ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?
ದೇಶದ ಗಡಿಯಲ್ಲಿ ಶತ್ರುಗಳ ನುಸುಳುವಿಕೆಯನ್ನು ತಡೆಯುವ ಸಲುವಾಗಿ ಹೇಗೆ ಸೈನ್ಯವಿರುತ್ತದೆಯೋ ಹಾಗೆಯೇ ದೇಶದ ಆಂತರಿಕ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆರಕ್ಷಕರು ಇರುತ್ತಾರೆ. ಸ್ಥಳೀಯವಾಗಿ ನಡೆಯುವ ಸಾವಿರಾರು ಪ್ರಕರಣಗಳನ್ನು ಬೇಧಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ತನಿಖೆ ನಡೆಯುವಾಗ ಅ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಸಾಕ್ಷಿಗಳನ್ನು ಒದಗಿಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡುವುದರಲ್ಲಿ ಪೋಲಿಸರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಅದೆಷ್ಟೋ ಪ್ರಕರಣಗಳನ್ನು ನ್ಯಾಯಾಲಯದವರೆಗೂ ಬಾರದಂತೆ ಸ್ಥಳೀಯವಾಗಿಯೇ ಪೋಲಿಸರು ಬಗೆಹರಿಸುವ ಕಾರಣ ನಮ್ಮ ಸಮಾಜದಲ್ಲಿ ಪೋಲಿಸರಿಗೆ… Read More ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?

