ರವೇ ಪಾಯಸ

ನಮ್ಮೆಲ್ಲರಿಗೂ ತಿಳಿದಿರುವಂತೆ ತಂದೆ ತಾಯಿಯರನ್ನು ಹೊರತು ಪಡಿಸಿ ಕಣ್ಣಿಗೆ ಕಾಣುವ ದೇವರುಗಳೆಂದರೆ ಸೂರ್ಯ ಮತ್ತು ಚಂದ್ರ. ಇವತ್ತು ರಥಸಪ್ತಮಿ ಅರ್ಥಾತ್ ಸೂರ್ಯನ ಹುಟ್ಟು ಹಬ್ಬ ಎಂದರೂ ತಪ್ಪಾಗಲಾರದು. ಹಾಗಾಗಿ ಸೂರ್ಯನ ಪ್ರಿಯವಾದ ನೈವೇದ್ಯವಾದ ರವೇ ಪಾಯಸ ಮಾಡುವುದನ್ನು ನಮ್ಮ ನಳಪಾಕ ಮಾಲಿಕೆಯಲ್ಲಿ ತಿಳಿದುಕೊಳ್ಳೋಣ. ಸುಮಾರು 4-5 ಜನರು ಸವಿಯಬಹುದಾದಷ್ಟು ರವೇ ಪಾಯಸ ತಯಾರಿಸಲು ಬೇಕಾಗುವ ಸಾಮಗ್ರಿಗಳು ಈ ರೀತಿಯಾಗಿವೆ ಸಣ್ಣ ರವೆ – 1 ಬಟ್ಟಲು ಗಸಗಸೆ – 1 ಚಮಚ ಬೆಲ್ಲದ ಪುಡಿ – 3… Read More ರವೇ ಪಾಯಸ

ಗಸಗಸೆ ಪಾಯಸ

ಹಬ್ಬದ ಹರಿದಿನಗಳಲ್ಲಿ ದೇವರ ಪೂಜೆಯಷ್ಟೇ ಊಟಕ್ಕೂ ಮಹತ್ವವಿದ್ದೇ ಇರುತ್ತದೆ. ಹಬ್ಬದ ಊಟ ಎಂದರೆ ಸಿಹಿ ಭಕ್ಷಗಳೇ ಪ್ರಾಧ್ಯಾನ್ಯವಾದದರು ಎಲೆ ಕೊನೆಗೇ ಪಾಯಸ ಬಡಿಸಲೇ ಬೇಕೆಂಬ ಶಾಸ್ತ್ರ ಮತ್ತು ನಮ್ಮ ಊಟ ಆರಂಭವಾಗುವುದೇ ಪಾಯಸದಿಂದ. ಇಂದೆಲ್ಲಾ ಬಾಣಸಿಗರು ಬಗೆ ಬಗೆಯ ಪಾಯಸಗಳನ್ನು ಮಾಡುತ್ತಾರಾದರೂ, ಹಿಂದಿನ ಕಾಲದಲ್ಲಿ ಶ್ಯಾವಿಗೆ ಪಾಯಸ ಇಲ್ಲವೇ ಗಸಗಸೆ ಪಾಯಸಕ್ಕೇ ಹೆಚ್ಚಿನ ಪ್ರಾಶಸ್ತ್ರ್ಯ. ಅಂತಹ ಗಸಗಸೆ ಪಾಯಸದ್ದೇ ಕುರಿತಾದ ಮೋಜಿನ ಸಂಗತಿ ಇದೋ ನಿಮಗಾಗಿ. ಚಿಕ್ಕ ವಯಸ್ಸಿನಿಂದಲೂ ನಾನು ಗಸಗಸೆ ಪಾಯಸ ಪ್ರಿಯ. ಬಹುಶಃ ಈ… Read More ಗಸಗಸೆ ಪಾಯಸ

ಅಕ್ಕಿ ಕಡಲೇಬೇಳೆ ಪಾಯಸ

ಸಾಂಪ್ರದಾಯಕ  ಸಿಹಿ ಖಾದ್ಯವಾದ ಅಕ್ಕಿ ಕಡಲೇಬೇಳೆ ಪಾಯಸವನ್ನು ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 4-6 ಜನರಿಗೆ ಸಾಕಾಗುವಷ್ಟು ಅಕ್ಕಿ ಕಡಲೇಬೇಳೆ ಪಾಯಸ ತಯಾರಿಸಲು ಬೇಕಾಗುವ ಸಾಮಗ್ರಿಗಳು ಕಡಲೇ ಬೇಳೆ – 1 ಬಟ್ಟಲು ಅಕ್ಕಿ -– 1 ಬಟ್ಟಲು ಪುಡಿ ಮಾಡಿದ ಉಂಡೇ ಬೆಲ್ಲ – 1 ಬಟ್ಟಲು ತುರಿದ ಕೊಬ್ಬರಿ – 1 ಬಟ್ಟಲು ಬಾದಾಮಿ – 2-3 ಗೊಡಂಬಿ – 8-10 ದ್ರಾಕ್ಷಿ –… Read More ಅಕ್ಕಿ ಕಡಲೇಬೇಳೆ ಪಾಯಸ

ಸಿಹಿ-ಕಹಿ ಪ್ರಸಂಗ-1

ಯಾವುದೇ ಸಮಾರಂಭಗಳಲ್ಲಿ ಸಿಹಿ ತಿಂಡಿಯದ್ದೇ ಭರಾಟೆ. ಸಮಾರಂಭಕ್ಕೆ ಅಡುಗೆಯವರನ್ನು ಮಾತು ಕಥೆಗೆ ಕರೆಸಿದಾಗ, ಪಾಯಸ, ಎರಡು ಪಲ್ಯ, ಎರಡು ಕೋಸಂಬರಿ, ಗೊಜ್ಜು, ಅನ್ನಾ ಸಾರು, ಕೂಟು ಎಂಬೆಲ್ಲವೂ ಮಾಮೂಲಿನ ಅಡುಗೆಯಾದರೇ, ಸಮಾರಂಭಗಳ ಊಟದ ಘಮ್ಮತ್ತನ್ನು ಹೆಚ್ಚಿಸುವುದೇ ಸಿಹಿ ತಿಂಡಿಗಳು. ಸಮಾರಂಭದಲ್ಲಿ  ಎಷ್ಟು ಬಗೆಯ ಸಿಹಿ ತಿಂಡಿಗಳು ಮತ್ತು ಯಾವ ಯಾವ ಸಿಹಿತಿಂಡಿಗಳನ್ನು ಮಾಡಿಸಿರುತ್ತಾರೋ ಅದರ ಮೇಲೆ ಅವರ ಅಂತಸ್ತು ಮತ್ತು ಸಮಾರಂಭದ ಘನತೆಯನ್ನು ಹೆಚ್ಚಿಸುತ್ತದೆ ಎಂದರೂ ತಪ್ಪಾಗಲಾರದು.  ಸಮಾರಂಭ ಮುಗಿದ  ಎಷ್ಟೋ ದಿನಗಳ ನಂತರವೂ ಅಲ್ಲಿ ತಿಂದಿದ್ದ … Read More ಸಿಹಿ-ಕಹಿ ಪ್ರಸಂಗ-1