ, ಸಂಬಂಧ-ಅನುಬಂಧ

ಪತ್ನಿ ಮತ್ತೆ ಮತ್ತೆ ತಾಯಿಯ ಮೇಲೆ ಆರೋಪ ಮಾಡುತ್ತಿದ್ದಳು. ಆದರೆ ಪತಿ ಅವಳಿಗೆ ತನ್ನ ಮಾತಿನ ಮಿತಿ ಮೀರಬೇಡವೆಂದು ಮನವಿ ಮಾಡುತ್ತಿದ್ದ. ಆದರೂ ಪತ್ನಿ ಮೌನವಾಗದೆ ಜೋರು ಜೋರಾಗಿ ಟೇಬಲ್ ಮೇಲೆ ಕೈಸನ್ನೆ ಮಾಡುತ್ತಾ ಕೂಗಿ ಹೇಳುತ್ತಿದ್ದಳು ನಾನು ಚಿನ್ನದ ಹಾರವನ್ನು ಇಲ್ಲೇ ಟೇಬಲ್ ಮೇಲೆ ಇಟ್ಟಿದ್ದೆ, ನಮ್ಮಿಬ್ಬರನ್ನು ಬಿಟ್ಟರೆ ಬೇರೆ ಯಾರು ಕೋಣೆಯೊಳಗೆ ಬಂದಿಲ್ಲ, ಮನೆಯಲ್ಲಿ ಮೂರನೆಯವರು ನಿಮ್ಮ ತಾಯಿಯೇ. ಹಾಗಾಗಿ ಅವರೇ ಅದನ್ನು ತೆಗೆದುಕೊಂಡಿದ್ದಾರೆ. ಅಲ್ಲಿಯವರೆಗೂ ಸುಮ್ಮನಿದ್ದ ಪತಿ, ತನ್ನ ತಾಯಿಯ ಮೇಲೆ ಕಳ್ಳತನದ… Read More ಅತ್ತೆ-ಸೊಸೆ, ಸಂಬಂಧ-ಅನುಬಂಧ

ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಸಾಮ್ಯಾನ್ಯವಾಗಿ ನಮ್ಮ ಹಿಂದಿನ ಕಾಲದವರು ಈಗಿನಷ್ಟು ಆರ್ಥಿಕವಾಗಿ ಸಧೃಡರಿಲ್ಲದಿದ್ದರೂ, ಸರಿಯಾಗಿ ಎರಡು ಹೊತ್ತು ಊಟ ಮಾಡಲು ಇರುತ್ತಿರದಿದ್ದರೂ, ಯಾವುದೇ ರೋಗ ರುಜಿನಗಳಿಲ್ಲದೇ ಆರಾಮವಾಗಿ 80-90 ವರ್ಷಗಳು ಜೀವಿಸುತ್ತಿದ್ದರು. ಅದೆಷ್ಟೋ ಜನ ಶತಾಯುಷಿಗಳಾಗಿಯೂ ಜೀವಿಸಿದ್ದರು. ಅವರ ನೆನಪಿನ ಶಕ್ತಿಯಂತೂ ಕೇಳುವುದೇ ಬೇಡ. ಹಾಗಾಗಿಯೇ ಸುಲಭವಾಗಿ ಐದಾರು ತಲೆಮಾರುಗಳನ್ನು ಸುಲಭವಾಗಿ ನೋಡಬಹುದಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವೆಲ್ಲವೂ ಮಾಯವಾಗಿದೆ. 20-30 ವರ್ಷಕ್ಕೇ ಕೂದಲೆಲ್ಲಾ ಬೆಳ್ಳಾಗಾಗಿ ಅದೆಷ್ಟೋ ಮಂದಿಗಳಿಗೆ ಕೂದಲೆಲ್ಲ ಉದುರಿ ಹೋಗಿ, ಹತ್ತಾರು ರೀತಿಯ ಖಾಯಿಲೆಗಳಿಗೆ ತುತ್ತಾಗಿ ಊಟಕ್ಕಿಂತಲೂ ಹೆಚ್ಚಾಗಿ… Read More ಬಂದದ್ದೆಲ್ಲಾ ಬರಲಿ ಗೋವಿಂದನ ದಯೆ ಇರಲಿ

ಉಮಾ

ಆಗಷ್ಟೇ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿತ್ತು. ಕೆ.ಜಿ.ಎಫ್ ನಲ್ಲಿದ್ದ  ಅಂದಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ರಾಜಾರಾವ್ ಅವರ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಸತವಾಗಿ ಏಳು ಗಂಡು ಮಕ್ಕಳ (ಅರು ಮಕ್ಕಳು ಹುಟ್ಟಿದ ಕೆಲವೇ ತಿಂಗಳುಗಳಲ್ಲಿ ಅಳಿದು ಹೋಗಿದ್ದವು) ನಂತರ ಅವರ  ಮನೆಯಲ್ಲಿ ಮೊತ್ತ ಮೊದಲಬಾರಿಗೆ  ಮಹಾಲಕ್ಷ್ಮಿಯ ಜನನವಾಗಿತ್ತು.  ರಾಯರ ಮನೆ ದೇವರು ಮೇಲುಕೋಟೆ ಯೋಗಾನರಸಿಂಹನಾಗಿದ್ದ ಕಾರಣ,  ಅವರಿಗೆ ತಮ್ಮ ಮಗಳ ಹೆಸರು  ಲಕ್ಷ್ಮಿಯ ಹೆಸರಿಡಬೇಕು ಎಂದಿತ್ತು. ಆದರೆ ಅವರ ಮಡದಿ ವಿಶಾಲಾಕ್ಷಿ ಅವರ ತಾಯಿಯವರು ತಮ್ಮ ಮನೆ ದೇವರು … Read More ಉಮಾ

ಮಾತೃ ಸ್ವರೂಪೀ ಅಪ್ಪಾ

ಅದೊಂದು ಐಶಾರಾಮೀ ಅಂತರಾಷ್ಟ್ರೀಯ ಶಾಲೆಯ ಉದ್ಯಾನವನದಲ್ಲಿ  ಗಂಗಣ್ಣ ಗಿಡಗಳಿಗೆ ನೀರನ್ನು ಹಾಕಿ ಪೋಷಿಸುತ್ತಿದ್ದರು. ಸಂಜೆ ಬಿಸಿಲು ತೀವ್ರವಾಗಿ ಅತನನ್ನು ಬಸವಳಿಸುತ್ತಿತ್ತಾದರೂ ಅದನ್ನು ಲೆಕ್ಕಿಸದೆ ತನ್ನ ಕರ್ತವ್ಯದಲ್ಲಿ ನಿರತನಾಗಿದ್ದ ಮಾಲಿ ಗಂಗಣ್ಣನ ಅವರ ಬಳಿ ಬಂದ ಸಹೋದ್ಯೋಗಿಯೊಬ್ಬರು, ಪ್ರಿನ್ಸಿಪಾಲ್ ಮೇಡಂ ನಿಮ್ಮನ್ನು ಕರೆಯುತ್ತಿದ್ದಾರೆ. ಈ ಕೂಡಲೇ ಅವರನ್ನು ಭೇಟಿಯಾಗಬೇಕೆಂತೇ ಎಂದು ಹೇಳಿದರು. ಅರೇ! ಏನಪ್ಪಾ ಆಯ್ತು? ಪ್ರಿನ್ಸಿಪಾಲ್ ಮೇಡಂ ಕರೆಯುವಷ್ಟು ತಪ್ಪನ್ನು ನಾನೇನು ಮಾಡಿದೆ? ಎಂದು ಯೋಚಿಸುತ್ತಲೇ, ಭಯ ಭಯದಿಂದ ಬೆವರು ಸುರಿಯುತ್ತಿದ್ದ ಮುಖ ಮತ್ತು ಕೈಕಾಲುಗಳನ್ನು ತೊಳೆದುಕೊಂಡು… Read More ಮಾತೃ ಸ್ವರೂಪೀ ಅಪ್ಪಾ