ಉಗಿಬಂಡಿ The Food Station

ಬೆಂಗಳೂರಿನಿಂದ ಬೆಳ್ಳೂರಿನ ಮಾರ್ಗದಲ್ಲಿ ಕುಣಿಗಲ್ಲಿನ ಬಿದನಗೆರೆ ಬೈಪಾಸ್(ಜಾನ್ಸನ್ ಟೈಲ್ಸ್ ) ನಿಂದ ಸುಮಾರು 2 ಕಿಮೀ ದೂರದಲ್ಲಿ ಹೈವೇಯ ಬಲಗಡೆ The Ugibandi Food Station ಎಂಬ ರೈಲ್ವೇ ಇಂಜಿನ್, ರೈಲ್ವೇ ನಿಲ್ದಾಣ ಮತ್ತು ಹವಾನಿಯಂತ್ರಿತ ಭೋಗಿಯಿರುವ ವಿನೂತನ ಶೈಲಿಯ ಹೋಟೆಲ್ ಇತ್ತೀಚೆಗೆ ಅರಂಭವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಉಗಿಬಂಡಿ The Food Station

ಉಡುಪಿ ಉಪಹಾರ ಗೃಹ

ಉಡುಪಿ ಎಂದೊಂಡನೆಯೇ ಆಸ್ಥಿಕರಿಗೆ ಉಡುಪಿಯ ಶ್ರೀ ಕೃಷ್ಣ, ಅಷ್ಟ ಮಠಗಳು, ಸಂಸ್ಕೃತ-ವೇದ ಪಾಠ ಶಾಲೆಗಳು,  ರಥದ ಬೀದಿ, ಇತ್ತೀಚೆಗೆ ಅಗಲಿದ ಪೇಜಾವರ ಶ್ರೀಗಳು ನೆನಪಿಗೆ ಬಂದರೆ, ವಾಣಿಜ್ಯೋದ್ಯಮಿಗಳಿಗೆ  ಅವಿಭಜಿತ ದಕ್ಷಿಣ ಕರ್ನಾಟಕದ ಭಾಗವಾಗಿ ಉಡುಪಿಯಿಂದಲೇ ಆರಂಭವಾಗಿ ಇಂದು ಹಲವಾರು ರಾಷ್ಟ್ರೀಕೃತ ಬ್ಯಾಂಕಿನೊಂದಿಗೆ ವಿಲೀನವಾಗಿ ಹೋದ, ಕೆನರ ಬ್ಯಾಂಕ್, ವಿಜಯ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕುಗಳು ನೆನಪಾಗುತ್ತದೆ.  ಇನ್ನು  ತಿಂಡಿ ಪೋತರಿಗೆ ಉಡುಪಿ ಎಂದೊಡನೆ ನೆನಪಿಗೆ ಬರುವುದೇ, ಉಡುಪಿ ಶ್ರೀಕೃಷ್ಣ ಮಠದ ಭೋಜನಶಾಲೆ ಮತ್ತು  ರಾಜ್ಯಾದ್ಯಂತ, ದೇಶಾದ್ಯಂತ… Read More ಉಡುಪಿ ಉಪಹಾರ ಗೃಹ

ಬೆಂಗಳೂರಿನ ಎಂ ಜಿ ರಸ್ತೆಯ ಬೃಂದಾವನ್ ಹೋಟೆಲ್

ಬೆಂಗಳೂರಿನ ಎಂ.ಜಿ. ರಸ್ತೆಯ ಪಾಶ್ಚಾತ್ಯ ಸಂಸ್ಕೃತಿಯ ನಡುವೆಯೂ ಅಪ್ಪಟ ದಕ್ಷಿಣ ಭಾರತೀಯ ಆಹಾರಗಳ ಜೊತೆಗೆ ರುಚಿಕರವಾದ ಊಟವನ್ನು ಜನಸಾಮಾನ್ಯರಿಗೂ ಕೈ ಗೆಟುಕುವ ಬೆಲೆಯಲ್ಲಿ ಉಣಬಡಿಸುತ್ತಿದ್ದಂತಹ ಗತ ವೈಭವದ ಬೃಂದಾವನ್ ಹೋಟೆಲ್ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೆಂಗಳೂರಿನ ಎಂ ಜಿ ರಸ್ತೆಯ ಬೃಂದಾವನ್ ಹೋಟೆಲ್

ಪುರೋಹಿತರ ಪರದಾಟ

ಬಹಳ ದಿನಗಳ ತರುವಾಯು ಮಕ್ಕಳು ಮನೆಯಲ್ಲಿ ಅಮ್ಮಾ ಮಾಡುವ ರುಚಿ ರುಚಿಯ ಅಡುಗೆಯ ಹೊರತಾಗಿಯೂ ಹೊರಗಡೆ ಊಟ ಮಾಡುವ ಆಸೆ ವ್ಯಕ್ತ ಪಡಿಸಿದ ಕಾರಣ ಕಳೆದ ವಾರಾಂತ್ಯದಲ್ಲಿ ಮಡದಿ, ಮಗಳು ಮತ್ತು ಮಗನೊಂದಿಗೆ ರಾತ್ರಿ ಊಟಕ್ಕೆಂದು ಸ್ವಲ್ಪ ದೂರದ ಹೊಸಾ ಹೋಟೆಲ್ ಒಂದಕ್ಕೆ ಹೋದೆವು. ಭಾನುವಾರವಾದ್ದರಿಂದ ಹೋಟೇಲ್ ಬಹುತೇಕ ಭರ್ತಿಯಾಗಿತ್ತು ಸ್ವಲ್ಪ ಮಬ್ಬಾಗಿಯೂ ಇತ್ತು. ಹಾಗಾಗಿ ಖಾಲಿ ಇರುವ ಜಾಗವನ್ನು ಹುಡುಕುತ್ತಿದ್ದಾಗ, ಒಬ್ಬರನ್ನು ನೋಡಿದ ತಕ್ಷಣ, ಎಲ್ಲೋ ನೋಡಿದ ನೆನಪು ಆದರೆ ಸರಿಯಾಗಿ ಸ್ಮೃತಿಗೆ ಬರುತ್ತಿರಲಿಲ್ಲ. ಅವರೂ… Read More ಪುರೋಹಿತರ ಪರದಾಟ

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು