ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ  ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ. ಒಂದು ಹಬ್ಬದ ಮೂಲಕ,  ಹೂವು, ಹಣ್ಣು, ಆಹಾರಗಳನ್ನು ಬೆಳೆಯುವ ರೈತರಿಗೆ, ಅದನ್ನು ಕೊಂಡು ಮಾರುವ ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ತಂದು ಕೊಟ್ಟರೆ, ಇನ್ನು ಹಬ್ಬದ ಸಮಯದಲ್ಲಿ ಊರಿಂದ ಊರಿಗೆ ಹೋಗುವ ಸಲುವಾಗಿ ಸಾರಿಗೆ ವ್ಯವಸ್ಥೆಯವರಿಗೆ, ಬಟ್ಟೆಗಳು, ಉಡುಗೆ ತೊಡುಗೆ, ಚಿನ್ನಾಭರಣದಿಂದ ಹೆಣ್ಣುಮಕ್ಕಳು ಬಳಸುವ ಅಲಂಕಾರಿಕ ವಸ್ತುಗಳಿಗೂ… Read More ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ತದಿಗೆ/ಸೌಭಾಗ್ಯ ಗೌರಿ ವ್ರತ

ಸ್ವರ್ಣಗೌರಿ ಗೌರಿ ವ್ರತ ಗೊತ್ತು, ಮಂಗಳ ಗೌರಿ ವ್ರತ ಪೂಜೆ ಗೊತ್ತು. ಅದ್ರೇ ಇದೇನಿದು ತದಿಗೆ ಗೌರಿ ವ್ರತ ಅಥವಾ ಸೌಭಾಗ್ಯ ಗೌರಿವ್ರತ ಅಂತ ಯೋಚನೆ ಮಾಡುತ್ತಿದ್ದೀರಾ? ಚೈತ್ರ ಮಾಸದ ಮೊದಲ ದಿನ ಅಂದರೆ ಪಾಡ್ಯದಂದು ಮೊದಲ ಹಬ್ಬವಾದ ಯುಗಾದಿಯನ್ನು ಆಚರಿಸುತ್ತೆವೆ. ಇನ್ನು ಎರಡನೇ ದಿನ ಬಿದಿಗೆ ವರ್ಷತೊಡಕನ್ನು ಆಚರಿಸುತ್ತೇವೆ ಮತ್ತು ಈ ದಿನ ಚಂದ್ರನ ನೋಡಿದರೆ ಶುಭ ಎಂದು ಪರಿಗಣಿಸಲಾಗುತ್ತದೆ. ಯುಗಾದಿಯಾದ ಮೂರನೇ ದಿನ ತೃತೀಯ ಅಥವಾ ತದಿಗೆಯಂದು ಕೆಲವೆಡೆ ಗೌರಿಯ ವ್ರತವನ್ನು ಮಾಡುವ ಪದ್ದತಿ… Read More ತದಿಗೆ/ಸೌಭಾಗ್ಯ ಗೌರಿ ವ್ರತ