ಉಡುಪಿ ಉಪಹಾರ ಗೃಹ
ಉಡುಪಿ ಎಂದೊಂಡನೆಯೇ ಆಸ್ಥಿಕರಿಗೆ ಉಡುಪಿಯ ಶ್ರೀ ಕೃಷ್ಣ, ಅಷ್ಟ ಮಠಗಳು, ಸಂಸ್ಕೃತ-ವೇದ ಪಾಠ ಶಾಲೆಗಳು, ರಥದ ಬೀದಿ, ಇತ್ತೀಚೆಗೆ ಅಗಲಿದ ಪೇಜಾವರ ಶ್ರೀಗಳು ನೆನಪಿಗೆ ಬಂದರೆ, ವಾಣಿಜ್ಯೋದ್ಯಮಿಗಳಿಗೆ ಅವಿಭಜಿತ ದಕ್ಷಿಣ ಕರ್ನಾಟಕದ ಭಾಗವಾಗಿ ಉಡುಪಿಯಿಂದಲೇ ಆರಂಭವಾಗಿ ಇಂದು ಹಲವಾರು ರಾಷ್ಟ್ರೀಕೃತ ಬ್ಯಾಂಕಿನೊಂದಿಗೆ ವಿಲೀನವಾಗಿ ಹೋದ, ಕೆನರ ಬ್ಯಾಂಕ್, ವಿಜಯ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕುಗಳು ನೆನಪಾಗುತ್ತದೆ. ಇನ್ನು ತಿಂಡಿ ಪೋತರಿಗೆ ಉಡುಪಿ ಎಂದೊಡನೆ ನೆನಪಿಗೆ ಬರುವುದೇ, ಉಡುಪಿ ಶ್ರೀಕೃಷ್ಣ ಮಠದ ಭೋಜನಶಾಲೆ ಮತ್ತು ರಾಜ್ಯಾದ್ಯಂತ, ದೇಶಾದ್ಯಂತ… Read More ಉಡುಪಿ ಉಪಹಾರ ಗೃಹ
