ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು