ಮದನ ಮತ್ತು ಮಾನಿನಿ

ಸೂರ್ಯವಂಶದ ಕೌಶಿಕ ಮಹಾರಾಜ ವಸಿಷ್ಠ ಮುನಿಗಳ ಆಶ್ರಮದಲ್ಲಿ ಅವಮಾನಿತನಾಗಿ. ಘೋರ ತಪಸ್ಸನ್ನು ಮಾಡಿ ವಿಶ್ವಾಮಿತ್ರ ಎಂಬ ರಾಜರ್ಷಿ ಪಟ್ಟವನ್ನು ಪಡೆಯುತ್ತಾನೆ. ನಂತರ ತನ್ನ ಅನುಯಾಯಿ ತ್ರಿಶಂಕುವನ್ನು ಸ್ವರ್ಗಕ್ಕೆ ಸೇರಿಸಿಕೊಳ್ಳಲು ಒಪ್ಪದ ಇಂದ್ರನ ವಿರುದ್ಧವೇ ಸಿಡಿದೆದ್ದು ತ್ರಿಂಶಂಕು ಸ್ವರ್ಗವನ್ನೇ ಸೃಷ್ಟಿಸಿದ್ದಲ್ಲದೇ, ಇಂದ್ರ ಪಟ್ಟವನ್ನೇ ಪಡೆಯಬೇಕೆಂದು ನಿರ್ಧರಿಸಿದ ವಿಶ್ವಾಮಿತ್ರರು ಘನ ಘೋರ ತಪಸ್ಸನ್ನು ಮಾಡುವುದನ್ನು ಗಮನಿಸಿದ ಇಂದ್ರ, ಭಯಭೀತನಾಗಿ ಪರಮ ಸುಂದರಿಯಾದ ಮೇನಕೆಯನ್ನು ವಿಶ್ವಾಮಿತ್ರರ ತಪ್ಪಸ್ಸನ್ನು ಭಂಗ ಮಾಡಲು ಕಳುಹಿಸಿ ಯಶಸ್ವಿಯಾಗಿದ್ದಲ್ಲದೇ, ಅವರಿಬ್ಬರ ದಾಂಪತ್ಯದ ಫಲವಾಗಿ ಶಕುಂತಲೆಯ ಜನನಕ್ಕೆ ಕಾರಣೀಭೂತವಾಗುತ್ತದೆ.… Read More ಮದನ ಮತ್ತು ಮಾನಿನಿ

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ

ಕನ್ನಡಾಭಿಮಾನಿ ಬಾಲಕೃಷ್ಣ

ಅಭಿನಯ ಎಲ್ಲರೂ ಮಾಡುವುದಕ್ಕಾಗುವುದಿಲ್ಲ. ಪ್ರತಿಯೊಂದು ಪಾತ್ರದಲ್ಲೂ ಅಭಿನಯಿಸಬೇಕಾದರೆ, ಆ ನಟನಿಗೆ ಆ ಪಾತ್ರದ ಸಂಫೂರ್ಣ ಪರಿಚಯವಿರಬೇಕು. ಆತ ತನ್ನ ಸಹನಟನ ಸರಿ ಸಮಾನಾಗಿ ಸೇರಿಗೆ ಸವ್ವಾ ಸೇರು ಎನ್ನುವಂತೆ ಕೇವಲ ಸಂಭಾಷಣೆಯಲ್ಲದೇ ಆಂಗೀಕವಾಗಿಯೂ ಅಭಿನಯಿಸ ಬೇಕಾಗುತ್ತದೆ. ಹಾಗೆ ಆಭಿನಯಿಸಲು ಪಾತ್ರದಲ್ಲಿ ತನ್ಮಯತೆ ಮತ್ತು ನಿರ್ದೇಶಕರು ಹೇಳಿಕೊಟ್ಟದ್ದನ್ನು ಅರ್ಥೈಸಿಕೊಂಡು ಅವರು ಹೇಳಿದ ರೀತಿಯಲ್ಲಿಯೇ ನಟಿಸಿ ತೋರಿಸ ಬೇಕಾಗುತ್ತದೆ. ಈ ರೀತಿಯಾಗಿ ಮಾಡಲು ಕಣ್ಣು ಕಿವಿ ಮತ್ತು ನಾಲಿಗೆ ಚುರುಕಾಗಿರ ಬೇಕು. ಆದರೆ ಕನ್ನಡ ಚಲನ ಚಿತ್ರ ಕಂಡ ಒಬ್ಬ… Read More ಕನ್ನಡಾಭಿಮಾನಿ ಬಾಲಕೃಷ್ಣ

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು