ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ

ಬಾಲ್ಯದ ಬಯಾಸ್ಕೋಪ್

ಬೇಸಿಗೆಯಲ್ಲಿ ಪರೀಕ್ಷೆ ಮುಗಿದು ಫಲಿತಾಂಶ ಬಂದಿದ್ದೇ ತಡಾ ಗಂಟು ಮೂಟೆ ಕಟ್ಟಿಕೊಂಡು ತಾತನ ಮನೆಗೆ ಹೋಗುವುದು ನಮ್ಮ ಮನೆಯ ವಾಡಿಕೆ. ನಮ್ಮೂರಿಗೆ ಹೋಗಲು ಪ್ರಮುಖ ಆಕರ್ಷಣೆಯೆಂದರೆ ಅದೇ ಸಮಯದಲ್ಲಿ ಎರಡು ವಾರಗಳ ಕಾಲ ನಡೆಯುತ್ತಿದ್ದ ಊರ ಹಬ್ಬ, ಜಾತ್ರೆ, ದೇವಸ್ಥಾನದ ಮುಂದಿದ್ದ ಕಲ್ಯಾಣಿ, ಅಜ್ಜಿ ಮಾಡಿಕೊಡುತ್ತಿದ್ದ ಕೆಂಡ ರೊಟ್ಟಿ ಗಟ್ಟಿ ಚಟ್ನಿ ಮತ್ತು ಬೆಣ್ಣೆ, ತಾತನ ತೊಡೆ ಮೇಲೆ ಕುಳಿತುಕೊಂಡು ಕೇಳುತ್ತಿದ್ದ ಕಥೆಗಳಲ್ಲದೇ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಸಿನಿಮಾ ಪ್ರೊಜೆಕ್ಷನ್. ನಮ್ಮೂರು ಬಾಳಗಂಚಿ ಸುಮಾರು ಮುನ್ನೂರರಿಂದ ನಾಲ್ಕು… Read More ಬಾಲ್ಯದ ಬಯಾಸ್ಕೋಪ್

ದೈವ ಸಂಕಲ್ಪ

ಈಗಾಗಲೇ ಹತ್ತು ಹಲವಾರು ಬಾರಿ ಬಾರಿ ತಿಳಿಸಿರುವಂತೆ ಬೆಂಗಳೂರಿನ ವಾಸಿಯಾಗಿದ್ದರೂ ನಮ್ಮೂರು ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣದ ಬಾಳಗಂಚಿ. ಸುಮಾರು ಮೂರ್ನಾಲ್ಕು ಸಾವಿರ ಜನರು ವಾಸಿಸುವ ಕೃಷಿಪ್ರಧಾನವಾದ ಗ್ರಾಮವಾದರೂ, ನಮ್ಮೂರಿನಲ್ಲಿರುವ ದೇವಾಲಯಗಳ ಸಂಖ್ಯೆ ಹತ್ತಕ್ಕೂ ಹೆಚ್ಚು. ನಮ್ಮೂರ ಗ್ರಾಮದೇವತೆಯ ಹಬ್ಬ ಪ್ರತೀ ವರ್ಷ ಯುಗಾದಿ ಕಳೆದು ಹದಿನೈದು ದಿನಗಳ ನಂತರ ಬರುವ ಗುರುವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಮೂರುವಾರಗಳ ಕಾಲ ಅದ್ದೂರಿಯಾಗಿ ನೂರಾರು ವರ್ಷಗಳಿಂದ ಸಂಭ್ರಮ ಸಡಗರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ದುರಾದೃಷ್ಟವಷಾತ್ ಈ ಬಾರೀ ಕೋವಿಡ್ ಮಹಾಮಾರಿಯ ಕಾರಣದಿಂದಾಗಿ… Read More ದೈವ ಸಂಕಲ್ಪ

ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಅದೊಂದು ಕುಗ್ರಾಮ. ಹೆಸರಿಗಷ್ಟೇ ಅಗ್ರಹಾರ ಎಂದಿದ್ದರೂ, ಇದ್ದದ್ದು ಎಂಕ, ನಾಣಿ, ಸೀನ ಅಂತಾ ಹತ್ತಾರು ಸಂಪ್ರದಾಯಸ್ಥರ ಮನೆ. ಕೃಷಿ ಪ್ರಧಾನವಾಗಿದ್ದ ಆ ಊರಿನಲ್ಲಿ ಶಾಸ್ತ್ರೀಯ ಸಂಗೀತ ಮತ್ತು ಸಾಹಿತ್ಯದ ಗಂಧವೇ ಇಲ್ಲದಿದ್ದರೂ ಜನಪದ ಸಾಹಿತ್ಯಕ್ಕೇನು ಕೊರತೆ ಇರಲಿಲ್ಲ. ಅಂತಹ ಊರಿನಲ್ಲೊಂದು ಅನರ್ಘ್ಯ ರತ್ನದಂತೆ, ತಾಯಿಯ ಕಡೆಯ ದೂರ ಸಂಬಧಿಯೊಬ್ಬರು ಮಾಡುತ್ತಿದ್ದ ಗಮಕ ವಾಚನದಿಂದ ಆಕರ್ಷಿತರಾಗಿ, ಮಹಾಭಾರತದ ಏಕಲವ್ಯನಂತೆ, ದೈವದತ್ತವಾದ ಶರೀರ ಮತ್ತು ಶಾರೀರದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹರಿಕಥೆ, ಗಮಕ ವಾಚನ, ವ್ಯಾಖ್ಯಾನವಲ್ಲದೇ, ನಾಟಕದ ಮಟ್ಟುಗಳು ಮತ್ತು… Read More ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು

ಬಾಳಗಂಚಿ ಊರ ಹಬ್ಬ ಆಚರಿಸುವಿಕೆ

ನಮ್ಮೂರು ಬಾಳಗಂಚಿಯ ಸಮಸ್ತ ಗ್ರಾಮಸ್ಥರಿಗೆ ಸಾಷ್ಟಾಂಗ ಪ್ರಣಾಮಗಳು. ಕಳೆದ ವರ್ಷ ದೊಡ್ಡ ಹಬ್ಬಕ್ಕೆ ಊರಿಗೆ ಬಂದು ಸಂಭ್ರಮಿಸಿ ಹೋದ ನಂತರ, ಊರಿಗೆ ಬರುವ ಅವಕಾಶವೇ ದೊರೆತಿರಲಿಲ್ಲ. ಈ ವರ್ಷ ಯುಗಾದಿಯ ಸಮಯದಲ್ಲಿ ಕೋರೋನಾ ಮಾಹಾಮಾರಿಯ ಸಂಬಂಧಿತವಾಗಿ ಪ್ರಪಂಚಾದ್ಯಂತವೇ ಲಾಕ್ ಡೌನ್ ಇದ್ದ ಕಾರಣ ಊರ ಹಬ್ಬ ಮುಂದೂಡಿದ್ದು ಸ್ವಲ್ಪ ಬೇಸರವೆನಿದರೂ, ಈ ವರ್ಷ ಹಬ್ಬ ನಿಲ್ಲಿಸದೇ ಮುಂದೂಡಿರುವ ವಿಷಯ ತುಸು ನೆಮ್ಮದಿ ತಂದಿದ್ದು, ಕಾಲ ಎಲ್ಲವೂ ಸರಿ ಹೋದ ನಂತರ ಪ್ರತೀ ವರ್ಷದಷ್ಟು ವಿಜೃಂಭಣೆಯಲ್ಲದಿದ್ದರೂ ಸರಳ ಸಂಭ್ರಮವಾಗಿ,… Read More ಬಾಳಗಂಚಿ ಊರ ಹಬ್ಬ ಆಚರಿಸುವಿಕೆ

ಏನಂತೀರೀ? ಪುಸ್ತಕ ಲೋಕಾರ್ಪಣೆ

ನನ್ನೆಲ್ಲಾ ಆತ್ಮೀಯರಿಗೂ ಈಗಾಗಲೇ ತಿಳಿದಿರುವಂತೆ, ಒಬ್ಬ ಹವ್ಯಾಸೀ ಬರಹಗಾರನಾಗಿ ರಾಜಕಾರಣದ ಆಗು ಹೋಗುಗಳನ್ನು ತೀಕ್ಷ್ಣವಾಗಿ ಬರೆಯುತ್ತಿದ್ದ ಕಾರಣ ಬೇಕೋ ಬೇಡವೋ ಗೆಳೆಯರ ಒತ್ತಾಯದ ಮೇರೆಗೆ ಸಾಮಾಜಿಕ ಜಾಲತಾಣಗಳ ನಾನಾ ಗುಂಪುಗಳ ಭಾಗವಾಗಿ ಸುಖಾ ಸುಮ್ಮನೆ ಜಿದ್ದಾ ಜಿದ್ದಿಗೆ ಇಳಿದು ವಿತಂಡ ವಾದ ಮಾಡುವುದಕ್ಕೇ ನನ್ನ ಬರವಣಿಗೆ ಸೀಮಿತವಾಗಿತ್ತು. ಆ ಎಲ್ಲಾ ಲೇಖನಗಳಿಂದ ಮಿತ್ರತ್ವಕ್ಕಿಂತ ಶತೃತ್ವ ಗಳಿಸಿದ್ದೇ ಹೆಚ್ಚು. ಈ ಜಿದ್ದಾ ಜಿದ್ದಿ, ಕೇವಲ ಸಾಮಾಜಿಕ ಜಾಲತಾಣಗಳಿಗಷ್ಟೇ ಮೀಸಲಾಗಿರದೇ, ಮನೆಯವರೆಗೂ ಬಂದು, ನನ್ನ ಕುಟುಂಬದವರು ನನ್ನ ಪರವಾಗಿ ಅದೆಷ್ಟೋ… Read More ಏನಂತೀರೀ? ಪುಸ್ತಕ ಲೋಕಾರ್ಪಣೆ