ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ಸಾಧಾರಣವಾಗಿ ಬ್ರಿಟಿಷರು ಭಾರತಕ್ಕೆ ಬರುವ ಮುಂಚೆ ಭಾರತ ಸುವರ್ಣ ಯುಗವಾಗಿತ್ತು ಎಂದು ಹೇಳುತ್ತಾ ಅಲ್ಲಿ ಮುತ್ತು ರತ್ನ ಹವಳ ಪಚ್ಚೆ ಮುಂತಾದ ಅಮೂಲ್ಯವಾದ ಅನರ್ಘ್ಯ ಬೆಲೆಬಾಳುವ ವಸ್ತುಗಳನ್ನೂ ರಸ್ತೆಯ ಬದಿಯಲ್ಲಿ ಸೇರಿನಲ್ಲಿ ಮಾರಲಾಗುತ್ತಿತ್ತು ಎಂದು ಅನೇಕ ವಿದೇಶೀ ಇತಿಹಾಸಕಾರರೇ ಬಣ್ಣಿಸಿದ್ದಾರೆ. ಇನ್ನು ಸಂಗೀತ ಮತ್ತು ಶಿಲ್ಪಕಲೆ ಎಂದೊಡನೆಯೇ ಥಟ್ಟನೆ ಎಲ್ಲರಿಗೂ ನೆನಪಾಗುವುದೂ ಕರ್ನಾಟಕವೇ. ಕರ್ನಾಟಕ ಎಂದೊಡನೇ ನೆನಪಾಗುವುದೇ ವೈಭವೋಪೇತ ದಸರಾ ಹಬ್ಬ. ಕನ್ನಡ ಎಂದೊಡನೆ ಎಲ್ಲರೂ ನಮಸ್ಕರಿಸುವುದೇ ತಾಯಿ ಭುವನೇಶ್ವರಿಗೇ. ಇಷ್ಟೆಲ್ಲಾ ಇತಿಹಾಸಗಳಿಗೆ ಪ್ರಸಿದ್ಧವಾಗಿದ್ದದ್ದೇ, ವಿಜಯನಗರ ಸಾಮ್ರಾಜ್ಯ.… Read More ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಶ್ರೀ ವಿದ್ಯಾರಣ್ಯರು

ಕನಕಗಿರಿ ಕನಕಾಚಲಪತಿ

ಕಾಲಿದ್ದವರು ಹಂಪೆ ಸುತ್ತಿ ನೋಡಬೇಕು ಮತ್ತು ಕಣ್ಣಿದ್ದವರು ಕನಕಗಿರಿ ನೋಡಬೇಕು ಎಂಬ ನಾನ್ನುಡಿ ಉತ್ತರ ಕರ್ನಾಟಕದಲ್ಲಿ ಬಹಳ ಪ್ರಚಲಿತವಾಗಿದೆ. ಅಂದಿನ ಕಾಲದ ವಿಜಯನಗರದ ಗತವೈಭವ ಇಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಂಚಿಹೋಗಿವೆ. ಹಂಪೆಯಿಂದ ಸುಮಾರು 30 ಕಿ.ಮಿ ದೂರದಲ್ಲಿರುವ ಕೊಪ್ಪಳ ಜಿಲ್ಲೆಯ ಪ್ರಮುಖ ತಾಲ್ಲೂಕ್ ಕೇಂದ್ರವೇ ಕನಕಗಿರಿ. ಇಲ್ಲಿನ ಕನಕಾಚಲಪತಿ ದೇವಸ್ಥಾನದಿಂದಾಗಿ ಇದು ಐತಿಹಾಸಿಕ ಸ್ಥಳವಾಗಿದೆ. ಈ ಶ್ರೀಕ್ಷೇತ್ರವನ್ನು ಎರಡನೆ ತಿರುಪತಿ ಎಂಬ ನಂಬಿಕೆ ಇರುವ ಕಾರಣ ಹಂಪೆಗೆ ಬರುವ ಬಹುತೇಕ ಪ್ರವಾಸಿಗರು ಇಲ್ಲಿಯೂ ಬೇಟಿ… Read More ಕನಕಗಿರಿ ಕನಕಾಚಲಪತಿ

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು