ಪುಲ್ವಾಮ ಧಾಳಿ

ನೈಜ ಭಾರತೀಯರಿಗೆ ಫೆಬ್ರವರಿ 14 ಪ್ರೇಮಿಗಳ ದಿನ ಎನ್ನುವುದಕ್ಕಿಂತಲೂ, 2019ರ ಇದೇ ದಿನದಂದು ಕಾಶ್ಮೀರೀ ಭಯೋತ್ಪಾದಕರ ‌ಪುಲ್ವಾಮದ ಕರಾಳ ಧಾಳಿಯಿಂದಾಗಿ ದೇಶಪ್ರೇಮಿಗಳ ದಿನವಾಗಿದೆ ಎಂದರೂ ತಪ್ಪಾಗದು.

ಅಂದು ಹುತಾತ್ಮರಾದ 40 ಯೋಧರಷ್ಟೇ ಅಲ್ಲದೇ ದೇಶವನ್ನು ಸುರಕ್ಷಿತವಾಗಿರಿಸಿರುವ ಎಲ್ಲಾ ಯೋಧರಿಗೂ ಹೃದಯಪೂರ್ವಕ ನಮನ ಗಳನ್ನು ಸಲ್ಲಿಸೋಣ.… Read More ಪುಲ್ವಾಮ ಧಾಳಿ

ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಅಕ್ಷರ ಸಂತ ಹರೇಕಳ ಹಾಜಬ್ಬ

ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ

ಲಕ್ಷದ್ವೀಪ

ಕಳೆದ ವಾರ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಲಕ್ಷದ್ವೀಪ ಪ್ರವಾಸದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಪ್ರಪಂಚಾದ್ಯಂತ ಪ್ರವಾಸೀತಾಣಗಳು ಅಲ್ಲೋಲಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ.

ಲಕ್ಷದ್ವೀಪದ ಕುರಿತಾದ ಪ್ರಧಾನಿಗಳ ಪ್ರೇಮ ಕೇವಲ ನೆನ್ನೆಯ ಮೊನ್ನೆಯದ್ದಾಗಿರದೇ, ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆಯೇ ಈ ಕುರಿತಾಗಿ ತಮ್ಮ ದೂರದೃಷ್ಟಿತನದಿಂದ ಅಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ, ಲಕ್ಷದ್ವೀಪದ ಕುರಿತಾದ ಅಪರೂಪದ ಮಾಹಿತಿಗಳು ಇದೋ ನಿಮಗಾಗಿ… Read More ಲಕ್ಷದ್ವೀಪ

ವಿರೋಧ ಪಕ್ಷಗಳು

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹುಮತ ಪಡೆದವರು ಆಡಳಿತ ನಡೆಸುವ ಅಥಿಕಾರ ಪಡೆದರೆ, . ಬಹುಮತ ಪಡೆಯದವರು ವಿರೋಧ ಪಕ್ಷವಾಗುತ್ತಾರೆ.  ದೇಶದ ಹಿತದೃಷ್ಟಿಯಿಂದ ದೇಶದ ಆಗು ಹೋಗುಗಳ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲು ಆಡಳಿತ ಪಕ್ಷದಷ್ಟೇ ಜವಾಬ್ಧಾರಿ ವಿರೋಧಪಕ್ಷಕ್ಕೂ ಇರುತ್ತದೆ. ಹಾಗಾಗಿಯೇ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷಗಳನ್ನು ಕಾವಲು ನಾಯಿಗಳಿಗೆ ಹೋಲಿಸಲಾಗುತ್ತದೆ,  ವಿರೋಧ ಪಕ್ಷ ಎಂದ ಮಾತ್ರಕ್ಕೆ ಆಡಳಿತ ಪಕ್ಷ ಮಾಡುವ ಎಲ್ಲಾ ಕೆಲಸಗಳನ್ನೂ ವಿರೋಧಿಸಲೇ ಬೇಕೆಂಬ ನಿಯಮವೇನಿಲ್ಲ. ವಿರೋಧ ಪಕ್ಷವು ರಚನಾತ್ಮಕವಾಗಿ ಕಾರ್ಯನಿಭಾಯಿಸುವ ಮೂಲಕ ಆಡಳಿತ ಪಕ್ಷ ದೇಶವನ್ನು ಸರಿಯಾದ… Read More ವಿರೋಧ ಪಕ್ಷಗಳು

ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಕಳೆದ ತಿಂಗಳು ಜೂನ್ 15ದಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ಲಢಾಕ್ಕಿನ ಗಾಲ್ವಾನ್ ಎಂಬ ಪ್ರದೇಶದಲ್ಲಿ ಪರಸ್ಪರ ಘರ್ಷಣೆ ನಡೆದಿದ್ದು, ಈ ಘರ್ಷಣೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದರೆ, ಅದಕ್ಕೆ ಪ್ರತ್ಯುತ್ತರವಾಗಿ ಚೀನಾದೇಶದ 40ಕ್ಕೂ ಅಧಿಕ ಸೈನಿಯರನ್ನು ಯಮಪುರಿಗೆ ಅಟ್ಟಿದದ್ದು ಈಗ ಇತಿಹಾಸವಾಗಿದೆ. ಈ ಸಂಘರ್ಷದ ಇಡೀ ವಿಶ್ವವೇ ಏಷ್ಯಾದಲ್ಲಿ ಶಾಂತಿ ಸೌಹಾರ್ಧತೆಯನ್ನು ಕಾಪಾಡಿಕೊಂಡು ಬರಲು ಸಲಹೆ ನೀಡುತ್ತಿದ್ದರೆ, ಭಾರತ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರುಗಳು ಮತ್ತು ರಾಜತಾತಂತ್ರಿಕ ಅಧಿಕಾರಿಗಳ ನಡುವೆ ಗಡಿಯಲ್ಲಿ ಶಾಂತಿಯನ್ನು… Read More ಪ್ರಧಾನಿಗಳ ಇಂದಿನ ಲೇಹ್ ಭೇಟಿಯ ಹಿಂದಿರುವ ಕೂತಹಲಕಾರಿ ಸಂಗತಿಗಳು

ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು

ಕರ್ನಾಟಕದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಅನಕ್ಷರಸ್ಥ ಕುರಿ ಕಾಯುವ ವೃತ್ತಿಯನ್ನು ಮಾಡುವ 84 ವರ್ಷ ಕುರುಬ ಕಲ್ಮನೆ ಕಾಮೇಗೌಡ ಎಂಬ ಹೆಸರು ಬಹುಶಃ ಅವರ ಊರು ಅಥವಾ ಅವರ ತಾಲ್ಲೂಕಿನ ಹೊರತಾಗಿ ಹೊರಗಿನವರಿಗೆ ಹೆಚ್ಚಾಗಿ ಪರಿಚಯವೇ ಇರಲಿಲ್ಲ. ಆದರೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್  ನಲ್ಲಿ ಈ ವ್ಯಕ್ತಿಯ ಬಗ್ಗೆ  ಯಾವಾಗ ಮಾತನಾಡಿದರೋ ಆ ಕೂಡಲೇ ಅವರ ಹೆಸರು ದೇಶಾದ್ಯಂತ ಪರಿಚಿತವಾಗಿ ಗೂಗಲ್ಲಿನಲ್ಲಿ… Read More ಕರ್ನಾಟಕದ ಭಗೀರಥ ಶ್ರೀ ಕಲ್ಮನೆ ಕಾಮೇಗೌಡರು

ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ 

ನಮ್ಮ ದೇಶದಲ್ಲಿ ಅತ್ಯಂತ ಹಿಂದುಳಿದ ಕೆಲವೇ ಕೆಲವೂ ರಾಜ್ಯಗಳಲ್ಲಿ ಒರಿಸ್ಸಾ ರಾಜ್ಯವೂ ಒಂದು. ಇಂದೂ ಸಹ ದೇಶಾದ್ಯಂತ ಅದರಲ್ಲೂ ಬೆಂಗಳೂರಿನ ಅನೇಕ ಸಾಪ್ಘ್ವೇರ್ ಕಂಪನಿಗಳಲ್ಲಿ ಸೆಕ್ಯುರಿಟಿ ಗಾರ್ಡ್ ಗಳಲ್ಲಿ ಹೆಚ್ಚಿನವರು ಒರಿಸ್ಸಾದವರೇ ಆಗಿರುತ್ತಾರೆ ತಮ್ಮ SSLC ಅಥವಾ PUC ಎಲ್ಲೋ ಕೆಲವರು Degree ಮುಗಿಸಿ ತಕ್ಕ ಮಟ್ಟಿಗಿನ English ಕಲಿತರೆಂದರೆ ಅಲ್ಲಿಂದ ಬೆಂಗಳೂರು, ಹೈದ್ರಾರಾಬಾದ್ ಇಲ್ಲವೇ ಕಲ್ಕತ್ತಾದ ಕಡೆ ಉದ್ಯೋಗ ಅರಸಿಕೊಂಡು ಹೋಗುತ್ತಾರೆ. ಕ್ರಮವಾಗಿ 2004, 2009, 2014 ಮತ್ತು 2019 ರ ಅಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ… Read More ಕರ್ತವ್ಯ  ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯ