ಕೈ ತುತ್ತು

ಕೈ ತುತ್ತು ಎನ್ನುವ ಪದ ಕೇಳಿದ ತಕ್ಷಣ ಥಟ್ ಅಂತಾ ನಮಗೇ ಗೊತ್ತಿಲ್ಲದ ಹಾಗೆ ಹಂಸಲೇಖ ಮತ್ತು ಪ್ರಭಾಕರ್ ಅವರ ಜೋಡಿ ನೀಡಿದ ಅತ್ಯುತ್ತಮ ಹಾಡುಗಳಲ್ಲಿ ಒಂದಾದ ಕೈ ತುತ್ತು ಕೊಟ್ಟೋಳು ಐ ಲವ್ ಯೂ ಎಂದಳೋ ಮೈ ಮದರ್ ಇಂಡಿಯಾ ಎನ್ನುವ ಹಾಡನ್ನು ನಮ್ಮ ಮನಸ್ಸಿನ ಮುಂದೆ ಬಂದು ಆ ಹಾಡನು ಗುನುಗಲು ಆರಂಭಿಸುತ್ತೇವೆ. ಆದರೆ ನಿಜವಾಗಿಯೂ ಅಮ್ಮನ ಇಲ್ಲವೇ ಅಜ್ಜಿಯ ಕೈ ತುತ್ತಿನ ರುಚಿಯನ್ನು ಬಲ್ಲವರೇ ಬಲ್ಲ ಅದರ ಸವಿಯನ್ನು. ಹಾಗಾಗಿ ಅಂತಹ ಅಪರೂಪದ… Read More ಕೈ ತುತ್ತು

ವಂಶವಾಹಿ ಸಂಸ್ಕಾರ (ಜೀನ್ಸ್)

ಮನೆಯಲ್ಲಿರುವ ಚಿಕ್ಕ ಮಕ್ಕಳು ಮನೆಯಲ್ಲಿರುವ ಅಜ್ಜಿ ತಾತ, ಅಪ್ಪಾ ಅಮ್ಮಾ ಅಣ್ಣ ಅಕ್ಕಾ ಅವರನ್ನು ನೋಡಿಯೇ ಕಲಿತುಕೊಳ್ಳುತ್ತಾರೆ. ಹಾಗಾಗಿಯೇ ಚಿಕ್ಕ ಮಕ್ಕಳ ಮುಂದೆ ಸದಾ ಕಾಲವೂ ಸಾಧ್ಯವಾದಷ್ಟೂ ಒಳ್ಳೆಯ ಸಂಸ್ಕಾರವಂತರಾಗಿಯೇ ವ್ಯವಹರಿಸುವುದನ್ನು ಎಲ್ಲೆಡೆಯಲ್ಲಿಯೂ ನೋಡಬಹುದಾಗಿದೆ. ಚಿಕ್ಕ ಮಕ್ಕಳೂ ತಮಗೇ ಅರಿವಿಲ್ಲದಂತೆಯೇ ಮನೆಯಲ್ಲಿರುವ ದೊಡ್ಡವರ ಸ್ವಭಾವವನ್ನು ಯಥವತ್ತಾಗಿ ಅಳವಡಿಸಿಕೊಂಡಿರುತ್ತಾರೆ. ಅಂತಹದೇ ಒಂದು ಸುಂದರ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಮನಸ್ಸಾಗುತ್ತಿದೆ. ಹೇಳಿ ಕೇಳಿ ನಮ್ಮದು ಸಂಪ್ರದಾಯಸ್ಥ ಕುಟುಂಬ. ಕಲೆ, ಸಂಗೀತ ಮತ್ತು ಸಾಹಿತ್ಯ ಎನ್ನುವುದು ನಮ್ಮ ಕುಟುಂಬದಲ್ಲಿ ಹಾಸು ಹೊಕ್ಕಾಗಿದೆ.… Read More ವಂಶವಾಹಿ ಸಂಸ್ಕಾರ (ಜೀನ್ಸ್)

ಹೂವಿನ ಹಾರ

ಹಬ್ಬ ಹರಿ ದಿನಗಳಲ್ಲಿ ದೇವರ ಅಲಂಕಾರ ಮಾಡಲು ಯಾವುದೇ ರೀತಿಯ ಎಷ್ಟೇ ಆಭರಣಗಳಿಂದ ದೇವರನ್ನು ಅಲಂಕರಿಸಿದರೂ ವಿಧ ವಿಧದ ಹೂವುಗಳು ಮತ್ತು ಹೂವಿನ ಹಾರಗಳ ಅಲಂಕಾರದ ಮುಂದೆ ಉಳಿದೆಲ್ಲವೂ ನಗಣ್ಯವೇ ಸರಿ. ಅದೇ ರೀತಿ ಮುನಿಸಿಕೊಂಡಿರುವ ನಾರಿಯರನ್ನು ಸರಳವಾಗಿ ಮತ್ತು ಸುಲಭವಾಗಿ ಒಲಿಸಿಕೊಳ್ಳಲು ಒಂದು ಮೊಳ ಮಲ್ಲೇ ಅಥವಾ ಮಲ್ಲಿಗೆ ಹೂ ಸಾಕು ಎನ್ನುವುದು ಕೆಲವು ಅನುಭವಸ್ತರ ಅಂಬೋಣ. ಸುಮಾರು ವರ್ಷಗಳ ಹಿಂದೆ ಕೃಷ್ಣರಾಜಾ ಮಾರುಕಟ್ಟೆಯಲ್ಲಿ ಹಬ್ಬದ ಹಿಂದಿನ ದಿನ ಹೂವಿನ ಹಾರ ಕೊಂಡು ಕೊಳ್ಳಲು ಹೋದಾಗ… Read More ಹೂವಿನ ಹಾರ

ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ನಮ್ಮಂತಹ ಮಧ್ಯಮ ವರ್ಗದವರಿಗೆ ವಿಮಾನದಲ್ಲಿ ಪ್ರಯಾಣ ಮಾಡುವುದೆಂದರೆ ಅದೇನೋ ಖುಷಿ. ದೂರ ದೂರದ ಪ್ರದೇಶಗಳಿಗೆ ಕೆಲವೇ ಗಂಟೆಗಳಲ್ಲಿ ಹೋಗುಬಹುದು ಎಂಬ ಸಂಭ್ರಮ. ಅದರೆ ನಾವೂ ನೀವು ಎಣಿಸಿದಂತೆ ವಿಮಾನಯಾನ ಅಷ್ಟು ಸುಲಭದಲ್ಲವಾಗಿದ್ದು, ವಿಮಾನ ಯಾನದ ಸಮಯದಲ್ಲಿ ಹೃದಯವೇ ಬಾಯಿಗೆ ಬಂದಂತೆ ಆಗಿ ಅಂದು ನಾನು ಅನುಭವಿಸಿದ ರೋಚಕತೆಗಳು ಇದೋ ನಿಮಗಾಗಿ. ವರ್ಷಗಳ ಹಿಂದೆ ಕಛೇರಿಯ ಕೆಲಸದ ನಿಮಿತ್ತ ಜಪಾನ್ ದೇಶದ ಟೋಕೀಯೋ ನಮ್ಮ ಮತ್ತೊಂದು ಶಾಖೆಗೆ ಹೋಗುವ ಸಂದರ್ಭ ಒದಗಿ ಬಂದಿತ್ತು. ಅದು ನನ್ನ ಮೊತ್ತ ಮೊದಲ… Read More ಅಲ್ಲಾಡ್ತಾ ಇದೆ, ಅಲ್ಲಾಡ್ತಾ ಇದೆ.

ಅಮ್ಮಾ

ಅಮ್ಮಾ= ಅ+ಮ+ಮ+ಆ. ಅಕ್ಕರೆಯಿಂದ , ಮಮತೆ ಮತ್ತು ಮಮಕಾರದಿಂದ, ಆರೈಕೆ ಮಾಡುವವಳೇ ಅಮ್ಮಾ. ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದ್ದಕ್ಕೇ ಆಗಲಿ ಪರ್ಯಾಯ ಹುಡುಕ ಬಹುದೇನೋ, ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತಿಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ಒಂಭತ್ತು ತಿಂಗಳು ತನ್ನ ಗರ್ಭದಲ್ಲಿ ಅಂಡಾಣುವಿನಿಂದ ಮಗುವಿನ ರೂಪ ತಾಳುವವರೆಗೆ ಜೋಪಾನವಾಗಿಟ್ಟುಕೊಂಡು, ತಾನು ತಿನ್ನುವ ಆಹಾರವನ್ನೇ ತನ್ನ ಒಡಲಿನಲ್ಲಿರುವ ಮಗುವಿನೊಂದಿಗೆ ಕರಳು ಬಳ್ಳಿಯ ಮೂಲಕ ಹಂಚಿಕೊಂಡು ದೇಹದ… Read More ಅಮ್ಮಾ

ಗೃಹಿಣಿ ಗೃಹಮುಚ್ಯತೆ

ಅದೊಂದು ಸಂಪ್ರದಾಯಸ್ಥ ಕುಟುಂಬ ಮನೆಯ ತುಂಬಾ ಮಕ್ಕಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಾದ್ದರಿಂದ ಆ ಮನೆಯ ಮಗಳಿಗೆ ಲೋಯರ್ ಸೆಕೆಂಡರಿಗಿಂತ ಹೆಚ್ಚಿಗೆ ಓದಲಾಗಲಿಲ್ಲ. ಮನೆಯಲ್ಲಿಯೇ ಕುಳಿತು ಹಾಡು ಹಸೆ ಸಂಪ್ರದಾಯಗಳನ್ನು ತನ್ನ ಹಿರಿಯರಿಂದ ಕಲಿತುಕೊಳ್ಳುತ್ತಾಳೆ. ಮುಂದೆ ಮದುವೆಯ ವಯಸ್ಸು ಬಂದಾಗ ನೋಡಲು ಸುರದ್ರೂ ಪವತಿಯಾಗಿದ್ದರೂ ಕಡಿಮೆ ಓದಿನ ನೆಪವೊಡ್ಡಿ ಒಂದೆರಡು ಸಂಬಂಧಗಳು ಕೂಡಿ ಬರುವುದಿಲ್ಲವಾದರೂ, ಹಾಗೆ ಸಂಬಂಧ ಬೇಡ ಎಂದು ಹೋಗಿದ್ದವರೇ ಪುನಃ ಬಂದು ಆಗಿನ ಕಾಲಕ್ಕೇ ಇಂಜಿನಿಯರಿಂಗ್ ಓದಿದ್ದ ಹುಡುಗನೊಂದಿಗೆ ಆಕೆಯ ಮದುವೆಯಾಗಿ ತುಂಬು ಕುಟುಂಬದ… Read More ಗೃಹಿಣಿ ಗೃಹಮುಚ್ಯತೆ