ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಮಡಿ ಬಟ್ಟೆ

ಶಂಕರ ಆಗಿನ್ನೂ ಹೈಸ್ಕೂಲಿನಲ್ಲಿ ಓದುತ್ತಿದ್ದ.  ಬೇಸಿಗೆಯ ರಜೆಯಲ್ಲಿ  ಸುಮ್ಮನೆ ಮನೆಯ ಬಳಿ ಹುಡುಗರೊಂದಿಗೆ ಬಿಸಿಲಿನಲ್ಲಿ ಬೀದಿ ಸುತ್ತುವ ಬದಲು, ಬೇಸಿಗೆ ರಜೆಯನ್ನು ಸದ್ವಿನಿಯೋಗ ಪಡಿಸಿಕೊಳ್ಳಲು ಅವನ ತಾಯಿ ಅವನನ್ನು ಮಂಗಳೂರಿನ ಸಮೀಪದ ವೇದಶಿಬಿರಕ್ಕೆ ಕಳುಹಿಸಿದರು. ನಾಲ್ಕುವಾರಗಳ ಉಚಿತ ವೇದಶಿಬಿರ.  ಬೆಳಿಗ್ಗೆ  4.45ಕ್ಕೇ ಎಲ್ಲರೂ ಎದ್ದು ಕಡ್ಡಾಯವಾಗಿ ತಣ್ಣೀರಿನ ಸ್ನಾನ ಮಾಡಿ 5:30 ಕ್ಕೆಲ್ಲಾ ನಿತ್ಯಪೂಜೆಯಿಂದ ಆರಂಭವಾಗುವ ದಿನಚರಿ ಯೋಗಾಭ್ಯಾಸ, ವೇದಾಧ್ಯಯನ, ಸಂಸ್ಕೃತ ಪಾಠ, ತಿಂಡಿ, ಊಟಗಳ ಜೊತೆ ರಾತ್ರಿ  10 ಘಂಟೆಗೆ ಅನೌಪಚಾರಿಕದೊಂದಿಗೆ ದಿನ ಮುಕ್ತಾಯವಾಗುತ್ತಿತ್ತು. ಆರಂಭದಲ್ಲಿ… Read More ಮಡಿ ಬಟ್ಟೆ